ನೂರು ಉಗ್ರರನ್ನು ಕೊಲ್ಲಲಾಗಿದೆ: ಸರ್ವಪಕ್ಷ ಸಭೆಯಲ್ಲಿ ರಾಜನಾಥ್ ಸಿಂಗ್‌ ಹೇಳಿಕೆ

Date:

ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ್‌’ ಕಾರ್ಯಾಚರಣೆಯ ಯಶಸ್ಸು ಹಾಗೂ ನಂತರದ ಪರಿಣಾಮಗಳ ಕುರಿತು ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆಯಲ್ಲಿ ವಿವರ ನೀಡಿದೆ.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌, ಕಾರ್ಯಾಚರಣೆಯಲ್ಲಿ ನೂರು ಉಗ್ರರನ್ನು ಕೊಲ್ಲಲಾಗಿದೆ. ಕಾರ್ಯಾಚರಣೆಯು ಇನ್ನು ಮುಂದುವರಿಯುತ್ತದೆ. ಪಾಕ್‌ ದಾಳಿ ನಡೆಸಿದರೆ ನಾವು ಪ್ರತಿದಾಳಿ ನಡೆಸಲು ತಯಾರಾಗಿದ್ದೇವೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ನಡೆದ ಉಗ್ರರ ದಾಳಿ ಬಳಕ ನಡೆಯುತ್ತಿರುವ ಎರಡನೇ ಸರ್ವಪಕ್ಷ ಸಭೆ ಇದಾಗಿದೆ.

ಸಂಸತ್ ಭವನದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಜೆ.ಪಿ. ನಡ್ಡಾ, ವಿದೇಶಾಂಗ ಸಚಿವ ಎಸ್.ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರ್ಕಾರದ ಪರವಾಗಿ ಹಾಜರಾಗಿದ್ದರು. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ನಿಂದ ಭಾಗವಹಿಸಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಪರೇಷನ್ ಸಿಂಧೂರ – ಪಾಕ್ ಭಯೋತ್ಪಾದನೆಗೆ ತಕ್ಕ ಶಾಸ್ತಿ!

ಇತರ ವಿರೋಧ ಪಕ್ಷಗಳಾದ ತೃಣಮೂಲ ಕಾಂಗ್ರೆಸ್‌ನ ಸಂದೀಪ್ ಬಂಡೋಪಾಧ್ಯಾಯ, ಡಿಎಂಕೆಯ ಟಿ.ಆರ್.ಬಾಲು, ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್, ಎಎಪಿಯ ಸಂಜಯ್ ಸಿಂಗ್, ಶಿವ ಸೇನಾದ (ಯುಬಿಟ) ಸಂಜಯ್ ರಾವುತ್, ಎನ್‌ಸಿಪಿಯ (ಶರದ್ ಪವಾರ್) ಸುಪ್ರಿಯಾ ಸುಳೆ ಅವರೂ ಪಾಲ್ಗೊಂಡಿದ್ದರು.

ಜೆಡಿ(ಯು) ನಾಯಕ ಸಂಜಯ್ ಝಾ, ಎಲ್‌ಜಿಪಿ ನಾಯಕ ಹಾಗೂ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮತ್ತು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಅವರೂ ಸಭೆಯಲ್ಲಿದ್ದಾರೆ.

‘ಆಪರೇಷನ್ ಸಿಂಧೂರ’ದ ಕುರಿತು ಎಲ್ಲ ಪಕ್ಷಗಳಿಗೆ ಮಾಹಿತಿ ನೀಡಲು ಸರ್ಕಾರ ಬಯಸಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಕಾಮ್ ನಲ್ಲಿ ಉಗ್ರರು ಏಪ್ರಿಲ್ 22ರಂದು ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತಿಯಾಗಿ, ಭಾರತೀಯ ಸೇನೆ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳ ಮೇಲೆ ಬುಧವಾರ ಮುಂಜಾನೆ ‘ಆಪರೇಷನ್ ಸಿಂಧೂರ್‌’ ಕಾರ್ಯಾಚರಣೆ ನಡೆಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...