2016ರ MLA ಚುನಾವಣೆಯಲ್ಲಿ ಡಿಎಂಕೆ ಅಭ್ಯರ್ಥಿ ಜಯ; ‘ಸುಪ್ರೀಂ’ ವಿಳಂಬಕ್ಕೆ ಹೈಕೋರ್ಟ್ ಬೇಸರ

Date:

ತಮಿಳುನಾಡಿನ 2016-2021ರ ಅವಧಿಯ ವಿಧಾನಸಭಾ ಚುನಾವಣೆಯಲ್ಲಿ ತಿರುನೆಲ್ವೇಲಿ ಜಿಲ್ಲೆಯ ರಾಧಾಪುರಂ ಕ್ಷೇತ್ರದಿಂದ ಡಿಎಂಕೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂ. ಅಪ್ಪಾವು ಅವರನ್ನು ವಿಜಯಿ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸುಮಾರು 10 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ನ್ಯಾಯಾಲಯ ಈ ಆದೇಶ ನೀಡಿದ್ದು, ಪ್ರಕರಣವನ್ನು ಇಷ್ಟು ವರ್ಷಗಳ ಕಾಲ ಬಾಕಿ ಉಳಿಸಿಕೊಂಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ನಡೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಜನಪ್ರತಿನಿಧಿ ಕಾಯ್ದೆಯ (ಸೆಕ್ಷನ್ 86(7)) ಅಡಿ ತ್ವರಿತ ವಿಚಾರಣೆ ನಡೆಸದಿರುವುದು ಪ್ರಜಾಪ್ರಭುತ್ವದ ಅಣಕ ಹಾಗೂ ವಯಸ್ಕ ಮತದಾನದ ಮೂಲ ಆಶಯಕ್ಕೆ ಧಕ್ಕೆ ತಂದಿದೆ ಎಂದು ನ್ಯಾಯಮೂರ್ತಿ ಜಿ. ಜಯಚಂದ್ರನ್ ಅವರ ಪೀಠ ಅಸಮಾಧಾನ ವ್ಯಕ್ತಪಡಿಸಿದೆ.

- Advertisement -

2016ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಅಭ್ಯರ್ಥಿ ಐ.ಎಸ್. ಇನ್ಬದುರೈ ಅವರು ಕೇವಲ 49 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾಧಿಕಾರಿಗಳು ಘೋಷಿಸಿದ್ದರು. ಇದನ್ನು ಪ್ರಶ್ನಿಸಿ, ಡಿಎಂಕೆ ಅಭ್ಯರ್ಥಿ ಎಂ. ಅಪ್ಪಾವು ಅದೇ ವರ್ಷ (2016) ಹೈಕೋರ್ಟ್ ಮೆಟ್ಟಿಲೇರಿದ್ದರು. ತಮ್ಮ ಪರವಾಗಿ ಚಲಾವಣೆಯಾದ ಸಿಂಧುತ್ವವುಳ್ಳ ಅಂಚೆ ಮತಗಳನ್ನು ಅಕ್ರಮವೆಂದು ತಿರಸ್ಕರಿಸಲಾಗಿದೆ, ಆದ್ದರಿಂದ ಮರು ಎಣಿಕೆ ಮಾಡಬೇಕು ಎಂದು ಅವರು ಮನವಿ ಮಾಡಿದ್ದರು. ಆದರೆ, ಮಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ಗೆಜೆಟೆಡ್ ಅಧಿಕಾರಿಗಳಲ್ಲದ ಕಾರಣ ಅವರು ದೃಢೀಕರಿಸಿದ 203 ಅಂಚೆ ಮತಗಳು ಅಸಿಂಧು ಎಂದು ಇನ್ಬದುರೈ ಪರ ವಕೀಲರು ವಾದಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಈ ಪ್ರಕರಣದ ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್, 2019ರಲ್ಲಿ ಎಲ್ಲಾ ಮತಗಳ ಮರು ಎಣಿಕೆಗೆ ಮಧ್ಯಂತರ ಆದೇಶ ನೀಡಿತ್ತು. ಅದರಂತೆ 2019ರ ಅಕ್ಟೋಬರ್ 4ರಂದು ಹೈಕೋರ್ಟ್ ಆವರಣದಲ್ಲಿಯೇ ಇವಿಎಂ ಹಾಗೂ ಅಂಚೆ ಮತಗಳ ಮರು ಎಣಿಕೆ ಕಾರ್ಯ ನಡೆಯಿತು. ಆದರೆ, ಅದೇ ದಿನ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಕೆಯಾದ ಕಾರಣ, ಮರು ಎಣಿಕೆಯ ಫಲಿತಾಂಶವನ್ನು ಪ್ರಕಟಿಸದಂತೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಸುಮಾರು ಆರು ವರ್ಷಗಳ ಕಾಲ ಈ ಅರ್ಜಿಯನ್ನು ಬಾಕಿ ಉಳಿಸಿಕೊಂಡಿದ್ದ ಸುಪ್ರೀಂ ಕೋರ್ಟ್, ಅಂತಿಮವಾಗಿ 2026ರ ಮೇ 21ರಂದು “ವಿಧಾನಸಭೆಯ ಅಧಿಕಾರಾವಧಿ ಮುಕ್ತಾಯಗೊಂಡಿರುವುದರಿಂದ ಈ ಪ್ರಕರಣದ ವಿಚಾರಣೆಯಿಂದ ಯಾವುದೇ ಪ್ರಯೋಜನವಿಲ್ಲ” ಎಂದು ಹೇಳಿ ಪ್ರಶ್ನೆಯನ್ನು ಮುಕ್ತವಾಗಿಟ್ಟು ಅರ್ಜಿಯನ್ನು ವಿಲೇವಾರಿ ಮಾಡಿತ್ತು.

ಇದನ್ನು ಓದಿದ್ದೀರಾ? ಬಾಂಬ್, ಬೆದರಿಕೆಗಳಿಗೆ ಬಗ್ಗದ ಜ್ಞಾನದೀವಿಗೆ: ಬಡವರ ಪಾಲಿನ ಅಕ್ಷರ ಸಂತ ‘ಖಾನ್ ಸರ್’

ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿದ್ದ ವರದಿಗಳನ್ನು ಪರಿಶೀಲಿಸಿದ ಮದ್ರಾಸ್ ಹೈಕೋರ್ಟ್, ತಿರಸ್ಕೃತಗೊಂಡಿದ್ದ 203 ಅಂಚೆ ಮತಗಳ ಪೈಕಿ 153 ಮತಗಳು ಎಂ. ಅಪ್ಪಾವು ಅವರ ಪರವಾಗಿ ಹಾಗೂ ಕೇವಲ 1 ಮತ ಇನ್ಬದುರೈ ಪರವಾಗಿ ಚಲಾವಣೆಯಾಗಿದೆ ಎಂಬುದನ್ನು ದೃಢಪಡಿಸಿತು. ಈ ನಿಖರವಾದ ಅಂಕಿ-ಅಂಶಗಳ ಆಧಾರದ ಮೇಲೆ, ಅಪ್ಪಾವು ಅವರು 103 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ ಎಂದು ನ್ಯಾಯಾಲಯ ಘೋಷಿಸಿತು. ಅಲ್ಲದೆ, ಮತದಾರರ ಗುರುತನ್ನು ದೃಢೀಕರಿಸುವ ಅಧಿಕಾರ ಶಾಲಾ ಮುಖ್ಯೋಪಾಧ್ಯಾಯರಿಗೆ ಇದೆ ಎಂಬುದನ್ನು 2019ರಲ್ಲಿಯೇ ಹೈಕೋರ್ಟ್ ಸ್ಪಷ್ಟಪಡಿಸಿತ್ತು ಹಾಗೂ ಸುಪ್ರೀಂ ಕೋರ್ಟ್ ಈ ಅಂಶವನ್ನು ರದ್ದುಗೊಳಿಸಿರಲಿಲ್ಲ ಎಂಬುದನ್ನು ಉಲ್ಲೇಖಿಸಿತು.

ಈ ಪ್ರಕರಣವನ್ನು “ನ್ಯಾಯದಣಕ” ಎಂದು ಬಣ್ಣಿಸಿದ ನ್ಯಾಯಾಲಯ, ರಾಧಾಪುರಂ (ಕ್ಷೇತ್ರ ಸಂಖ್ಯೆ 228) ಕ್ಷೇತ್ರದ ಮತದಾರರು ತಾವು ಆಯ್ಕೆ ಮಾಡದ ವ್ಯಕ್ತಿಯನ್ನು ತಮ್ಮ ಶಾಸಕನನ್ನಾಗಿ ಸಹಿಸಿಕೊಳ್ಳುವಂತಾಯಿತು ಎಂದು ತೀವ್ರ ವಿಷಾದ ವ್ಯಕ್ತಪಡಿಸಿದೆ. ಅಂತಿಮವಾಗಿ, ಎಂ. ಅಪ್ಪಾವು ಅವರನ್ನು 2016-2021ರ ಅವಧಿಯ ವಿಜೇತ ಶಾಸಕ ಎಂದು ಘೋಷಿಸಿದ ನ್ಯಾಯಾಲಯ, ಎಲ್ಲ ಅಧಿಕೃತ ದಾಖಲೆಗಳಲ್ಲಿ ಅವರ ಹೆಸರನ್ನು ಸೇರಿಸುವಂತೆ ವಿಧಾನಸಭೆಯ ಕಾರ್ಯದರ್ಶಿಗೆ ಸೂಚಿಸಿದೆ. ಇನ್ಬದುರೈ ಅವರನ್ನು ಅನರ್ಹಗೊಳಿಸದ ನ್ಯಾಯಾಲಯ, 2016-21ರ ಅವಧಿಯ ಶಾಸಕರಾಗಿ ಯಾವುದೇ ಪಿಂಚಣಿ ಸೌಲಭ್ಯಗಳನ್ನು ಪಡೆಯದಂತೆ ಮಾತ್ರ ಅವರಿಗೆ ನಿರ್ಬಂಧ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​7 ದಿನಗಳ ಜೈಲುವಾಸ ಅಂತ್ಯ: ಕೊನೆಗೂ ಬಿಡುಗಡೆಯಾದ ಕಾಕ್ರೋಚ್ ಜನತಾ ಪಾರ್ಟಿ ನಾಯಕರು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಕಾಕ್ರೋಚ್...

ಪ್ರತಿಭಟನೆಗಳ ವಿರುದ್ಧ ಅತಿಯಾದ ಬಲಪ್ರಯೋಗ ನಿಲ್ಲಿಸಿ; ಮೋದಿ ಸರ್ಕಾರಕ್ಕೆ ವಿಶ್ವಸಂಸ್ಥೆ ತಜ್ಞರ ಆಗ್ರಹ

ಭಾರತದಲ್ಲಿ ಇತ್ತೀಚಿನ ಪ್ರತಿಭಟನೆಗಳ ಸಂದರ್ಭದಲ್ಲಿ ಅಧಿಕಾರಿಗಳು ನಡೆದುಕೊಂಡ ರೀತಿಯ ಬಗ್ಗೆ ಸ್ವತಂತ್ರ...

ಪ್ರಧಾನಿ ಮೋದಿ ವಿದೇಶಿ ಪ್ರವಾಸದ ದಾಖಲೆ ಬಹಿರಂಗಕ್ಕೆ ದೆಹಲಿ ಹೈಕೋರ್ಟ್ ನಕಾರ

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ ಸರ್ಕಾರಗಳು!

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ...