ತಮಿಳುನಾಡು | ನಟ ವಿಜಯ್‌ ರ‍್ಯಾಲಿಯಲ್ಲಿ ಕಾಲ್ತುಳಿತ: 10 ಮಂದಿ ಸಾವು

Date:

ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕೀಯ ಪಕ್ಷದ ನಾಯಕ ವಿಜಯ್ ಅವರ ತಮಿಳಗ ವೆಟ್ಟ್ರಿ ಕಳಗಮ್ (TVK) ಪಕ್ಷದ ಪ್ರಚಾರ ಸಭೆಯಲ್ಲಿ ಇಂದು ಭಾರೀ ದುರಂತ ಸಂಭವಿಸಿದೆ. ಕಾಲ್ತುಳಿತದಲ್ಲಿ ಮೂವರು ಮಕ್ಕಳು ಸೇರಿದಂತೆ 10 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಸಭೆಗೆ ಆಗಮಿಸಿದ್ದ ಸಾವಿರಾರು ಜನ ವಿಜಯ್‌ರನ್ನು ನೋಡುವ ನಿರೀಕ್ಷೆಯಲ್ಲಿ ಆರು ಗಂಟೆಗಳಿಗೂ ಹೆಚ್ಚು ಕಾಲ ಕಾಯುತ್ತಿದ್ದರು. ವಿಜಯ್ ತಡವಾಗಿ ವೇದಿಕೆಗೆ ಬಂದು ಭಾಷಣ ಆರಂಭಿಸುತ್ತಿದ್ದಂತೆಯೇ ಜನಸಮೂಹದಲ್ಲಿ ತಳ್ಳಾಟ-ಗದ್ದಲ ಉಂಟಾಗಿ ಹಲವರು ಬಿದ್ದು ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಅತಿಯಾದ ಜನಸಂದಣಿಯಿಂದಾಗಿ ಹಲವಾರು ಕಾರ್ಯಕರ್ತರು ಮತ್ತು ಮಕ್ಕಳು ಅಸ್ವಸ್ಥರಾದರು. ವಿಜಯ್ ತಮ್ಮ ಭಾಷಣವನ್ನು ನಿಲ್ಲಿಸಿ ಶಾಂತಿಯನ್ನು ಕಾಪಾಡಲು ಮನವಿ ಮಾಡಿದರು. ಅಸ್ವಸ್ಥರಿಗೆ ನೀರಿನ ಬಾಟಲ್‌ಗಳನ್ನು ಹಂಚಲಾಯಿತು. ಆಂಬುಲೆನ್ಸ್‌ಗಳಿಗೆ ದಾರಿ ಕಲ್ಪಿಸಿ ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ದ್ವೇಷ ರಾಜಕಾರಣವನ್ನು ಸದೆಬಡಿಯದಿದ್ದರೆ ಉಳಿಗಾಲವಿಲ್ಲ

ಗೊಂದಲದ ನಡುವೆ ಒಂಬತ್ತು ವರ್ಷದ ಬಾಲಕಿ ಕಾಣೆಯಾಗಿರುವ ಘಟನೆ ಕೂಡ ವರದಿಯಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ವಿಜಯ್, ಪೊಲೀಸರ ಸಹಾಯವನ್ನು ಕೋರಿದರು ಹಾಗೂ ತಮ್ಮ ಪಕ್ಷದ ಕಾರ್ಯಕರ್ತರನ್ನು ಹುಡುಕಾಟದಲ್ಲಿ ಕೈಜೋಡಿಸಲು ಮನವಿ ಮಾಡಿದರು.

2026ರ ವಿಧಾನಸಭಾ ಚುನಾವಣೆಯ ಪೂರ್ವಸಿದ್ಧತೆಯ ಭಾಗವಾಗಿ ವಿಜಯ್ ರಾಜ್ಯವ್ಯಾಪಿ ಪ್ರಚಾರ ಯಾತ್ರೆ ನಡೆಸುತ್ತಿದ್ದಾರೆ. ಆದರೆ ಕರೂರಿನಲ್ಲಿ ಸಂಭವಿಸಿದ ಈ ದುರಂತವು ಅವರ ಪಕ್ಷದ ಪ್ರಚಾರಕ್ಕೆ ತೀವ್ರ ಆಘಾತ ತಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಬ್‌ಗಳಲ್ಲಿ ಮಹಿಳಾ ಸುರಕ್ಷತೆ | ಓಲಾ, ಉಬರ್, ರ‍್ಯಾಪಿಡೊಗೆ ದೆಹಲಿ ಹೈಕೋರ್ಟ್ ನೋಟಿಸ್

ಆ್ಯಪ್ ಆಧಾರಿತ ಕ್ಯಾಬ್‌ ಸೇವೆಗಳಲ್ಲಿ ಮಹಿಳೆಯರ ಸುರಕ್ಷತೆ ಖಚಿತಪಡಿಸಲು ಸಮಗ್ರ ಕ್ರಮ...

ಬಂಗಾಳವನ್ನು BJPಗೆ ಕೊಟ್ಟ ಗ್ಯಾನೇಶ್‌ ಕುಮಾರ್‌ಗೆ ‘ಭಾರತ ರತ್ನ’ ಕೊಡಿ: ಜೆಕೆ ಸಿಎಂ ಒಮರ್ ಅಬ್ದುಲ್ಲಾ

ಇಡೀ ಪಶ್ಚಿಮ ಬಂಗಾಳವನ್ನೇ ಬಿಜೆಪಿಗೆ ಒಪ್ಪಿಸಿರುವ ಕೇಂದ್ರ ಚುನಾವಣಾ ಆಯೋಗದ (ECI)...

ನಾವು ‘ಇಂಡಿಯಾ’ ಒಕ್ಕೂಟದ ಭಾಗವಲ್ಲ, ಸಭೆಗೆ ಹಾಜರಾಗಲ್ಲ: ಎಎಪಿ ನಾಯಕ ಸಂಜಯ್ ಸಿಂಗ್

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ)...

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...