ಮತದಾನದ ವಿವರ ತಡವಾಗಿ ಪ್ರಕಟ | ಆಯೋಗಕ್ಕೆ ಪತ್ರ ಬರೆದ ಪ್ರಮುಖ ಸಾಮಾಜಿಕ ಕಾರ್ಯಕರ್ತರು

Date:

ಲೋಕಸಭೆ ಚುನಾವಣೆಯ ಮೊದಲ ಮತ್ತು ಎರಡನೇ ಹಂತದ ಮತದಾನದ ಅಂತಿಮ ಅಂಕಿ ಅಂಶಗಳನ್ನು ಬಹಳ ತಡವಾಗಿ ಬಿಡುಗಡೆಗೊಳಿಸಿರುವುದು ಮತ್ತು ಚುನಾವಣಾ ಆಯೋಗದ ವೆಬ್‌ಸೈಟ್‌ನಿಂದ ನೋಂದಾಯಿತ ಮತದಾರರ ಮಾಹಿತಿ ಕಾಣೆಯಾಗಿರುವುದು ಅನುಮಾನಗಳನ್ನು ಹುಟ್ಟು ಹಾಕಿತ್ತು.

- Advertisement -

ಈ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಸಾಮಾಜಿಕ ಕಾರ್ಯಕರ್ತರು, ವಕೀಲರು ಮತ್ತು ನಿವೃತ್ತ ಸರ್ಕಾರಿ ಅಧಿಕಾರಿಗಳು, ಮತದಾನದ ಪ್ರಮಾಣೀಕೃತ ದಾಖಲೆಯನ್ನು ತಕ್ಷಣವೇ ಬಹಿರಂಗಪಡಿಸುವಂತೆ ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಪತ್ರಕ್ಕೆ ಸುಪ್ರೀಂ ಕೋರ್ಟ್‌ ವಕೀಲರಾದ ಪ್ರಶಾಂತ್ ಭೂಷಣ್, ಸಾಮಾಜಿಕ ಕಾರ್ಯಕರ್ತರಾದ ಅಂಜಲಿ ಭಾರಧ್ವಾಜ್, ಯೋಗೇಂದ್ರ ಯಾದವ್, ಖ್ಯಾತ ಸಾಹಿತಿಗಳು, ನಿವೃತ್ತ ಐಎಎಸ್ ಅಧಿಕಾರಿಗಳು ಸೇರಿದಂತೆ ಹಲವು ಮಂದಿ ಸಹಿ ಹಾಕಿದ್ದಾರೆ.

ಚುನಾವಣಾ ಆಯೋಗಕ್ಕೆ ತಮ್ಮ ಪತ್ರದಲ್ಲಿ, ಸದ್ಯ ದೇಶದಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಗಳ ಮೊದಲ ಎರಡು ಹಂತಗಳಲ್ಲಿ ಮತದಾನದ ಅಂಕಿ-ಅಂಶಗಳಲ್ಲಿ ದೊಡ್ಡ ಏರಿಳಿತದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರತಿ ಮತಗಟ್ಟೆಯ ಮತದಾನದ ವಿವರಗಳನ್ನು ಫಾರ್ಮ್ 17ಸಿ ಭಾಗ 1ರಲ್ಲಿರುವಂತೆ ಮತದಾರರ ಮತದಾನದ ಪ್ರಮಾಣೀಕೃತ ದಾಖಲೆಯನ್ನು ತಕ್ಷಣವೇ ಬಹಿರಂಗಪಡಿಸುವಂತೆ ಒತ್ತಾಯಿಸಿದ್ದಾರೆ.

“ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ನಂಬಿಕೆಯನ್ನು ಹೆಚ್ಚಿಸಲು, ಇನ್ನು ಉಳಿದಿರುವ ಹಂತಗಳಲ್ಲಿ, ಈ ಮಾಹಿತಿಯನ್ನು ಮತದಾನ ಮುಗಿದ 48 ಗಂಟೆಗಳ ಒಳಗೆ ಇಸಿಐ ವೆಬ್‌ಸೈಟ್‌ನಲ್ಲಿ ಸಾರ್ವಜನಿಕವಾಗಿ ಪ್ರದರ್ಶಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಫಾರ್ಮ್‌ಗಳ ಸ್ಕ್ಯಾನ್ ಮಾಡಿದ ಪ್ರತಿಯನ್ನು ಅಪ್‌ಲೋಡ್ ಮಾಡುವುದರ ಜೊತೆಗೆ, ಕ್ಷೇತ್ರ ಮತ್ತು ಮತಗಟ್ಟೆವಾರು ಮತದಾರರ ಸಂಪೂರ್ಣ ಸಂಖ್ಯೆಯ ಅಂಕಿ-ಅಂಶಗಳ ಪಟ್ಟಿಯನ್ನು ಇಸಿಐ ವೆಬ್‌ಸೈಟ್‌ನಲ್ಲಿ ಸಾರ್ವಜನಿಕವಾಗಿ ಪ್ರದರ್ಶಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಮತದಾರರ ವಿಶ್ವಾಸವನ್ನು ಹೆಚ್ಚಿಸಲು ಆಯೋಗವು ಈ ಪ್ರಮುಖ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಮತ್ತು ಸೂಕ್ತ ಕ್ರಮಗಳನ್ನು ತುರ್ತಾಗಿ ತೆಗೆದುಕೊಳ್ಳುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಪತ್ರದಲ್ಲಿ ಸಾಮಾಜಿಕ ಕಾರ್ಯಕರ್ತರು ಉಲ್ಲೇಖಿಸಿದ್ದಾರೆ.

ಇದೇ ವಿಚಾರವಾಗಿ, ಈ ಹಿಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಾಯಕರಿಗೆ ವಿವರವಾದ ಪತ್ರವೊಂದನ್ನು ಬರೆದಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

ಲೋಕಸಭೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆಡಳಿತಾರೂಢ ಮಿತ್ರ ಪಕ್ಷವಾದ ತೆಲುಗು...

140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಕ್ಕಿಂತ ಎಣಿಕೆಯಾದ ಮತಗಳ ಸಂಖ್ಯೆ ಹೆಚ್ಚು: ಏನು ಈ ವ್ಯತ್ಯಾಸ?

2024ರ ಲೋಕಸಭೆ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿವೆ. ಮೂರನೇ ಬಾರಿಗೆ ಮೋದಿ ನೇತೃತ್ವದಲ್ಲಿ...