ದೇಶದ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಖಾತರಿಪಡಿಸಿಕೊಳ್ಳುವ ನಿಟ್ಟಿನಲ್ಲೇ ಕನಿಷ್ಠ 10 ಉಪಗ್ರಹಗಳು ನಿರಂತರವಾಗಿ ದಿನದ 24/7 ಕಾರ್ಯನಿರ್ವಹಿಸುತ್ತಿವೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ವಿ ನಾರಾಯಣನ್ ಹೇಳಿದ್ದಾರೆ.
ಸುಮಾರು 26 ಭಾರತೀಯರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಹೆಸರಲ್ಲಿ ಭಾರತೀಯ ಸೇನೆ ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.
ಇದನ್ನು ಓದಿದ್ದೀರಾ? ಕದನ ವಿರಾಮ | ವಿಶ್ವಾಸ ದ್ರೋಹ ಎಸಗಿದ ಪ್ರಧಾನಿ ಮೋದಿ: ಮುತಾಲಿಕ್ ಆಕ್ರೋಶ
ಇದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ತನ್ನ ಮಧ್ಯಸ್ಥಿಕೆಯಲ್ಲಿಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಉಭಯ ದೇಶಗಳು ಇದನ್ನೂ ಖಚಿತಪಡಿಸಿದೆ.
ಆದರೆ ಪಾಕಿಸ್ತಾನ ಈ ಕದನ ವಿರಾಮವನ್ನು ಕೆಲವೇ ಗಂಟೆಗಳಲ್ಲಿ ಉಲ್ಲಂಘಿಸಿತ್ತು. ಈ ದಾಳಿಗೆ ಪ್ರತಿದಾಳಿ ನಡೆಸುವುದಾಗಿ ಭಾರತ ಎಚ್ಚರಿಕೆ ನೀಡಿದೆ. ಅದಾದ ಬಳಿಕ ದಾಳಿ ನಿಂತಿದೆ. ಆದರೂ ಕೂಡಾ ಮುನ್ನೆಚ್ಚರಿಕೆಗಾಗಿ 10 ಉಪಗ್ರಹಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ವರದಿಯಾಗಿದೆ.
ಇಂಫಾಲ್‌ನಲ್ಲಿ ನಡೆದ ಕೇಂದ್ರ ಕೃಷಿ ವಿಶ್ವವಿದ್ಯಾಲಯದ (ಸಿಎಯು) 5 ನೇ ಘಟಿಕೋತ್ಸವ ಸಮಾರಂಭವನ್ನುದ್ದೇಶಿಸಿ ಮಾತನಾಡಿ ಇಸ್ರೋ ಮುಖ್ಯಸ್ಥರು ಪಾಕಿಸ್ತಾನದೊಂದಿಗೆ ಉದ್ವಿಗ್ನತೆ ನಡುವೆ ದೇಶದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಂಸ್ಥೆ ತನ್ನೆಲ್ಲಾ ಪ್ರಯತ್ನ ಮಾಡುವುದಾಗಿ ಹೇಳಿದರು.
ಇದನ್ನು ಓದಿದ್ದೀರಾ? BREAKING NEWS | ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಶ್ರೀನಗರದ ಮೇಲೆ ಶೆಲ್ ದಾಳಿ
“ನಮ್ಮ ನೆರೆಹೊರೆ ದೇಶದವರ (ಪಾಕಿಸ್ತಾನ) ಬಗ್ಗೆ ನಿಮಗೆಲ್ಲರಿಗೂ ತಿಳಿದಿದೆ. ನಮ್ಮ ದೇಶದ ಸುರಕ್ಷತೆಯನ್ನು ನಾವು ಖಚಿತಪಡಿಸಿಕೊಳ್ಳಬೇಕಾದರೆ, ನಾವು ನಮ್ಮ ಉಪಗ್ರಹಗಳ ಮೂಲಕ ಸೇವೆ ಸಲ್ಲಿಸಬೇಕು. ನಾವು ನಮ್ಮ 7,000 ಕಿಮೀ ಸಮುದ್ರ ತೀರ ಪ್ರದೇಶಗಳನ್ನು ಗಮನ ಇರಿಸಬೇಕು. ನಾವು ಸಂಪೂರ್ಣ ಉತ್ತರ ಭಾಗದ ನಿಯಂತ್ರಣ ಮಾಡಬೇಕು. ಉಪಗ್ರಹ ಮತ್ತು ಡ್ರೋನ್ ತಂತ್ರಜ್ಞಾನವಿಲ್ಲದೆ, ನಾವು ಇದನ್ನು ಮಾಡಲು ಸಾಧ್ಯವಿಲ್ಲ” ಎಂದು ತಿಳಿಸಿದರು.
ಕಳೆದ ಕೆಲವು ದಿನಗಳಿಂದ ಉತ್ತರ ಮತ್ತು ಪಶ್ಚಿಮ ಅಂತಾರಾಷ್ಟ್ರೀಯ ಗಡಿಗಳ ಉದ್ದಕ್ಕೂ ರಾತ್ರಿಯಿಡೀ ಗುಂಡಿನ ಸದ್ದು ಕೇಳಿತ್ತಿತ್ತು. ಆದರೆ ಮೇ 11 ಮತ್ತು ಮೇ 12ರ ಮಧ್ಯ ರಾತ್ರಿಯಲ್ಲಿ ಶಾಂತಿ ನೆಲೆಸಿದೆ ಎಂದು ಸೇನೆ ಹೇಳಿದೆ.
ಜಮ್ಮು ಕಾಶ್ಮೀರದಲ್ಲಿ ಕಳೆದ ರಾತ್ರಿ ಶಾಂತಿ ನೆಲೆಸಿತ್ತು. ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿಗಳ ನಡುವೆ ಯಾವುದೇ ದಾಳಿ, ಪ್ರತಿದಾಳಿ ನಡೆದಿಲ್ಲ ಎಂದು ಭಾರತೀಯ ಸೇನೆ ಸೋಮವಾರ ಬೆಳಿಗ್ಗೆ ತಿಳಿಸಿದೆ.
