ಪುಸ್ತಕ ತರಲಿಲ್ಲವೆಂದು ಬಿಸಿಲಿನಲ್ಲಿ ನಿಲ್ಲಿಸಿದ ಶಿಕ್ಷಕರು: ದೆಹಲಿಯಲ್ಲಿ 10 ವರ್ಷದ ಶಾಲಾ ಬಾಲಕಿ ಸಾವು

Date:

ಶಾಲೆಗೆ ಪಠ್ಯಪುಸ್ತಕ ತರಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಶಿಕ್ಷಕರು ನೀಡಿದ ಶಿಕ್ಷೆಯಿಂದಾಗಿ 10 ವರ್ಷದ ಶಾಲಾ ಬಾಲಕಿಯೊಬ್ಬಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟ ದಾರುಣ ಘಟನೆ ಪೂರ್ವ ದೆಹಲಿಯ ವಿನೋದ್ ನಗರ (ಕಲ್ಯಾಣಪುರಿ) ಪ್ರದೇಶದಲ್ಲಿ ನಡೆದಿದೆ. ಪೂರ್ವ ದೆಹಲಿಯ ಸರ್ವೋದಯ ಕನ್ಯಾ ವಿದ್ಯಾಲಯದ ಬಾಲಕಿ ಆಗಸ್ಟ್ 27 ರಂದು ಮೃತಪಟ್ಟಿದ್ದು, ಪೋಷಕರು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಆಗಸ್ಟ್ 27 ರಂದು ಬಾಲಕಿ ಶಾಲೆಗೆ ತೆರಳಿದ್ದಾಗ, ಪುಸ್ತಕ ತರಲಿಲ್ಲವೆಂಬ ಕಾರಣಕ್ಕೆ ಶಿಕ್ಷಕರು ಆಕೆಯನ್ನು ತರಗತಿಯಿಂದ ಹೊರಗೆ ಕಳುಹಿಸಿ, ಸುಡುವ ಬಿಸಿಲಿನಲ್ಲಿ ಗಂಟೆಗಟ್ಟಲೆ ನಿಲ್ಲಿಸಿ ಶಿಕ್ಷೆ ನೀಡಿದ್ದರು. ಬಿಸಿಲಿನಲ್ಲಿ ನಿಂತು ಬಾಲಕಿಯ ಆರೋಗ್ಯ ತೀವ್ರವಾಗಿ ಕ್ಷೀಣಿಸಿದಾಗ ಶಾಲೆಯ ಸಿಬ್ಬಂದಿ ಆಕೆಯ ತಾಯಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಇದನ್ನೂ ಓದಿ: ಹವಾಮಾನ ಮುನ್ಸೂಚನೆ | ದೆಹಲಿಯಲ್ಲಿ ಮುಂದುವರೆದ ಬಿಸಿಲು: ಮಳೆ ಎಲ್ಲೆಲ್ಲಿ?

ತಾಯಿ ಶಾಲೆಗೆ ತಲುಪಿದಾಗ ಬಾಲಕಿ ತೀವ್ರ ಅಸ್ವಸ್ಥಗೊಂಡಿರುವುದು ಕಂಡುಬಂದಿದೆ. ತಕ್ಷಣ ಆಕೆಯನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಆಕೆ ಕೊನೆಯುಸಿರೆಳೆದಿದ್ದಾಳೆ.

ಬಾಲಕಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು ಹಾಗೂ ಸ್ಥಳೀಯ ನಿವಾಸಿಗಳು ಶಾಲೆಯ ಮುಂದೆ ಜಮಾಯಿಸಿ, ತಪ್ಪಿತಸ್ಥ ಶಿಕ್ಷಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ತೀವ್ರ ಪ್ರತಿಭಟನೆ ನಡೆಸಿದರು. ಸ್ಥಳೀಯ ಶಾಸಕ ರವೀಂದರ್ ಸಿಂಗ್ ನೇಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆಯ ವರದಿ ಮತ್ತು ಆರೋಪಗಳ ಆಧಾರದ ಮೇಲೆ ತನಿಖೆ ಮುಂದುವರಿಸಿದ್ದಾರೆ. ದೆಹಲಿಯಲ್ಲಿ ಪ್ರಸ್ತುತ ಗರಿಷ್ಠ ತಾಪಮಾನ 35°C ನಿಂದ 36°C ನಷ್ಟಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...

ಬ್ರೇನ್ ಸ್ಟ್ರೋಕ್ ಲಕ್ಷಣಗಳನ್ನು ಆರಂಭದಲ್ಲೇ ಗುರುತಿಸುವುದು ಅವಶ್ಯ: ನರರೋಗ ತಜ್ಞ ಡಾ. ರಾಕೇಶ ಎ.ವಿ

ಮೆದುಳಿನ ಪಾರ್ಶ್ವವಾಯು (ಬ್ರೇನ್ ಸ್ಟ್ರೋಕ್) ಸಂಭವಿಸಿದಾಗ ತಕ್ಷಣ ವೈದ್ಯಕೀಯ ನೆರವು ಪಡೆಯುವುದು...

ಅಮೆರಿಕ ಸರ್ಕಾರದ ವಿರುದ್ಧ ನ್ಯಾಯಾಲಯದ ಮಹತ್ವದ ಆದೇಶ: 55 ಸಾವಿರ ಗ್ರೀನ್ ಕಾರ್ಡ್ ಅರ್ಜಿಗಳ ಪರಿಗಣನೆಗೆ ಸೂಚನೆ

ಅಮೆರಿಕದಲ್ಲಿ ಶಾಶ್ವತವಾಗಿ ನೆಲೆಸಲು ಬಯಸುವ ವಿದೇಶಿಯರಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ, ಜಗತ್ತಿನ...