ಉತ್ತರ ಪ್ರದೇಶ ಶಹಜಹಾನ್‌ಪುರದಲ್ಲಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ.
ಓವರ್ ಲೋಡ್ ಡಂಪರ್ ನಿಯಂತ್ರಣ ತಪ್ಪಿ ಬಸ್ ಮೇಲೆ ಉರುಳಿಬಿದ್ದ ಕಾರಣ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇವರೆಲ್ಲರೂ ಉತ್ತರ ಪ್ರದೇಶದ ಸೀತಾಪುರದಿಂದ ಉತ್ತರಾಖಂಡದ ಪೂರ್ಣಂಗಿರಿಗೆ ಹೋಗುತ್ತಿದ್ದರು. ಮೇ.26ರ ರಾತ್ರಿ 12.15ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಈ ರಸ್ತೆ ಅಪಘಾತದಲ್ಲಿ 10 ಭಕ್ತರು ಗಾಯಗೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಧ್ವನಿ ಬದಲಾಯಿಸುವ ಆ್ಯಪ್ ಬಳಸಿ 7 ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ
ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ, ಬಸ್ ಪ್ರಯಾಣಿಕರು ರಾತ್ರಿ ಶಹಜಹಾನ್‌ಪುರದಲ್ಲಿ ಊಟಕ್ಕೆಂದು ಇಳಿದಿದ್ದರು. ಈ ವೇಳೆ ಹಿಂದಿಯಿಂದ ಬಂದ ಡಂಪರ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಎಲ್ಲ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬಸ್ ನಲ್ಲಿದ್ದ ಪ್ರಯಾಣಿಕರು ಉತ್ತರಾಖಂಡದ ಪೂರ್ಣಂಗಿರಿಯಲ್ಲಿರುವ ಮಾತೆಯ ಆಸ್ಥಾನಕ್ಕೆ ಹೋಗುತ್ತಿದ್ದರು. ಸೀತಾಪುರದ ಸಿಂಧೌಲಿಯ ಭಕ್ತರು ಇಲ್ಲಿ ದರ್ಶನಕ್ಕೆ ಹೋಗುತ್ತಿದ್ದರು. ಕೆಲವರು ಬಸ್ಸಿನಲ್ಲಿ ಕುಳಿತಿದ್ದರೆ ಕೆಲವರು ಹೊರಗಿದ್ದರು. ಈ ವೇಳೆ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
