ಮಧ್ಯ ಪ್ರದೇಶ ಹರ್ದಾ ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿ 11 ಮಂದಿ ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ.
ಹಾರ್ದಾ ಜಿಲ್ಲೆಯ ಬೈರಾಗರ್ ಗ್ರಾಮದಲ್ಲಿ ಸ್ಫೋಟವುಂಟಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಪೋಟದ ತೀವ್ರತೆ 15 ಕಿ.ಮೀ ವರೆಗೂ ವ್ಯಾಪಿಸಿದೆ.
ಸ್ಫೋಟಕ್ಕೆ ಕಿಟಕಿಯ ಗಾಜು ಛಿದ್ರವಾಯಿತು, ಭಯಭೀತರಾದ ಜನರ ಓಡಾಟದಿಂದ ಕಾಲ್ತುಳಿತ ಸಹ ಉಂಟಾಯಿತು. ರಕ್ಷಣಾ ಕಾರ್ಯಾಚರಣೆ ಮುಂದುವರೆಯುತ್ತಿದೆ. ಕಾರ್ಖಾನೆಯಲ್ಲಿ ಇನ್ನು ಹಲವರು ಸಿಲುಕಿರುವ ಸಾಧ್ಯತೆಯಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ
“ಸ್ಫೋಟದ ನಂತರ ಉಂಟಾದ ಕಾಲ್ತುಳಿತದಿಂದಲೇ ಅನೇಕರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನಿ ನಂದಿಸುತ್ತಿದ್ದು ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡ ನಂತರ ಅನಾಹುತದ ಪೂರ್ಣ ಮಾಹಿತಿ ಲಭಿಸಲಿದೆ” ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
“50 ಆಂಬುಲೆನ್ಸ್‌ಗಳು ಘಟನಾ ಸ್ಥಳಕ್ಕೆ ತಲುಪಿದ್ದು, ಮೃತರ ಕುಟುಂಬಗಳಿಗೆ ಪರಿಹಾರವಾಗಿ 4 ಲಕ್ಷ ರೂ.ಗಳನ್ನು ಘೋಷಿಸಲಾಗಿದೆ.ನಮ್ಮ ಸಚಿವರು, ಪೊಲೀಸ್ ಮಹಾ ನಿರ್ದೇಶಕರು ಹಾಗೂ 400 ಮಂದಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿದ್ದು, ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ತಿಳಿಸಿದ್ದಾರೆ.