11 ಮಕ್ಕಳ ಸಾವು | ವಿಷಕಾರಿ ಕೋಲ್‌ಡ್ರಿಪ್ ಸಿರಪ್ ಮಾರಾಟ ನಿಷೇಧ

Date:

ಕಲುಷಿತ ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳು ಸಾವನ್ನಪ್ಪಿರುವ ಪ್ರಕರಣ ಭಾರೀ ವಿರೋಧ, ವಿವಾದಕ್ಕೆ ಗುರಿಯಾಗಿದೆ. ಕೇಂದ್ರ ಸರ್ಕಾರವು 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ನಿರ್ದೆಶನ ಹೊರಡಿಸಿದೆ. ಮಕ್ಕಳಿಗೆ ನೀಡಲಾಗಿದ್ದ ಕೋಲ್‌ಡ್ರಿಫ್ ಸಿರಪ್ ಮಾರಾಟವನ್ನು ಮಧ್ಯಪ್ರದೇಶ ಸರ್ಕಾರ ನಿಷೇಧಿಸಿದೆ. ಕೇರಳದಲ್ಲಿಯೂ ಸಿರಪ್ ಅನ್ನು ನಿಷೇಧಿಸಿ, ಅಲ್ಲಿ ಸರ್ಕಾರ ಆದೇಶಿಸಿದೆ.

- Advertisement -

ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಆ ಸಿರಪ್ ಕೊಟ್ಟು, ಮಕ್ಕಳ ಸಾವಿಗೆ ಕಾರಣನಾಅಗಿದ್ದ ವೈದ್ಯನನ್ನು ಕೂಡ ಬಂಧಿಸಲಾಗಿದೆ ಎಂದು ಮಧ್ಯಪ್ರದೇಶ ಪೊಲೀಸರು ತಿಳಿಸಿದ್ದಾರೆ. ಚಿಂದ್ವಾರ ಜಿಲ್ಲೆಯ ಪಾರಾಸಿಯಾದ ಮಕ್ಕಳ ತಜ್ಞ ಪ್ರವೀಣ್ ಸೋನಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಸೋನಿ ಅವರು ಸರ್ಕಾರಿ ವೈದ್ಯರಾಗಿದ್ದಾರೆ. ಆದಾಗ್ಯೂ, ಅವರು ಖಾಸಗಿ ಕ್ಲಿನಿಕ್ಅನ್ನು ನಡೆಸುತ್ತಿದ್ದು, ಆ ಕ್ಲಿನಿಕ್‌ಗೆ ಬಂದಿದ್ದ ಮಕ್ಕಳಿಗೆ ಸಿರಪ್ ಕೊಟ್ಟಿದ್ದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸರ್ಕಾರವು ಈ ಹಿಂದೆ ಕೋಲ್‌ಡ್ರಿಫ್ ಸಿರಪ್ ಮಾರಾಟವನ್ನು ನಿಷೇಧಿಸಿತ್ತು. ಔಷಧದ ಮಾದರಿಗಳಲ್ಲಿ 48.6% ಡೈಥಿಲೀನ್ ಗ್ಲೈಕಾಲ್ ಎಂಬ ವಿಷಕಾರಿ ವಸ್ತು ಪತ್ತೆಯಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೆ, ಈ ಸಿರಪ್‌ಅನ್ನು ಪರೀಕ್ಷಿಸಿದ್ದ ಚೆನ್ನೈನಲ್ಲಿರುವ ಔಷಧ ಪರೀಕ್ಷಾ ಪ್ರಯೋಗಾಲಯದ ಸರ್ಕಾರಿ ಔಷಧ ವಿಶ್ಲೇಷಕರು ‘ಪ್ರಮಾಣಿತ ಗುಣಮಟ್ಟದಲ್ಲಿಲ್ಲ’ ಎಂದು ವರದಿ ನೀಡಿದ್ದರು. ಆ ವರದಿ ಆಧರಿಸಿ ತಮಿಳುನಾಡು ಔಷಧ ನಿಯಂತ್ರಣ ನಿರ್ದೇಶನಾಲಯವು ಸಿರಪ್ ಮಾರಾಟ ನಿಷೇಧಿಸಿತ್ತು.

ಕೋಲ್‌ಡ್ರಿಫ್ ಲೇಬಲ್‌ನ ಕೆಮ್ಮಿನ ಸಿರಪ್‌ ತಯಾರಿಸಿದ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿರುವ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ವಿರುದ್ಧವೂ ಮಧ್ಯಪ್ರದೇಶ ಸರ್ಕಾರ ಪ್ರಕರಣ ದಾಖಲಿಸಿದೆ.

ಈ ಲೇಖನ ಓದಿದ್ದೀರಾ?: ಸಮೀಕ್ಷೆಯ ಸಮೀಕ್ಷೆ; ನಗರವಾಸಿಗಳ ಜಾತಿ ಮನಸ್ಥಿತಿ ಅನಾವರಣ

ಮಧ್ಯಪ್ರದೇಶದಲ್ಲಿ ಸಂಭವಿಸಿರುವ ಸಾವುಗಳನ್ನು ಅಲ್ಲಿನ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ‘ಅತ್ಯಂತ ದುರಂತ’ ಎಂದಿದ್ದಾರೆ. ಈ ಸಾವುಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

“ಕೋಲ್‌ಡ್ರಿಫ್ ಸಿರಪ್‌ನಿಂದಾಗಿ ಚಿಂದ್ವಾರದಲ್ಲಿ ಮಕ್ಕಳ ಸಾವುಗಳು ಅತ್ಯಂತ ದುರಂತ. ಈ ಸಿರಪ್ ಮಾರಾಟವನ್ನು ಮಧ್ಯಪ್ರದೇಶದಾದ್ಯಂತ ನಿಷೇಧಿಸಲಾಗಿದೆ. ಸಿರಪ್ ತಯಾರಿಸುವ ಕಂಪನಿ ಮೇಲೂ ನಿಷೇಧ ಹೇರಲಾಗುತ್ತಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...