ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭಿರ ಗಾಯ

Date:

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು ಸಾವನ್ನಪ್ಪಿ, 10ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಸತ್ಯವೇಡು ಮಂಡಲ ವ್ಯಾಪ್ತಿಯಲ್ಲಿರುವ ಶ್ರೀ ಸಿಟಿ ವಿಶೇಷ ಆರ್ಥಿಕ ವಲಯದಲ್ಲಿ ನಡೆದಿದೆ.

- Advertisement -

ಶನಿವಾರ ಬೆಳಿಗ್ಗೆ ಸುಮಾರು 8 ಗಂಟೆಯ ಸುಮಾರಿಗೆ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಬಾಯ್ಲರ್ ಏಕಾಏಕಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಕಟ್ಟಡ ಭಾಗಶಃ ಹಾನಿಗೊಳಗಾಗಿದ್ದು, ಸ್ಥಳದಲ್ಲೇ ಇಬ್ಬರು ಕಾರ್ಮಿಕರು ಅಸುನೀಗಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಗೌರವ್ ರಾಯ್ (35), ಚಿನ್ನ ಮಸ್ತಾನ್ (36), ರಮೇಶ್ (40) ಹಾಗೂ ವಾಸು (36) ಎಂದು ಗುರುತಿಸಲಾಗಿದ್ದು, ಮತ್ತೊಬ್ಬರ ಗುರುತು ಪತ್ತೆಯಾಗಬೇಕಿದೆ. ಗಾಯಾಳುಗಳನ್ನು ಸಮೀಪದ ಹಾಗೂ ಚೆನ್ನೈನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆಂಧ್ರಪ್ರದೇಶ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಮತ್ತು ಸಚಿವ ಎನ್‌ ಲೋಕೇಶ್ ಅವರು ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸಂತ್ರಸ್ತರ ಕುಟುಂಬಗಳಿಗೆ ಸೂಕ್ತ ಪರಿಹಾರ ಹಾಗೂ ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಎಂಆರ್‌ಪಿಎಲ್ ಸ್ಫೋಟದ ಹಾನಿಯು ಕಂಪೆನಿ ಹೇಳುತ್ತಿರುವುದಕ್ಕಿಂತ ಹಲವು ಪಟ್ಟು ಗಂಭೀರವಾಗಿದೆ: ಸಿಪಿಐಎಂ

ಇದೇ ರೀತಿಯ ಕೈಗಾರಿಕಾ ದುರಂತ ಇತ್ತೀಚೆಗೆ ಕರ್ನಾಟಕದಲ್ಲೂ ವರದಿಯಾಗಿದೆ. 2026ರ ಸೆಪ್ಟೆಂಬರ್ 30ರಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಬಳಿ ಇರುವ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಘಟಕದ ಕೋಕರ್ ಹೈಡ್ರೋ ಟ್ರೀಟಿಂಗ್ ಯುನಿಟ್‌ನಲ್ಲಿ ಬಾಯ್ಲರ್/ಸಂಸ್ಕರಣಾ ಘಟಕ ಸ್ಫೋಟಗೊಂಡು ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ಈ ದುರಂತದಲ್ಲಿ ಒಬ್ಬರು ಮೃತಪಟ್ಟು, ಸುಮಾರು 8 ರಿಂದ 9 ಜನ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು.

ಆದರೆ ಎಂಆರ್‌ಪಿಎಲ್ ಸ್ಫೋಟದ ಹಾನಿಯು ಕಂಪೆನಿ ಹೇಳುತ್ತಿರುವುದಕ್ಕಿಂತ ಹಲವು ಪಟ್ಟು ಗಂಭೀರವಾಗಿದೆ ಎಂದು ಸಿಪಿಐಎಂ, ಡಿವೈಎಫ್‌ಐ ಇತರೆ ಸಂಘಟನೆಗಳು ದೂರಿದೆ. ಹಾಗೆಯೇ ಈ ಹಿಂದೆಯೂ ಎಂಆರ್‌ಪಿಎಲ್‌ನಲ್ಲಿ ಹಲವು ಅವಘಡಗಳು ನಡೆದಿವೆ, ಪ್ರಾಣ ಹಾ‌ನಿ ಸಂಭವಿಸಿವೆ. ಪರಿಸರ ನಿಯಮ, ಸುರಕ್ಷತಾ ನಿಯಮಗಳನ್ನು ಸತತವಾಗಿ ಉಲ್ಲಂಘಿಸಲಾಗಿದೆ. ಆದರೆ ಕಂಪೆನಿಯ ನಿರ್ಲಕ್ಷ್ಯ, ದುರಹಂಕಾರದ ನಡೆ, ಕಂಪೆನಿಯ ನಿಯಮ ಉಲ್ಲಂಘನೆ ಕುರಿತಾಗಿ ಜಿಲ್ಲಾಡಳಿತದ ಮೃದು ಧೋರಣೆ ತೋರುತ್ತಿದೆ. ಜನಪ್ರತಿನಿಧಿಗಳು ಬೇಜವಾಬ್ದಾರಿಯಿಂದ ನಡೆಯುತ್ತಿದ್ದಾರೆ. ಇವೆಲ್ಲವೂ ಇಂದಿನ ಭೀಕರ ಸ್ಪೋಟಕ್ಕೆ ಕಾರಣ ಎಂದು ಸಿಪಿಐಎಂ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...