ಮಾರ್ಚ್‌ 20ಕ್ಕೆ ಕಾಂಗ್ರೆಸ್‌ನಿಂದ 2ನೇ ಪಟ್ಟಿ ಬಿಡುಗಡೆ: ಸಂಭಾವ್ಯ ಅಭ್ಯರ್ಥಿಗಳು ಯಾರು?

Date:

ಕರ್ನಾಟಕದಿಂದ ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿ ಘೋಷಣೆ ನಾಳೆ(ಮಾ.20) ಆಗಲಿದೆ. ಇದಕ್ಕೂ ಮೊದಲು ಇಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ಆರಂಭವಾಗಿದ್ದು, ಈ ಸಭೆಯಲ್ಲಿ ರಾಜ್ಯವಾರು ಅಭ್ಯರ್ಥಿಗಳ ಹೆಸರನ್ನು ಬಹುತೇಕವಾಗಿ ಅಂತಿಮಗೊಳಿಸಲಾಗಿದೆ. ಸದ್ಯ ಬಿಡುಗಡೆ ಮಾಡಿರುವ ಕರ್ನಾಟಕದ ಸಂಭಾವ್ಯ ಅಭ್ಯರ್ಥಿಗಳ ಹೆಸರು ಬಹುತೇಕ ಹೊರಬಿದ್ದಿದೆ.

ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್​ನ ಹಿರಿಯ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಕೆಸಿ ವೇಣುಗೋಪಾಲ್, ಅಂಬಿಕಾ ಸೋನಿ, ಸಲ್ಮಾನ್ ಖುರ್ಷಿದ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ.

ಬೆಂಗಳೂರು ಉತ್ತರಕ್ಕೆ ರಾಜೀವ್ ಗೌಡ, ಬೆಂಗಳೂರು ದಕ್ಷಿಣ ಸೌಮ್ಯಾ ರೆಡ್ಡಿ, ಬೆಂಗಳೂರು ಸೆಂಟ್ರಲ್‌ಗೆ ಮನ್ಸೂರ್ ಆಲಿಖಾನ್, ಮೈಸೂರು ಕ್ಷೇತ್ರಕ್ಕೆ ಲಕ್ಷ್ಮಣ್, ರಾಯಚೂರು ಕ್ಷೇತ್ರಕ್ಕೆ ಕುಮಾರ ನಾಯಕ್, ಕೊಪ್ಪಳಕ್ಕೆ ರಾಜಶೇಖರ ಹಿಟ್ನಾಳ್, ಬೀದರ್‌ಗೆ ಸಾಗರ್ ಖಂಡ್ರೆ, ದಾವಣಗೆರೆಗೆ ಪ್ರಭಾ ಮಲ್ಲಿಕಾರ್ಜುನ, ಉತ್ತರ ಕನ್ನಡಕ್ಕೆ ಅಂಜಲಿ ನಿಂಬಾಳ್ಕರ್, ದಕ್ಷಿಣ ಕನ್ನಡಕ್ಕೆ ಪದ್ಮರಾಜ್, ಚಿತ್ರದುರ್ಗಕ್ಕೆ ಚಂದ್ರಪ್ಪ, ಕಲಬುರಗಿಗೆ ರಾಧಾಕೃಷ್ಣ ದೊಡ್ಡಮನಿ, ಧಾರವಾಡಕ್ಕೆ ವಿನೋದ ಅಸೂಟಿ, ಬಾಗಲಕೋಟೆಗೆ ಸಂಯುಕ್ತ ಪಾಟೀಲ್, ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗಡೆ, ಬೆಳಗಾವಿಗೆ ಮೃಣಾಲ್ ಹಾಗೂ ಚಿಕ್ಕೋಡಿಗೆ ಪ್ರಿಯಾಂಕಾ ಜಾರಕಿಹೊಳಿ ಸಂಭ್ಯಾವ್ಯ ಅಭ್ಯರ್ಥಿಗಳು ಎಂಬ ಮಾಹಿತಿ ಹೊರಬಿದ್ದಿದೆ. ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ ಕ್ಷೇತ್ರ ಅಭ್ಯರ್ಥಿಗಳ ಇತ್ಯರ್ಥವಾಗಬಹುದು ಎಂದು ಹೇಳಲಾಗುತ್ತಿದ್ದರೂ, ಕೋಲಾರ ಕ್ಷೇತ್ರಕ್ಕೆ ಕೋಲಾರ ಎಲ್.ಹನುಮಂತಯ್ಯ ಅವರ ಹೆಸರು ಕೇಳಿಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಣಿಬೆನ್ ಠಾಕೂರ್ ಎಂಬ ಗುಜರಾತಿನ ‘ದೈತ್ಯಸಂಹಾರಿ’

ಗುಜರಾತ್ ತನ್ನದೇ ಪಾಳೆಯಪಟ್ಟು ಎಂಬ ಬಿಜೆಪಿಯ ಭಾರೀ ದುರಹಂಕಾರಕ್ಕೆ ಪೆಟ್ಟು ನೀಡಿರುವಾಕೆ...

ಬಿಜೆಪಿ ಪಿಎಂ ಮೋದಿಯನ್ನು ಬದಲಿಸಿ, ಹೊಸ ನಾಯಕರನ್ನು ಆಯ್ಕೆ ಮಾಡಬೇಕು: ಟಿಎಂಸಿ ನಾಯಕಿ

ಬಿಜೆಪಿ ಹೊಸ ನಾಯಕರನ್ನು ಆಯ್ಕೆ ಮಾಡಿಕೊಳ್ಳಬೇಕು ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು...

ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ದೇವರ ಹೆಸರಿನಲ್ಲಿ...

ಬಿಜೆಪಿಗೆ ಮತ ಹಾಕದ ಮರಾಠರ ಮೇಲೆ ಹಲ್ಲೆ; ಕ್ರಮಕ್ಕೆ ಮರಾಠ ಮೀಸಲಾತಿ ಹೋರಾಟಗಾರ ಒತ್ತಾಯ

ಮಹಾರಾಷ್ಟ್ರದ ಬೀಡ್ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕದ ಮರಾಠರ...