ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮತ್ತು ಮಹಿಳೆಯರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವುದನ್ನು ಖಂಡಿಸಿ ಇಂಡಿಯಾ ಒಕ್ಕೂಟದ ನಾಯಕರು ಅಕ್ಟೋಬರ್ 12ರಂದು (ಸೋಮವಾರ) ಸುಪ್ರೀಂ ಕೋರ್ಟ್‌ಗೆ ಬೃಹತ್ ಮಾರ್ಚ್ ನಡೆಸಲಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಲಿದೆ. ಮಾರ್ಚ್ ಬಳಿಕ ಸಿಜೆಐ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿ, ಜವಾಬ್ದಾರಿ ನಿಗದಿಪಡಿಸುವಂತೆ ಆಗ್ರಹಿಸಲಿದ್ದಾರೆ.
ಈ ಬಗ್ಗೆ ರಾಹುಲ್ ಗಾಂಧಿ ಮಾಹಿತಿ ನೀಡಿದ್ದು, ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ಮತ್ತು ಬಿಜೆಪಿ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. “ಹಿಂಸಾಚಾರ ಮತ್ತು ದೌರ್ಜನ್ಯದ ಮೂಲಕ ಪ್ರತಿಪಕ್ಷಗಳನ್ನು ಹಾಗೂ ಯುವಜನರ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ” ಎಂದು ಪ್ರತಿಪಾದಿಸಿದ್ದಾರೆ.
ಇದನ್ನೂ ಓದಿ: ಬಸ್‌ಗಳನ್ನೇ ಜೈಲುಗಳನ್ನಾಗಿ ಪರಿವರ್ತಿಸಲಾಗುತ್ತಿದೆಯೇ? – ಕಸ್ಟಡಿ ವಾಹನದ ಪರಿಸ್ಥಿತಿ ಬಿಚ್ಚಿಟ್ಟ ನೇಹಾ ಬೋರಾ
ಈ ಸಂದರ್ಭದಲ್ಲೇ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ಅಕ್ರಮಗಳನ್ನು ನಡೆಸಲಾಗಿದೆ, ಮತಗಳವು ಮಾಡಲಾಗಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಅಕ್ಟೋಬರ್ 12ರಂದು ‘ಇಂಡಿಯಾ’ ಒಕ್ಕೂಟದ ವಿವಿಧ ನಾಯಕರು, ವಿರೋಧ ಪಕ್ಷಗಳು, ನಾಗರಿಕ ಸಮಾಜದ ಸಂಘಟನೆಗಳು ಮತ್ತು ಯುವಜನರು ಬೀದಿಗಿಳಿದು ಸುಪ್ರೀಂ ಕೋರ್ಟ್ ಕಡೆಗೆ ಮೆರವಣಿಗೆ ಸಾಗಲಿದ್ದಾರೆ. ಈ ಸಂದರ್ಭದಲ್ಲಿ ಸಿಜೆಐ ಅವರನ್ನು ಭೇಟಿಯಾಗಿ ದೇಶದ ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳ ರಕ್ಷಣೆಗೆ ಸಂಬಂಧಿಸಿದಂತೆ ಮನವಿ ಸಲ್ಲಿಸಲಾಗುತ್ತದೆ.





