ʼಗೋವುʼ ರಾಷ್ಟ್ರೀಯ ಪ್ರಾಣಿಯೆಂದು ಘೋಷಿಸಲಿ: ಕೆ.ಅಶ್ರಫ್

Date:

ದೇಶಾದ್ಯಂತ ಗೋವಿನ ಬಗ್ಗೆ ನಾನಾ ನಿಲುವು ಸೃಷ್ಟಿ ಆಗಿದ್ದು, ಮುಸ್ಲಿಮ್ ಸಮುದಾಯ ಗೋವʼನ್ನು ರಾಷ್ಟ್ರೀಯ ಪ್ರಾಣಿಯೆಂದು ಘೋಷಿಸಲು ಆಗ್ರಹಿಸಿದೆ ಆದರೆ, ಕೇಂದ್ರ ಸರ್ಕಾರ ಗೋಹತ್ಯೆ ನಿಷೇಧ ಪೂರ್ಣ ಪ್ರಮಾಣದಲ್ಲಿಲ್ಲ ಎಂಬ ದ್ವಂದ ಹೇಳಿಕೆ ನೀಡಿದೆ. ಈ ಹೇಳಿಕೆ ದೇಶದೆಲ್ಲೆಡೆ ಗೊಂದಲ ಸೃಷ್ಟಿಸಿದ್ದು, ಈ ಬಗ್ಗೆ ಹಾಲಿ ಗೋರಕ್ಷಕರು ಸರ್ಕಾರವನ್ನು ಪ್ರಶ್ನಿಸಬೇಕು ಎಂದು ಮಾಜಿ ಮೇಯರ್‌, ದ.ಕ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ಹೇಳಿದ್ದಾರೆ.

ಗೋ ಹತ್ಯೆ ನಿಷೇಧದ ಕುರಿತ ಕೇಂದ್ರ ಸರ್ಕಾರದ ದ್ವಂದ್ವ ನೀತಿ ಪ್ರಶ್ನಿಸಿದ ಅವರು, “ಭಾರತೀಯರಿಗೆ ಗೋವು ದೈವೀಕ ನಂಬಿಕೆಯ ರೂಪವಾದ್ದರಿಂದ ಗೋವು ರಾಷ್ಟ್ರೀಯ ಪ್ರಾಣಿ ಎಂದು ರಾಷ್ಟ್ರೀಯ ಘೋಷಿಸಬೇಕು. ಭಾರತದಿಂದ ವಿದೇಶಕ್ಕೆ ಆಗುತ್ತಿರುವ ಬೃಹತ್ ಮಟ್ಟದ ಗೋಮಾಂಸ ರಫ್ತನ್ನು ಸಂಪೂರ್ಣ ಸ್ಥಗಿತಗೊಳಿಸಬೇಕು. ಭಾರತದಲ್ಲಿ ಕಾರ್ಯಾಚರಿಸುತ್ತಿರುವ ಅಧಿಕೃತ ಮತ್ತು ಅನಧಿಕೃತ ಯಾಂತ್ರೀಕೃತ ಗೋಮಾಂಸಗಾರಿಕ ಸ್ಥಾವರಗಳನ್ನು ಸಂಪೂರ್ಣ ಮುಚ್ಚಬೇಕು” ಎಂದು ಆಗ್ರಹಿಸಿದ್ದಾರೆ.

“ಭಾರತೀಯರಿಗೆ ಗೋವಿನೊಂದಿಗೆ ಭಾವನಾತ್ಮಕ ಸಂಬಂಧ ಇರುವುದರಿಂದ ಕೇಂದ್ರ ಸರ್ಕಾರ ಭಾರತದಲ್ಲಿ ನಡೆಯುತ್ತಿರುವ ಯಾಂತ್ರೀಕೃತ ಗೋವಧೆಯನ್ನು ತಕ್ಷಣ ನಿಲ್ಲಿಸಬೇಕಿದೆ. ಗೋವಿಗೆ ರಾಷ್ಟ್ರೀಯ ಸ್ಥಾನಮಾನ ನೀಡಿ ಭಾರತದ ವಿಭಿನ್ನ ತಳಿಯ ಗೋವುಗಳ ಸಂಪೂರ್ಣ ರಕ್ಷಣೆಗೆ ರಚನಾತ್ಮಕ ಕಾರ್ಯಯೋಜನೆ ರೂಪಿಸಬೇಕಿದೆ. ಕೇಂದ್ರ ಸರ್ಕಾರ ಈ ಬಗ್ಗೆ ಗಮನ ಹರಿಸಲಿ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...