ಲೋಕಸಭೆ ಚುನಾವಣೆ | ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿಲ್ಲ ಮಾಜಿ ಸಿಎಂ ಉಮಾ ಭಾರತಿ!

Date:

ಲೋಕಸಭೆ ಚುನಾವಣೆಗೆ ಮಧ್ಯಪ್ರದೇಶ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಹೆಸರು ಕಾಣಿಸಿಕೊಂಡಿಲ್ಲ. ಆದರೆ ಬಿಜೆಪಿಯು ಇತ್ತೀಚೆಗೆ ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಯಾದ ಸುರೇಶ್ ಪಚೌರಿ ಹೆಸರು ಅವರನ್ನು ಸ್ಟಾರ್ ಪ್ರಚಾರಕರನ್ನಾಗಿಸಿದೆ.

ಆಡಳಿತರೂಢ ಪಕ್ಷ ಬಿಜೆಪಿಯು ಮಂಗಳವಾರ ರಾತ್ರಿಯೇ ಮುಂದಿನ ಲೋಕಸಭೆ ಚುನಾವಣೆಗೆ ಮಧ್ಯಪ್ರದೇಶದ 40 ಸ್ಟಾರ್ ಕ್ಯಾಂಪೇನರ್‌ಗಳ ಹೆಸರನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೆಸರು ಕೂಡಾ ಇದೆ. ಆದರೆ ಉಮಾ ಭಾರತಿ ಹೆಸರು ಕಾಣಿಸಿಕೊಂಡಿಲ್ಲ.

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ | ಕಣದಿಂದ ದೂರಸರಿದ ಹಲವು ಹಾಲಿ ಬಿಜೆಪಿ ಸಂಸದರು!

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2003ರಲ್ಲಿ ಬಿಜೆಪಿಯು ಮಧ್ಯಪ್ರದೇಶದಲ್ಲಿ ಗೆಲುವು ಕಾಣುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ ಉಮಾ ಭಾರತಿ ಅವರು 2023ರ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿಯೂ ಕಾಣಿಸಿಕೊಂಡಿಲ್ಲ. ಈ ತಿಂಗಳ ಆರಂಭದಲ್ಲಿ ಬಿಜೆಪಿಯ ಹಿರಿಯ ನಾಯಕರೊಬ್ಬರು, “ಉಮಾ ಭಾರತಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ಬದಲಾಗಿ ಗಂಗಾ ನದಿಯ ಪುನರುಜ್ಜೀವನಕ್ಕಾಗಿ ಕೆಲಸ ಮಾಡಲಿದ್ದಾರೆ. ಆದರೆ ರಾಜಕೀಯದಿಂದ ಅವರು ನಿವೃತ್ತಿ ಪಡೆಯುವುದಿಲ್ಲ” ಎಂದು ಹೇಳಿದ್ದರು.

ಇನ್ನು ಮದ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯ್ ಪಟೇಲ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಲೋಕಸಭೆ ಚುನಾವಣೆಯಲ್ಲಿ ಮದ್ಯಪ್ರದೇಶದಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿದ್ದಾರೆ.

ಮಧ್ಯಪ್ರದೇಶದ 29 ಲೋಕಸಭೆ ಕ್ಷೇತ್ರಗಳಿಗೆ ನಾಲ್ಕು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 19, ಏಪ್ರಿಲ್ 26, ಮೇ 7 ಮತ್ತು ಮೇ 13 ರಂದು ಚುನಾವಣೆ ನಡೆಯಲಿದೆ. ಈವರೆಗೆ ಕಾಂಗ್ರೆಸ್ 22 ಕ್ಷೇತ್ರಗಳ ಅಭ್ಯರ್ಥಿ ಘೋಷಿಸಿದ್ದರೆ, ಬಿಜೆಪಿ ಎಲ್ಲ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ 29 ಕ್ಷೇತ್ರಗಳ ಪೈಕಿ 28ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಒಂದು ಕ್ಷೇತ್ರ ಕಾಂಗ್ರೆಸ್ ಪಾಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...

ದಕ್ಷಿಣ ಕನ್ನಡ | 100% ಮತದಾನ ದಾಖಲಿಸಿದ ಕುಗ್ರಾಮ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆದಿದೆ. ದಕ್ಷಿಣ...

ನಾಮಪತ್ರ ತಿರಸ್ಕೃತಗೊಂಡ ಸೂರತ್ ಅಭ್ಯರ್ಥಿ ನೀಲೇಶ್ ಕಾಂಗ್ರೆಸ್‌ನಿಂದ ಅಮಾನತು

ಸೂರತ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡು ಬಿಜೆಪಿಯ ಮುಖೇಶ್...

ಹದಗೆಟ್ಟ ರಸ್ತೆ| 600ಕ್ಕೂ ಹೆಚ್ಚು ತ್ರಿಪುರಾ ಬುಡಕಟ್ಟು ಮತದಾರರಿಂದ ಚುನಾವಣೆ ಬಹಿಷ್ಕಾರ

ತ್ರಿಪುರಾ ಪೂರ್ವ ಲೋಕಸಭಾ ಕ್ಷೇತ್ರದ ಭಾಗವಾದ ಧಲೈ ಜಿಲ್ಲೆಯ ದೂರದ ಬುಡಕಟ್ಟು...