ಕಳೆದ 100 ವರ್ಷಗಳಿಂದ ಆರ್‌ಎಸ್‌ಎಸ್ ತನ್ನ ಮೂಲ ಆದರ್ಶಗಳಿಗೆ ಬದ್ಧವಾಗಿದೆ: ನಿವೃತ್ತ ಸಿಜೆಐ ಖೇಹರ್ ಹೇಳಿಕೆಗೆ ನೆಟ್ಟಿಗರು ಹೇಳಿದ್ದೇನು?

Date:

ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್‌ಎಸ್‌ಎಸ್) ಕಳೆದ 100 ವರ್ಷಗಳಿಂದ ಅನೇಕ ಸಾಮಾಜಿಕ ಮತ್ತು ರಾಜಕೀಯ ಬದಲಾವಣೆಗಳ ನಡುವೆಯೂ ತನ್ನ ಮೂಲ ಆದರ್ಶಗಳಿಗೆ ಅಚಲವಾಗಿ ಬದ್ಧವಾಗಿದೆ ಎಂದು ದೇಶದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಜಗದೀಶ್ ಸಿಂಗ್ ಖೇಹರ್ ಭಾನುವಾರ (ನವೆಂಬರ್ 29) ಶ್ಲಾಘಿಸಿದ್ದಾರೆ.

- Advertisement -

ನವದೆಹಲಿಯಲ್ಲಿ ಆರ್‌ಎಸ್‌ಎಸ್ ಶತಮಾನೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ‘ರಾಷ್ಟ್ರ ವಂದನಂ’ ಕಾರ್ಯಕ್ರಮದಲ್ಲಿ ಸರಸಂಘಚಾಲಕ ಮೋಹನ್ ಭಾಗವತ್ ಅವರೊಂದಿಗೆ ವೇದಿಕೆ ಹಂಚಿಕೊಂಡು ಮಾತನಾಡಿದ ಅವರು, ಇಂದು ಆರ್‌ಎಸ್‌ಎಸ್ ಬಹುಶಃ ವಿಶ್ವದ ಅತಿದೊಡ್ಡ ಸಂಘಟನೆಯಾಗಿ ಬೆಳೆದಿದೆ ಎಂದು ಬಣ್ಣಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಬಲಪಂಥೀಯ ರಾಜಕಾರಣದ ಗುಪ್ತ ಕಾರ್ಯಸೂಚಿ

ಕ್ಷೇತ್ರ ಮರುವಿಂಗಡಣೆ ಕೇವಲ ಲೋಕಸಭಾ ಸ್ಥಾನಗಳ ಹೆಚ್ಚಳವಲ್ಲ; ಅದು ದೇಶದ ರಾಜಕೀಯ ಅಧಿಕಾರದ ಹಂಚಿಕೆ, ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ನ್ಯಾಯದ ಭವಿಷ್ಯವನ್ನು ನಿರ್ಧರಿಸುವ ಪ್ರಕ್ರಿಯೆ. ಕ್ಷೇತ್ರಗಳ ಗಡಿ ಬದಲಾವಣೆಯಿಂದ ಅಹಿಂದ, ದಲಿತ,...

ಗುಳೇದಗುಡ್ಡ | ತಾಲೂಕಾಗಿ ಹತ್ತು ವರ್ಷ ಕಳೆದರೂ ಭೂ...

ಗುಳೇದಗುಡ್ಡ ತಾಲೂಕು ರಚೆನೆಯಾಗಿ ಹತ್ತು ವರ್ಷ ಕಳೆದಿದೆ. ತಾಲೂಕು ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳಿಗೆ ಸಂಬಂಧಿಸಿದ ಭೂದಾಖಲೆಗಳು ಬಾದಾಮಿ ತಹಸೀಲ್ದಾರ್ ಕಚೇರಿ ಮತ್ತು ಗದಗ ರಸ್ತೆಯ ಎಪಿಎಂಸಿ ಸಮೀಪದ ಕಚೇರಿಯಲ್ಲಿ ಸಂಗ್ರಹವಾಗಿವೆ....

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

ಚಾರಿತ್ರ್ಯ ನಿರ್ಮಾಣ, ಶಿಸ್ತು ಬೆಳೆಸುವುದು ಮತ್ತು ಹಿಂದೂ ಸಮಾಜವನ್ನು ಸಂಘಟಿಸುವ ತನ್ನ ಸ್ಥಾಪಕ ಉದ್ದೇಶಗಳಿಗೆ ಸಂಘವು ಸದಾ ಬದ್ಧವಾಗಿದೆ ಎಂದು ಜಸ್ಟಿಸ್ ಖೇಹರ್ ಹೇಳಿದರು. “ನೀವು ಸಾಂಪ್ರದಾಯಿಕ ಮತ್ತು ಸ್ಥಾಪಿತ ರಾಜಕೀಯ ವ್ಯವಸ್ಥೆಗಳಿಂದ ದೂರ ಉಳಿದಿದ್ದೀರಿ. ನೀವೇನೂ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಅಥವಾ ಯಾವುದೇ ಔಪಚಾರಿಕ ರಾಜಕೀಯ ವೇದಿಕೆಯನ್ನು ಹೊಂದಿಲ್ಲ. ಆದಾಗ್ಯೂ, ಒಂದು ಸಾಂಸ್ಕೃತಿಕ, ಸಾಮಾಜಿಕ ಮತ್ತು ರಾಷ್ಟ್ರೀಯವಾದಿ ಸಂಘಟನೆಯಾಗಿ ಉಳಿದಿದ್ದೀರಿ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಆದರೆ ಈ ಕಾರ್ಯಕ್ರಮದಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಉಪಸ್ಥಿತರಿದ್ದರು.

ಇದನ್ನೂ ಓದಿ: ಸರ್ಕಾರಿ ನಿವಾಸದಲ್ಲೇ ಇರುವ ಮಾಜಿ ಸಿಜೆಐ ಚಂದ್ರಚೂಡ್; ಖಾಲಿ ಮಾಡಿಸಲು ಕೇಂದ್ರಕ್ಕೆ ಸುಪ್ರೀಂ ಪತ್ರ

ಈ ಹೇಳಿಕೆಗೆ ನೆಟ್ಟಿಗರ ಆಕ್ರೋಶ

ಮುಖ್ಯ ನ್ಯಾಯಮೂರ್ತಿ ಜೆ. ಎಸ್. ಖೇಹರ್ ಅವರ ಈ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ (ವಿಶೇಷವಾಗಿ ‘X’ ವೇದಿಕೆಯಲ್ಲಿ) ಪರ-ವಿರೋಧದ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹಲವು ನೆಟ್ಟಿಗರು ಖೇಹರ್ ಅವರ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ದೇಶದ ಅತ್ಯುನ್ನತ ನ್ಯಾಯಾಂಗ ಹುದ್ದೆಯಾದ ‘ಮುಖ್ಯ ನ್ಯಾಯಮೂರ್ತಿ’ ಸ್ಥಾನವನ್ನು ಅಲಂಕರಿಸಿದ್ದ ವ್ಯಕ್ತಿಯೊಬ್ಬರು, ಒಂದು ನಿರ್ದಿಷ್ಟ ಸೈದ್ಧಾಂತಿಕ ಸಂಘಟನೆಯ ವೇದಿಕೆಯಲ್ಲಿ ಕಾಣಿಸಿಕೊಂಡು ಅದನ್ನು ಮುಕ್ತಕಂಠದಿಂದ ಹೊಗಳುವುದು ನ್ಯಾಯಾಂಗದ ನಿಷ್ಪಕ್ಷಪಾತತೆಯ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನ ಮೂಡಿಸುತ್ತದೆ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಆರ್‌ಎಸ್‌ಎಸ್ ಚುನಾವಣಾ ರಾಜಕೀಯದಿಂದ ದೂರವಿದೆ” ಎಂಬ ಖೇಹರ್ ಅವರ ಮಾತನ್ನು ಟೀಕಿಸಿರುವ ನೆಟ್ಟಿಗರು, ಆಡಳಿತಾರೂಢ ಬಿಜೆಪಿಯ ಪ್ರಮುಖ ನೀತಿ ನಿರೂಪಣೆ ಮತ್ತು ರಾಜಕೀಯ ನಿರ್ಧಾರಗಳಲ್ಲಿ ಸಂಘದ ಪ್ರಭಾವ ಸ್ಪಷ್ಟವಾಗಿರುವಾಗ ಅದನ್ನು ಕೇವಲ ‘ಸಾಂಸ್ಕೃತಿಕ ಸಂಘಟನೆ’ ಎನ್ನುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.

ನಿವೃತ್ತಿಯ ನಂತರ ನ್ಯಾಯಮೂರ್ತಿಗಳು ಸೈದ್ಧಾಂತಿಕ ಅಥವಾ ರಾಜಕೀಯ ವೇದಿಕೆಗಳಲ್ಲಿ ಕಾಣಿಸಿಕೊಳ್ಳುವ ಪ್ರವೃತ್ತಿ ಹೆಚ್ಚಾಗುತ್ತಿರುವುದನ್ನು ಉಲ್ಲೇಖಿಸಿರುವ ಕೆಲವು ಬಳಕೆದಾರರು, ಅವರು ಅಧಿಕಾರದಲ್ಲಿದ್ದಾಗ ನೀಡಿದ ಕೆಲವು ಮಹತ್ವದ ತೀರ್ಪುಗಳ ನಿಷ್ಪಕ್ಷಪಾತತೆಯನ್ನೂ ಈಗ ಸಂಶಯದಿಂದ ನೋಡುವಂತಾಗಿದೆ ಎಂದು ಕಿಡಿಕಾರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಳೇದಗುಡ್ಡ | ತಾಲೂಕಾಗಿ ಹತ್ತು ವರ್ಷ ಕಳೆದರೂ ಭೂ ದಾಖಲೆಗೆ ಬದಾಮಿಗೆ ಎಡತಾಕುತ್ತಿರುವ ರೈತರು!

ಗುಳೇದಗುಡ್ಡ ತಾಲೂಕು ರಚೆನೆಯಾಗಿ ಹತ್ತು ವರ್ಷ ಕಳೆದಿದೆ. ತಾಲೂಕು ವ್ಯಾಪ್ತಿಯ...

850 ಸಂಸದರ ಲೋಕಸಭೆ: ಅನೇಕರು ಕೇವಲ ಚಪ್ಪಾಳೆ ತಟ್ಟಲು ಬರುತ್ತಾರಷ್ಟೇ; ಡಿಲಿಮಿಟೇಶನ್ ವಿರುದ್ಧ ಶಶಿ ತರೂರ್ ಕಿಡಿ

ಕೇಂದ್ರ ಸರ್ಕಾರದ ಉದ್ದೇಶಿತ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್) ಮಸೂದೆ ಹಿಂದಿರುವ ಬಿಜೆಪಿಯ...

ಭದ್ರಾವತಿ | ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಚಿನ್ನಾಭರಣ ಕಳವು : ಕಳ್ಳನ ಬಂಧನ

ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಕಳ್ಳತನ ಮಾಡುತ್ತಿದ್ದ 23 ವರ್ಷದ ಯುವಕನನ್ನು...