ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

Date:

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು ತಡೆಗಟ್ಟುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಾಣಿಜ್ಯ ಮಳಿಗೆಗಳ ಕಾರ್ಯನಿರ್ವಹಣೆಯ ಸಮಯಕ್ಕೆ ನಿರ್ಬಂಧ ವಿಧಿಸಲಾಗಿದೆ.

- Advertisement -

ನಗರ ಪೊಲೀಸ್ ಆಯುಕ್ತ ಸುದೀರ್ ಕುಮಾರ್ ರೆಡ್ಡಿ ಅವರು ನವೆಂಬರ್ 23ರಂದು ಈ ಕುರಿತು ಆದೇಶ ಹೊರಡಿಸಿದ್ದು, ಪ್ರತಿದಿನ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ಎಲ್ಲಾ ವಾಣಿಜ್ಯ ಮಳಿಗೆಗಳನ್ನು ಮುಚ್ಚುವಂತೆ ಸೂಚಿಸಿದ್ದಾರೆ. ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಅಂಗಡಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಟೀ ಸ್ಟಾಲ್‌ಗಳು, ಪಾನ್ ಅಂಗಡಿಗಳು ಸೇರಿದಂತೆ ಎಲ್ಲಾ ವಾಣಿಜ್ಯ ಸಂಸ್ಥೆಗಳಿಗೆ ಈ ನಿರ್ಬಂಧ ಅನ್ವಯವಾಗಲಿದೆ.

ಆದರೆ ಆಸ್ಪತ್ರೆಗಳು, ಔಷಧ ಮಳಿಗೆಗಳು, ತುರ್ತು ಸೇವೆಗಳು ಹಾಗೂ ಅಗತ್ಯ ಸಾರ್ವಜನಿಕ ಉಪಯುಕ್ತ ಸೇವೆಗಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ. ಅಲ್ಲದೆ, ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ವಿಶೇಷ ಅನುಮತಿ ಪಡೆದಿರುವ ಸಂಸ್ಥೆಗಳಿಗೂ ವಿನಾಯಿತಿ ಅನ್ವಯಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 15 ಜಿಲ್ಲೆಗಳಲ್ಲಿ ಇನ್ನೂ 5 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ...

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ AI ತಂತ್ರಜ್ಞಾನದ ನೆರವು: ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು ಕೃತಕ ಬುದ್ಧಿಮತ್ತೆ...

ದೆಹಲಿ | ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರ ಬಂಧನ

ಪೂರ್ವ ದೆಹಲಿಯ ಪ್ರೀತ್ ವಿಹಾರ್ ಪ್ರದೇಶದ ಕೆಫೆಯೊಂದರಲ್ಲಿ ಮಂಗಳವಾರ ನಸುಕಿನ ವೇಳೆ...