ಬೆಟ್ಟಿಂಗ್ ಆ್ಯಪ್‌ಗಳ ಪ್ರಚಾರ: 11 ಯೂಟ್ಯೂಬರ್‌ಗಳ ವಿರುದ್ಧ ಪ್ರಕರಣ ದಾಖಲು

Date:

ಹೈದರಾಬಾದ್‌ನ ಪಶ್ಚಿಮ ವಲಯ ಪೊಲೀಸರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಬೆಟ್ಟಿಂಗ್ ಆ್ಯಪ್‌ಗಳ ಪ್ರಚಾರ ಮಾಡಿದ ಮೂವರು ಮಹಿಳೆಯರು ಸೇರಿದಂತೆ 11 ಯೂಟ್ಯೂಬರ್‌ಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದ್ದಾರೆ.

- Advertisement -

1867ರ ಸಾರ್ವಜನಿಕ ಜೂಜಾಟ ಕಾಯ್ದೆಯನ್ನು ನೇರವಾಗಿ ಉಲ್ಲಂಘಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಹಾಗೆಯೇ ಈ ಅಪ್ಲಿಕೇಶನ್‌ಗಳು ವ್ಯಸನಕಾರಿಯಾಗಿದೆ, ಸಮಾಜಕ್ಕೆ ಹಾನಿಯನ್ನುಂಟು ಮಾಡುತ್ತದೆ, ಆರ್ಥಿಕ ಸಂಕಷ್ಟಕ್ಕೆ ಕಾರಣವಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಇದನ್ನು ಓದಿದ್ದೀರಾ? ಯೂಟ್ಯೂಬರ್ ಸಮೀ‌ರ್‌ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ಆಜ್ಞೆ

ಈ ಸಂಬಂಧ ಯೂಟ್ಯೂಬರ್‌ಗಳಾದ ಇಮ್ರಾನ್ ಖಾನ್, ವಿಷ್ಣು ಪ್ರಿಯಾ, ಹರ್ಷ ಸಾಯಿ, ಶ್ಯಾಮಲಾ, ಟೇಸ್ಟಿ ತೇಜಾ, ರಿತು ಚೌಧರಿ, ಬಂಡಾರು ಶೇಷಯಾನಿ ಸುಪ್ರೀತಾ, ಕಿರಣ್ ಗೌಡ್, ಅಜಯ್, ಸನ್ನಿ, ಸುಧೀರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಬೆಟ್ಟಿಂಗ್ ಆ್ಯಪ್‌ಗಳು ನಿರ್ದಿಷ್ಟವಾಗಿ ಯುವ ವಯಸ್ಕರನ್ನು ಗುರಿಯಾಗಿಸಿಕೊಂಡು ಜೂಜಾಟವನ್ನು ಸುಲಭವಾಗಿ ಪ್ರವೇಶಿಸಲು ಸಾಧ್ಯವಾಗುವಂತೆ ಮಾಡುತ್ತದೆ. ಸಾಮಾಜಿಕ ಮಾಧ್ಯಮಗಳ ಮೂಲಕ ಈ ಜೂಜಿನ ಪ್ರಚಾರ ಮಾಡುತ್ತದೆ ಎಂದು ಹೈದಾರಾಬಾದ್ ಡಿಸಿಪಿ ವಿಜಯ್ ಕುಮಾರ್ ಹೇಳಿದರು.

ಇದನ್ನು ಓದಿದ್ದೀರಾ? ವಿಜಯಪುರ | ಬೆಟ್ಟಿಂಗ್‌ ಆ್ಯಪ್‌ಗಳನ್ನು ನಿಷೇಧಿಸುವಂತೆ ಜಿಲ್ಲಾಧಿಕಾರಿಗೆ ಮನವಿ

“ಬೆಟ್ಟಿಂಗ್ ಆ್ಯಪ್‌ಗಳ ಬಗ್ಗೆ ನಾಗರಿಕರ ದೂರಿನ ಆಧಾರದ ಮೇಲೆ, ನಾವು ಪ್ರಕರಣ ದಾಖಲಿಸಿದ್ದೇವೆ. ನಾವು 11 ಯೂಟ್ಯೂಬರ್‌ಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದ್ದೇವೆ. ನಾವು ಅವರ ಸಾಮಾಜಿಕ ಮಾಧ್ಯಮ ಖಾತೆಗಳ ತನಿಖೆ ಮಾಡುತ್ತೇವೆ, ಯಾವ ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇವೆ. ಪುರಾವೆಗಳನ್ನು ಸಂಗ್ರಹಿಸಿ ನಂತರ ಕ್ರಮಕೈಗೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

“ಬೆಟ್ಟಿಂಗ್ ಆ್ಯಪ್‌ಗಳ ಮೂಲಕ ಗಣನೀಯ ಹಣ ಗಳಿಸಬಹುದು ಎಂದು ಹೇಳಿಕೊಂಡು ಈ ವ್ಯಕ್ತಿಗಳು ನಿರುದ್ಯೋಗಿ ಯುವಕರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ. ಯಾರೂ ಅಕ್ರಮವಾಗಿ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಬಾರದು” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆತ್ಮಹತ್ಯೆ ಪ್ರಕರಣ: ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಬಾಲಿವುಡ್ ನಟಿ ರಾಖಿ ಸಾವಂತ್‌ಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. 2010ರ...

ರಷ್ಯಾದ ಇಂಧನದಿಂದ ಭಾರತ ದೂರ ಸರಿಯುವುದು ಅಸಾಧ್ಯ: ಅಮೆರಿಕ

ರಷ್ಯಾದ ತೈಲ ಖರೀದಿಸುವ ರಾಷ್ಟ್ರಗಳ ಮೇಲಿನ ದಿಗ್ಬಂಧನ ಮತ್ತು ಆಮದು ಸುಂಕದ...

ಫುಟ್‌ಪಾತ್ ನಿರ್ಮಿಸದಿದ್ರೆ, ನಾವೇ ಧರಣಿ‌ ಕೂರ್ತೀವಿ; BJP ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ವಾರ್ನಿಂಗ್!

ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಸಮೀಪದ ಮಥುರಾ ರಸ್ತೆಯಲ್ಲಿ ಪಾದಚಾರಿಗಳು...