‘ಡಿಲಿಮಿಟೇಷನ್’ ಮಸೂದೆ ಬೆಂಬಲಕ್ಕಾಗಿ ಸಂಸದರಿಗೆ ₹150 ಕೋಟಿ ಆಮಿಷ: ಸಂಜಯ್ ರಾವತ್ ಆರೋಪ

Date:

ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಬೆಂಬಲ ಪಡೆಯಲು ಭಾರತೀಯ ಜನತಾ ಪಕ್ಷವು (ಬಿಜೆಪಿ) ಸಂಸದರಿಗೆ ತಲಾ ₹150 ಕೋಟಿ ಆಮಿಷ ಒಡ್ಡುತ್ತಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಗಂಭೀರ ಆರೋಪ ಮಾಡಿದ್ದಾರೆ. ನವೆಂಬರ್ 22ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸತ್ತಿನ ಅಧಿವೇಶನವನ್ನು ವಿಳಂಬಗೊಳಿಸುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಮಸೂದೆಯನ್ನು ಅಂಗೀಕರಿಸಲು ಅಗತ್ಯವಿರುವ 40 ರಿಂದ 50 ಸಂಸದರ ಬೆಂಬಲ ಪ್ರಸ್ತುತ ಸರ್ಕಾರಕ್ಕೆ ಇಲ್ಲದ ಕಾರಣ, ಉದ್ದೇಶಪೂರ್ವಕವಾಗಿಯೇ ಸಂಸತ್ ಅಧಿವೇಶನವನ್ನು ಮುಂದೂಡಲಾಗುತ್ತಿದೆ ಎಂದು ರಾವತ್ ಆರೋಪಿಸಿದ್ದಾರೆ.

- Advertisement -

ಪಕ್ಷ ತೊರೆದು ಕ್ಷೇತ್ರ ಪುನರ್ವಿಂಗಡಣೆ ಮಸೂದೆಯನ್ನು ಬೆಂಬಲಿಸುವ ಸಂಸದರಿಗೆ ತಲಾ ₹150 ಕೋಟಿ ನೀಡಲಾಗುವುದು ಮತ್ತು ಅಂತಹವರಿಗೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹತೆಯ ಭಯವಿರುವುದಿಲ್ಲ ಎಂಬ ಭರವಸೆಯನ್ನು ನೀಡಲಾಗುತ್ತಿದೆ ಎಂದು ಅವರು ದೂರಿದ್ದಾರೆ. ಬಿಜೆಪಿಯ ಈ ಕಾರ್ಯತಂತ್ರವನ್ನು ಕಾರ್ಯಗತಗೊಳಿಸುವ ಜವಾಬ್ದಾರಿಯನ್ನು ಮಹಾರಾಷ್ಟ್ರದ ಸಚಿವರೊಬ್ಬರು ವಹಿಸಿಕೊಂಡಿದ್ದು, ಇದಕ್ಕೆ ಅಗತ್ಯವಿರುವ ಹಣಕಾಸಿನ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ರಾವುತ್ ಆರೋಪಿಸಿದ್ದಾರೆ. ಬಿಜೆಪಿಗೆ ದೇಶ, ಸಂವಿಧಾನ ಅಥವಾ ಸಂಸತ್ತಿನ ಬಗ್ಗೆ ಕಾಳಜಿಯಿಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನಕ್ಕೆ 77 – ಈಡೇರದ ಕನಸು…..

ಸಂವಿಧಾನ ದಿನ ಒಂದು ಬಗೆಯ ಲಯವಿದೆ. ಅಂದು ಮುಂಜಾನೆಯಿಂದ ಇರುಳಿನವರೆಗೂ ಸಂವಿಧಾನದ್ದೇ ಸದ್ದು. ಅದರ ಮಹತ್ವ, ಅಗತ್ಯ, ಅನಿವಾರ್ಯತೆ, ಅನುಕೂಲತೆ ಬಗ್ಗೆ ಸ್ಮರಿಸಿಕೊಂಡು ಸಂಭ್ರಮಿಸುತ್ತೇವೆ. ಪ್ರಧಾನಿಯಿಂದ ಗ್ರಾಮ ಪಂಚಾಯಿತಿ ಸದಸ್ಯರವರೆಗೂ ಪ್ರಶ್ನಿಸಲು ಇರುವ "ಅಧಿಕಾರಭಾಗ್ಯ"...

ಸಂವಿಧಾನದ ಆಶಯಗಳ ಅನುಷ್ಠಾನಕ್ಕೆ ಜನಾಂದೋಲನವಾಗಲಿ; ಪ್ರಜಾಪ್ರಭುತ್ವದ ರಕ್ಷಣೆಗೆ ಜನರ...

ನವೆಂಬರ್ 26ರ ಸಂವಿಧಾನ ದಿನಾಚರಣೆಯಿಂದ ನವೆಂಬರ್ 26, 2027ರವರೆಗೆ ಐಕ್ಯ ಹೋರಾಟ ಸಮಿತಿಯ ಒಂದು ವರ್ಷದ ಅಭಿಯಾನ; ಅಂಬೇಡ್ಕರ್ ಕನಸಿನ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಹೊಸ ಸಂಕಲ್ಪ ನಮಗೆ ಸ್ವಾತಂತ್ರ್ಯ ಬಂದು ಏಳು ದಶಕಗಳಿಗೂ...

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್...

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ ಸ್ವಾವಲಂಬನೆ, ಮಹಿಳೆಯರಿಗೆ ಉದ್ಯೋಗಾವಕಾಶ, ಗ್ರಾಮೀಣ ಜನರಿಗೆ ಬದುಕಿನ ಭದ್ರತೆ ಹಾಗೂ ದೇಶಕ್ಕೆ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ದೊರಕಿಸಿಕೊಟ್ಟ ದೂರದೃಷ್ಟಿಯ ನಾಯಕರು. ಭಾರತದ...

ಸಂಸತ್ತಿನ ಮುಂಗಾರು ಅಧಿವೇಶನವು ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟು 100 ದಿನಗಳು ಕಳೆದಿದ್ದರೂ, ಅಧಿವೇಶನವನ್ನು ಅಧಿಕೃತವಾಗಿ ಮುಕ್ತಾಯಗೊಳಿಸುವ ಪ್ರಕ್ರಿಯೆ ಇನ್ನೂ ನಡೆದಿಲ್ಲ. ಭಾರತೀಯ ಸಂಸದೀಯ ಇತಿಹಾಸದಲ್ಲೇ ಇದು ಅತಿ ದೀರ್ಘಕಾಲದ ಸೈನ್ ಡೈ ಮುಂದೂಡಿಕೆಯಾಗಿದೆ. ವಿವಾದಾತ್ಮಕ ಲೋಕಸಭಾ ಸ್ಥಾನಗಳ ವಿಸ್ತರಣಾ ಯೋಜನೆಯನ್ನು ಮತ್ತೆ ಮಂಡಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂಬ ಊಹಾಪೋಹಗಳಿಗೆ ಈ ವಿಳಂಬ ಪುಷ್ಟಿ ನೀಡಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ಕೇಂದ್ರ ಸರ್ಕಾರ ಮಂಡಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆ (2026) ಲೋಕಸಭೆಯಲ್ಲಿ ಮೂರನೇ ಎರಡರಷ್ಟು ಬಹುಮತ ಪಡೆಯುವಲ್ಲಿ ವಿಫಲವಾಗಿತ್ತು. ಮೋದಿ ಸರ್ಕಾರದ ಅವಧಿಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಯೊಂದು ಸದನದಲ್ಲಿ ಬಿದ್ದುಹೋದ ಮೊದಲ ನಿದರ್ಶನ ಇದಾಗಿತ್ತು. ಈ ಮಸೂದೆಯು ಲೋಕಸಭೆಯ ಸಂಖ್ಯಾಬಲವನ್ನು ಪ್ರಸ್ತುತ ಇರುವ 543 ರಿಂದ 850ಕ್ಕೆ ಹೆಚ್ಚಿಸುವ ಗುರಿ ಹೊಂದಿದೆ.

ಕ್ಷೇತ್ರ ಪುನರ್ವಿಂಗಡಣೆ ಮತ್ತು ಲೋಕಸಭಾ ಸ್ಥಾನಗಳ ಹೆಚ್ಚಳದ ವಿಚಾರವು ಆಡಳಿತಾರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ‘ಇಂಡಿಯಾ’ ಒಕ್ಕೂಟದ ನಡುವೆ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಕ್ಷೇತ್ರ ಪುನರ್ವಿಂಗಡಣೆ  ಮತ್ತು ಲೋಕಸಭಾ ಸ್ಥಾನಗಳ ಹೆಚ್ಚಳದ ವಿಚಾರವಾಗಿ ಆಡಳಿತಾರೂಢ ಎನ್‌ಡಿಎ ಹಾಗೂ ಪ್ರತಿಪಕ್ಷಗಳ ‘ಇಂಡಿಯಾ’ ಒಕ್ಕೂಟದ ನಡುವೆ ತೀವ್ರ ಭಿನ್ನಾಭಿಪ್ರಾಯಗಳಿವೆ. ಜನಗಣತಿ ದತ್ತಾಂಶಕ್ಕೆ ಅನುಗುಣವಾಗಿ ಕ್ಷೇತ್ರ ಪುನರ್ವಿಂಗಡಣೆ ಮಾಡುವುದು ಸಾಂವಿಧಾನಿಕ ಅನಿವಾರ್ಯವಾಗಿದೆ ಎಂದು ಎನ್‌ಡಿಎ ಪ್ರತಿಪಾದಿಸಿದರೆ, 1976ರಲ್ಲಿ ಹೇರಲಾಗಿದ್ದ ಲೋಕಸಭಾ ಸ್ಥಾನಗಳ ಮಿತಿಯನ್ನು ತೆಗೆದುಹಾಕುವುದರಿಂದ ಒಕ್ಕೂಟ ವ್ಯವಸ್ಥೆಯ ಸಮತೋಲನದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂಬುದು ಪ್ರತಿಪಕ್ಷಗಳ ಆತಂಕವಾಗಿದೆ.

ಇದೇ ವೇಳೆ, ಮಹಿಳಾ ಮೀಸಲಾತಿ ಜಾರಿಗೆ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆ ಪೂರ್ಣಗೊಳ್ಳುವುದು ಅತ್ಯಗತ್ಯ ಎಂದು ಸರ್ಕಾರ ವಾದಿಸುತ್ತಿದೆ. ಆದರೆ, ಪುನರ್ವಿಂಗಡಣೆಗಾಗಿ ಕಾಯದೆ ಈಗಿರುವ 543 ಲೋಕಸಭಾ ಸ್ಥಾನಗಳಲ್ಲೇ ಶೇ. 33ರಷ್ಟು ಮಹಿಳಾ ಮೀಸಲಾತಿಯನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ. ಇದರೊಂದಿಗೆ, “ಇತ್ತೀಚಿನ ಪ್ರಕಟಿತ ಜನಗಣತಿ” ಎಂಬ ಉಲ್ಲೇಖದಡಿ 2011ರ ಜನಗಣತಿಯನ್ನು ಆಧಾರವಾಗಿಟ್ಟುಕೊಳ್ಳಲು ಎನ್‌ಡಿಎ ಮುಂದಾಗಿದ್ದರೆ, 2027ರ ಜನಗಣತಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿರುವುದರಿಂದ ಹಳೆಯ 2011ರ ದತ್ತಾಂಶವನ್ನು ಬಳಸುವುದಕ್ಕೆ ‘ಇಂಡಿಯಾ’ ಒಕ್ಕೂಟ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ, ರಾವುತ್ ಆರೋಪಗಳ ಕುರಿತು ಬಿಜೆಪಿ ಅಥವಾ ಕೇಂದ್ರ ಸರ್ಕಾರದ ಕಡೆಯಿಂದ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಹೊರಬರಬೇಕಿದೆ. ಮುಂಬರುವ ಸಂಸತ್ ಅಧಿವೇಶನದಲ್ಲಿ ಈ ವಿಚಾರವು ಮತ್ತಷ್ಟು ರಾಜಕೀಯ ಕೋಲಾಹಲಕ್ಕೆ ಕಾರಣವಾಗುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂವಿಧಾನ ದಿನ | ಸಂವಿಧಾನದ ರಕ್ಷಣೆಗೆ ಗಾಂಧಿ, ಖರ್ಗೆ ಕರೆ; ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳ ಆಕ್ರೋಶ

ದೇಶಾದ್ಯಂತ ಸಂವಿಧಾನ ದಿನ ಅಚರಣೆ ನಡೆಯುತ್ತಿದೆ. ಮೋದಿ ಸರ್ಕಾರವು ಸಂವಿಧಾನವನ್ನು ತಿರುಚುವ...

ಒಬಿಸಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲು ವಿಪಕ್ಷಗಳ ಯತ್ನ: ಪ್ರಧಾನಿ ಮೋದಿ

ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಯನ್ನು ಕಡಿತಗೊಳಿಸಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸಲು...

ಸಂವಿಧಾನದ ಆಶಯಗಳ ಅನುಷ್ಠಾನಕ್ಕೆ ಜನಾಂದೋಲನವಾಗಲಿ; ಪ್ರಜಾಪ್ರಭುತ್ವದ ರಕ್ಷಣೆಗೆ ಜನರ ಐಕ್ಯತೆ ಬಲವಾಗಲಿ

ನವೆಂಬರ್ 26ರ ಸಂವಿಧಾನ ದಿನಾಚರಣೆಯಿಂದ ನವೆಂಬರ್ 26, 2027ರವರೆಗೆ ಐಕ್ಯ ಹೋರಾಟ...

ಧಾರವಾಡ |ಯುವಜನರು ರಂಗಭೂಮಿಯಿಂದ ದೂರವಾಗುತ್ತಿರುವುದು ವಿಷಾದನೀಯ: ರಜನಿ ಗರುಡ

ಕನ್ನಡ ಭಾಷೆಯ ಘನತೆಯನ್ನು ಎತ್ತಿಹಿಡಿಯುವಲ್ಲಿ ರಂಗಭೂಮಿಯ ಕೊಡುಗೆ ಮಹತ್ವದ್ದಾಗಿದೆ. ಕನ್ನಡ ಕಟ್ಟುವ...