ಮಧ್ಯ ಪ್ರದೇಶ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 11 ಸಾವು

Date:

Advertisements

ಮಧ್ಯ ಪ್ರದೇಶ ಹರ್ದಾ ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿ 11 ಮಂದಿ ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ.

ಹಾರ್ದಾ ಜಿಲ್ಲೆಯ ಬೈರಾಗರ್‌ ಗ್ರಾಮದಲ್ಲಿ ಸ್ಫೋಟವುಂಟಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಪೋಟದ ತೀವ್ರತೆ 15 ಕಿ.ಮೀ ವರೆಗೂ ವ್ಯಾಪಿಸಿದೆ.

ಸ್ಫೋಟಕ್ಕೆ ಕಿಟಕಿಯ ಗಾಜು ಛಿದ್ರವಾಯಿತು, ಭಯಭೀತರಾದ ಜನರ ಓಡಾಟದಿಂದ ಕಾಲ್ತುಳಿತ ಸಹ ಉಂಟಾಯಿತು. ರಕ್ಷಣಾ ಕಾರ್ಯಾಚರಣೆ ಮುಂದುವರೆಯುತ್ತಿದೆ. ಕಾರ್ಖಾನೆಯಲ್ಲಿ ಇನ್ನು ಹಲವರು ಸಿಲುಕಿರುವ ಸಾಧ್ಯತೆಯಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

“ಸ್ಫೋಟದ ನಂತರ ಉಂಟಾದ ಕಾಲ್ತುಳಿತದಿಂದಲೇ ಅನೇಕರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನಿ ನಂದಿಸುತ್ತಿದ್ದು ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡ ನಂತರ ಅನಾಹುತದ ಪೂರ್ಣ ಮಾಹಿತಿ ಲಭಿಸಲಿದೆ” ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

“50 ಆಂಬುಲೆನ್ಸ್‌ಗಳು ಘಟನಾ ಸ್ಥಳಕ್ಕೆ ತಲುಪಿದ್ದು, ಮೃತರ ಕುಟುಂಬಗಳಿಗೆ ಪರಿಹಾರವಾಗಿ 4 ಲಕ್ಷ ರೂ.ಗಳನ್ನು ಘೋಷಿಸಲಾಗಿದೆ.ನಮ್ಮ ಸಚಿವರು, ಪೊಲೀಸ್‌ ಮಹಾ ನಿರ್ದೇಶಕರು ಹಾಗೂ 400 ಮಂದಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿದ್ದು, ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X