ರಾಹುಲ್‌ ಗಾಂಧಿಗೆ ಬೆಂಬಲ; ಕಪ್ಪು ಬಟ್ಟೆ ಧರಿಸಿ ಒಗ್ಗಟ್ಟು ಪ್ರದರ್ಶಿಸಿದ ವಿಪಕ್ಷಗಳು

Date:

ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿದ ಮತ್ತು ಅದಾನಿ ಕುರಿತ ಹಿಂಡನ್‌ಬರ್ಗ್ ಸಂಶೋಧನಾ ವರದಿ ಬಹಿರಂಗಪಡಿಸಿದ ಅಂಶಗಳ ತನಿಖೆಗೆ ಸಂಬಂಧಿಸಿ ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆಗೆ ಮುಂದಾಗಿದ್ದು, ಉಭಯ ಸದನಗಳ ಕಲಾಪಗಳನ್ನು ಸೋಮವಾರ ಮತ್ತೆ ಮುಂದೂಡಲಾಗಿದೆ. ರಾಜ್ಯಸಭೆಯನ್ನು ಮಧ್ಯಾಹ್ನ 2 ಗಂಟೆಯವರೆಗೆ ಮತ್ತು ಲೋಕಸಭೆ ಕಲಾಪವನ್ನು ಸಂಜೆ 4 ಗಂಟೆಯವರೆಗೆ ಮುಂದೂಡಲಾಗಿದೆ.

ಸೋಮವಾರ ಬೆಳಗ್ಗೆ 11 ಗಂಟೆಗೆ ಸಂಸತ್‌ ಕಲಾಪ ಆರಂಭವಾಗುತ್ತಲೇ ಪ್ರತಿಪಕ್ಷಗಳು ಒಗ್ಗಟ್ಟಾಗಿ ಪ್ರತಿಭಟನೆಯ ಮೂಲಕ ಬಜೆಟ್ ಅಧಿವೇಶನಕ್ಕೆ ಮತ್ತೆ ಅಡ್ಡಿಪಡಿಸಿದವು. ರಾಹುಲ್‌ ಗಾಂಧಿ ಅನರ್ಹತೆ ವಿಚಾರದಲ್ಲಿ ಕಾಂಗ್ರೆಸ್‌ನ ಸಂಸದರು ಕಪ್ಪು ಬಟ್ಟೆ ಧರಿಸಿ ಕಲಾಪಕ್ಕೆ ಆಗಮಿಸಿದ್ದರು. ಇದಲ್ಲದೆ, ಅದಾನಿ ವಿವಾದದ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಹಲವು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಕೇಂದ್ರದ ವಿರುದ್ಧದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರವಾಗಿಸಲು ಪ್ರತಿಪಕ್ಷಗಳು ನಿರ್ಧಿರಿಸಿದ್ದು, ಈ ಕುರಿತು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರಿದಂತೆ 17 ಪ್ರಮುಖ ವಿಪಕ್ಷಗಳ ನಾಯಕರು ಭಾಗವಹಿಸಿದ್ದರು. ಬಳಿಕ ವಿರೋಧ ಪಕ್ಷದ ನಾಯಕರು ಸಂಸತ್‌ ಭವನದಿಂದ ವಿಜಯ್ ಚೌಕ್‌ಗೆ ತೆರಳಿ ಜಂಟಿ ʻಸತ್ಯಮೇಯ ಜಯತೆʼ ಪೋಸ್ಟರ್‌ ಹಿಡಿದು ಪ್ರತಿಭಟನೆ ನಡೆಸಿದರು. ತೃಣಮೂಲ ಕಾಂಗ್ರೆಸ್ ಸಂಸದರು ಸೋಮವಾರ ಮೊದಲ ಬಾರಿಗೆ ಕಾಂಗ್ರೆಸ್ ನೇತೃತ್ವದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಈ ಸಂಸತ್ ಅಧಿವೇಶನದ ಸಂದರ್ಭ ವಿಪಕ್ಷಗಳ ಒಗ್ಗಟ್ಟಿನ ವಿರೋಧದಿಂದ ಈವರೆಗೆ ಟಿಎಂಸಿ ದೂರವೇ ಉಳಿದಿತ್ತು.

ವಿಪಕ್ಷಗಳಿಗೆ ಧನ್ಯವಾದ ಹೇಳಿದ ಖರ್ಗೆ

ರಾಹುಲ್ ಗಾಂಧಿಗೆ ಬೆಂಬಲ ನೀಡಿದ ಎಲ್ಲಾ ವಿರೋಧ ಪಕ್ಷಗಳಿಗೆ ಮಲಿಕಾರ್ಜುನ ಖರ್ಗೆ ಧನ್ಯವಾದ ತಿಳಿಸಿದ್ದಾರೆ. ಎಲ್ಲಾ ಸ್ವಾಯತ್ತ ಸಂಸ್ಥೆಗಳನ್ನು ಪ್ರಧಾನಿ ಮೋದಿ ಕೊಲ್ಲುತ್ತಿದ್ದಾರೆ. ಪ್ರಧಾನಿಗೆ ತಲೆಬಾಗದವರನ್ನು ಕೇಂದ್ರ ಏಜೆನ್ಸಿಗಳನ್ನು ಬಳಸಿ ಬೇಟೆಯಾಡುತ್ತಿದ್ದಾರೆ. ನರೇಂದ್ರ ಮೋದಿ ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಜನರಿಗೆ ತೋರಿಸಲು ಮತ್ತು ಹೇಳಲು ನಾವು ಬಯಸುತ್ತೇವೆ. ಮೂರು ವರ್ಷಗಳಲ್ಲಿ ಅದಾನಿ ಆದಾಯ ₹12 ಲಕ್ಷ ಕೋಟಿಯಷ್ಟು ಹೆಚ್ಚಾಗಿದೆ.  ಇದು ಹೇಗೆ ಸಾಧ್ಯ? ರಾಹುಲ್ ಗಾಂಧಿಯ ಜೊತೆ ಎಲ್ಲಾ ಪ್ರತಿಪಕ್ಷಗಳು ಈ ಪ್ರಶ್ನೆಯನ್ನು ಮುಂದಿಟ್ಟು, ಈ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸುತ್ತಲೇ ಬಂದಿದ್ದೇವೆ  ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಕರೂಪ ನಾಗರಿಕ ಸಂಹಿತೆ ಅನುಷ್ಠಾನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

ಕೇಂದ್ರ ಸರ್ಕಾರ ಜಾರಿಗೊಳಿಸಲಿರುವ ಏಕರೂಪ ನಾಗರಿಕ ಸಂಹಿತೆ ಕಾಯ್ದೆಯನ್ನು ತಡೆಯಲು ಯಾರಿಂದಲೂ...

ಬೆಂಗಳೂರು ಟೆಕ್ ಸಮ್ಮಿಟ್ 2023 | ಜೈವಿಕ ತಂತ್ರಜ್ಞಾನ ಕಾರ್ಯನೀತಿಯ ಪರಿಷ್ಕೃತ ಕರಡು ಬಿಡುಗಡೆ

ಬೆಂಗಳೂರು ಅರಮನೆಯಲ್ಲಿ 'ಬ್ರೇಕಿಂಗ್ ದಿ ಬೌಂಡರೀಸ್' ಘೋಷವಾಕ್ಯದ 26ನೇ ‘ಬೆಂಗಳೂರು ತಂತ್ರಜ್ಞಾನ...

ಮಸೂದೆ ವಿಳಂಬ: ಸಿಎಂ, ಸಚಿವರನ್ನು ಭೇಟಿಯಾಗುವಂತೆ ಕೇರಳ ರಾಜ್ಯಪಾಲರಿಗೆ ಸುಪ್ರೀಂ ಸೂಚನೆ

ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಎಂಟು ಮಸೂದೆಗಳ ಬಗ್ಗೆ...

ಕಾಗಿನೆಲೆ ಪೀಠ ಒಂದು ಜಾತಿಯ ನೆಲೆ ಅಲ್ಲ, ಎಲ್ಲ ಶೋಷಿತ ಜಾತಿ-ಸಮುದಾಯಗಳ ನೆಲೆ: ಸಿದ್ದರಾಮಯ್ಯ

ಕನಕದಾಸರು ಜಾತಿ‌, ಅನಕ್ಷರತೆಯ ಅಸಮಾನತೆ ಹೋಗಲಾಡಿಸಲು ಹೋರಾಡಿದರು ಯಾವ ಧರ್ಮವೂ...