ಇಂದೋರ್‌ನಲ್ಲಿ 1.36 ಲಕ್ಷ ಮತದಾರರ ಹೆಸರು ಡಿಲೀಟ್‌: ‘ದಾಖಲೆಗಳೇ ಇಲ್ಲ’ ಎಂದ ಅಧಿಕಾರಿಗಳು, ‘ಆರ್‌ಟಿಐ’ ಉತ್ತರದಲ್ಲಿ ಬಹಿರಂಗ

Date:

ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆದುಹಾಕಲಾಗಿತ್ತು. ಆದರೂ, ಅದಕ್ಕೆ ಸಂಬಂಧಿಸಿದ ಸೂಕ್ತ ಡಿಜಿಟಲ್ ದಾಖಲೆಗಳನ್ನು ನಿರ್ವಹಿಸಲಾಗಿಲ್ಲ/ಇಟ್ಟುಕೊಂಡಿಲ್ಲ ಎಂದು ಅಧಿಕಾರಿಗಳು ಹೇಳಿರುವ ಆಘಾತಕಾರಿ ವಿಚಾರವು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಬಹಿರಂಗವಾಗಿದೆ.

- Advertisement -

ಪ್ರಸ್ತುತ ದೇಶಾದ್ಯಂತ ನಡೆಯುತ್ತಿರುವ ಎಸ್‌ಐಆರ್‌ ಮತ್ತು ಚುನಾವಣಾ ಪಾರದರ್ಶಕತೆ ಕುರಿತ ಭಾರೀ ವಿವಾದಗಳು ನಡೆಯುತ್ತಿವೆ. ಮೋದಿ-ಶಾ ಅಣತಿಯಂತೆ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಏಕಪಕ್ಷೀಯವಾಗಿ ಎಸ್‌ಐಆರ್‌ ಜಾರಿಗೊಳಿಸಿ, ಅಕ್ರಮವಾಗಿ ಅರ್ಹ ಮತದಾರರನ್ನು ಅಳಿಸಿ ಹಾಕುತ್ತಿದ್ದಾರೆ ಎಂಬ ಗಂಭೀರ ಸಂಗತಿಗಳು ಬಹಿರಂಗಗೊಂಡಿವೆ. ಇದೇ ಸಮಯದಲ್ಲಿ, ಇಂದೋರ್‌ನಲ್ಲಿ ಈ ಹಿಂದೆ ಡಿಲೀಟ್‌ ಆದ ಮತದಾರರ ಮಾಹಿತಿ/ದಾಖಲೆಗಳೇ ಆಯೋಗದ ಬಳಿ ಇಲ್ಲ ಎಂಬ ವಿಚಾರವು ಹೊರಬಂದಿದ್ದು, ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ಹಲವು ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಈ ದಿನ ಕವಿತೆ | ಏನೂ ಇಲ್ಲ- ನಾಸೆರ್...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಇರಾನಿನ ಕವಿ ನಾಸೆರ್ ಫಯ್ಜ್ ಅವರ ಕವನವೊಂದನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಹೆಚ್‌ ಭಾಗ್ಯ ಅಳುವ ಮಗವೊಂದನು ಸುಟ್ಟು ಬೂದಿ ಮಾಡಿದರು. ಅವನು ಏನೂ ಇಲ್ಲವೆಂದ. ತನ್ನೆಲ್ಲಾ...

ಇಂದೋರ್‌ನ ಮಾಜಿ ಕಾರ್ಪೊರೇಟರ್ ದಿಲೀಪ್ ಕೌಶಲ್ ಅವರು ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ಪ್ರತಿಕ್ರಿಯಿಸಿರುವ ಕ್ಷೇತ್ರದ ಚುನಾವಣಾಧಿಕಾರಿಗಳು ಆಘಾತಕಾರಿ ಮತ್ತು ಆಶ್ಚರ್ಯಕರ ಉತ್ತರ ನೀಡಿದ್ದಾರೆ. 2022ರ ಜನವರಿಯಿಂದ ಅದೇ ವರ್ಷದ ಅಕ್ಟೋಬರ್ ಅವಧಿಯಲ್ಲಿ ಇಂದೋರ್ ಜಿಲ್ಲೆಯ ನಾನಾ ಕ್ಷೇತ್ರಗಳಲ್ಲಿ ಒಟ್ಟು 1,36,552 ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿತ್ತು. ಈ ಪ್ರಕ್ರಿಯೆಯಲ್ಲಿ ‘ಗರುಡ್’ ಆ್ಯಪ್ ಹಾಗೂ ‘ಇಆರ್‌ಒ ನೆಟ್’ ತಂತ್ರಜ್ಞಾನಗಳನ್ನು ಬಳಸಲಾಗಿತ್ತು. ಈ ಡಿಜಿಟಲ್ ದಾಖಲೆಗಳು, ಬಿಎಲ್‌ಒ ಕಾರ್ಯಾಚರಣೆಯ ವಿವರಗಳು ಅಥವಾ ವೀಡಿಯೋ ಸಾಕ್ಷ್ಯಗಳನ್ನು ಕಾಯ್ದುಕೊಂಡಿಲ್ಲ. ಆ ಸಮಯದಲ್ಲಿ ಅಂತಹ ದಾಖಲೆಗಳನ್ನು ಸಂಗ್ರಹಿಸಿಡಲು ಚುನಾವಣಾ ಆಯೋಗದಿಂದ ಯಾವುದೇ ನಿರ್ದಿಷ್ಟ ಸೂಚನೆಗಳಿರಲಿಲ್ಲ ಎಂಬ ಸಮಜಾಯಿಷಿಯನ್ನೂ ಅಧಿಕಾರಿಗಳು ನೀಡಿದ್ದಾರೆ.

ಈ ಲೇಖನ ಓದಿದ್ದೀರಾ?: ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

Advertisements

ಆರ್‌ಟಿಐ ಅಂಕಿ-ಸಂಖ್ಯೆಗಳ ಪ್ರಕಾರ, ಇಂಧೋರ್-4 ಕ್ಷೇತ್ರದಲ್ಲಿ 28,391 ಮತ್ತು ಇಂದೋರ್-5 ಕ್ಷೇತ್ರದಲ್ಲಿ 28,091 ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ಇವೆರಡೂ ಕ್ಷೇತ್ರಗಳಲ್ಲೇ ಸುಮಾರು 57%ರಷ್ಟು ಮತದಾರರ ಹೆಸರುಗಳು ಮಾಯವಾಗಿವೆ. ಉಳಿದಂತೆ ರಾವ್ ಕ್ಷೇತ್ರದಲ್ಲಿ 21,346, ಇಂದೋರ್-2ರಲ್ಲಿ 19,983 ಹಾಗೂ ಇಂದೋರ್-1 ರಲ್ಲಿ 12,102 ಹೆಸರುಗಳನ್ನು ಪಟ್ಟಿಯಿಂದ ಹೊರಗಿಡಲಾಗಿತ್ತು. ಈ ಪೈಕಿ ಹೆಚ್ಚಿನ ಕ್ಷೇತ್ರಗಳಲ್ಲಿ ನಿಯಮಿತ ಪ್ರಕ್ರಿಯೆಯಂತೆ ಕೆಲಸ ನಡೆದಿದೆಯೇ ವಿನಃ ಯಾವುದೇ ದಾಖಲೆಗಳನ್ನು ಕಾಯ್ದುಕೊಂಡಿಲ್ಲ ಎಂಬ ಉತ್ತರವನ್ನೇ ಅಧಿಕಾರಿಗಳು ನೀಡಿದ್ದಾರೆ.

ಅಂದಹಾಗೆ, ಆರ್‌ಟಿಐ ಅರ್ಜಿಗೆ ಆರಂಭದಲ್ಲಿ ಚುನಾವಣಾ ಅಧಿಕಾರಿಗಳು ಉತ್ತರ ನೀಡಿರಲಿಲ್ಲ. ಅವರ ಧೋರಣೆಯ ವಿರುದ್ಧ ದಿಲೀಪ್ ಕೌಶಲ್ ಅವರು ಮಧ್ಯಪ್ರದೇಶ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂದೀಪ್ ಎನ್. ಭಟ್ ಅವರ ಪೀಠವು, ಬಾಕಿ ಉಳಿದಿರುವ ಆರ್‌ಟಿಐ ಮೇಲ್ಮನವಿಯನ್ನು ಕಾನೂನು ಪ್ರಕಾರ ಪರಿಶೀಲಿಸಿ, ಮುಂದಿನ 45 ದಿನಗಳ ಒಳಗಾಗಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ರಾಜ್ಯ ಮಾಹಿತಿ ಆಯೋಗಕ್ಕೆ ನಿರ್ದೇಶನ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಯಾರಾ ಎನರ್ಜಿ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ; ಪೆಟ್ರೋಲ್ ₹5, ಡೀಸೆಲ್ ₹3 ದುಬಾರಿ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಹಾಗೂ ಸಂಸ್ಕರಿಸಿದ ಇಂಧನ ಉತ್ಪನ್ನಗಳ ಬೆಲೆ...

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....

ಇನ್‌ಸ್ಟಾಗ್ರಾಮ್ ಚಾಟ್ ವಿವಾಹೇತರ ಸಂಬಂಧಕ್ಕೆ ಪುರಾವೆಯಲ್ಲ: ಅಲಹಾಬಾದ್ ಹೈಕೋರ್ಟ್

ಪತ್ನಿಯು ಮತ್ತೊಬ್ಬ ವ್ಯಕ್ತಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ನಡೆಸಿದ ಸಂಭಾಷಣೆಗಳ ಪ್ರಿಂಟ್‌ಔಟ್‌ಗಳನ್ನು ಮಾತ್ರವೇ ಆಧಾರವಾಗಿಟ್ಟುಕೊಂಡು...