ಶಾಲೆಯ ಏಳಿಗೆಗಾಗಿ ‘ಬಲಿ’ ಹೆಸರಿನಲ್ಲಿ ಬಾಲಕನ ಕೊಲೆ; ಖಾಸಗಿ ಶಾಲೆ ಮಾಲೀಕ, ಪ್ರಾಂಶುಪಾಲ ಸೇರಿ ಐವರ ಬಂಧನ

Date:

ಶಾಲೆಗಾಗಿ ಬಲಿಕೊಟ್ಟರೆ, ತಮ್ಮ ಶಾಲೆ ಏಳಿಗೆ ಹೊಂದುತ್ತದೆ ಎಂಬ ಭ್ರಮೆ, ಮೌಢ್ಯದಿಂದ 11 ವರ್ಷದ ಬಾಲಕನ್ನು ‘ಬಲಿ’ ಹೆಸರಿನಲ್ಲಿ ಕೊಂದಿರುವ ದುರ್ಘಟನೆ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿದೆ. ಬಾಲಕನನ್ನು ಕೊಂದ ಖಾಸಗಿ ಶಾಲೆ ಮಾಲೀಕ, ಪ್ರಾಂಶುಪಾಲ, ನಿರ್ದೇಶಕ ಹಾಗೂ ಇಬ್ಬರು ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಖಾಸಗಿ ಶಾಲೆ ‘ಡಿಎಲ್ ಪಬ್ಲಿಕ್ ಸ್ಕೂಲ್’ನಲ್ಲಿ 2ನೇ ತರಗತಿಯಲ್ಲಿ ವ್ಯಾಸಂಗ ಮಡುತ್ತಿದ್ದ ವಿದ್ಯಾರ್ಥಿ ಕೃತಾರ್ಥ್ ಎಂಬಾತನನ್ನು ಶಾಲೆಯ ಆಡಳಿತ ಮಂಡಳಿ ಬಲಿಕೊಟ್ಟಿದೆ. ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ, ಆತನನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ದೃಢಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಶಾಲೆಯ ಮಾಲೀಕ ಜಸೋಧನ್ ಸಿಂಗ್, ‘ಮೌಢ್ಯಾಚರಣೆ’ಯಲ್ಲಿ ಭಾರೀ ನಂಬಿಕೆ ಇಟ್ಟಿದ್ದಾರೆ. ಅವರಿಗೆ ಶಾಲೆ ಮತ್ತು ಕುಟುಂಬದ ಏಳಿಗೆಗಾಗಿ ಮಗುವನ್ನು ಬಲಿಕೊಡಬೇಕೆಂದು ಶಾಲೆಯ ನಿರ್ದೇಶಕ ದಿನೇಶ್ ಬಾಘೇಲ್ ತಿಳಿಸಿದ್ದಾರೆ. ಅದನ್ನು ನಂಬಿದ ಮಾಲೀಕ ಜಸೋಧನ್ ಸಿಂಗ್, ಶಾಲೆಯ ವಿದ್ಯಾರ್ಥಿಯನ್ನು ಬಲಿಕೊಡಲು ನಿರ್ಧರಿಸಿದ್ದು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣದಲ್ಲಿ ಶಾಲೆಯ ಮಾಲೀಕ ಜಸೋಧನ್ ಸಿಂಗ್, ನಿರ್ದೇಶಕ ದಿನೇಶ್ ಬಾಘೇಲ್ ಜೊತೆಗೆ, ಪ್ರಾಂಶುಪಾಲ ಲಕ್ಷ್ಮಣ್ ಸಿಂಗ್ ಮತ್ತು ಇಬ್ಬರು ಶಿಕ್ಷಕರಾದ ರಾಮಪ್ರಕಾಶ್ ಸೋಲಂಕಿ ಮತ್ತು ವೀರಪಾಲ್ ಸಿಂಗ್ ಅವರನ್ನೂ ಪೊಲೀಸರು ಬಂಧಿಸಿದ್ದಾರೆ.

ಐವರ ವಿರುದ್ಧವೂ ಭಾರತೀಯ ನ್ಯಾಯ ಸಂಹಿತಾ 2023ರ ಸೆಕ್ಷನ್ 103 (1)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

“ಸೆಪ್ಟೆಂಬರ್ 23 ರಂದು, ಶಿಕ್ಷಕ ರಾಮಪ್ರಕಾಶ್ ಸೋಲಂಕಿ, ದಿನೇಶ್ ಬಾಘೇಲ್ ಮತ್ತು ಶಾಲೆಯ ಮಾಲೀಕ ಜಸೋಧನ್ ಸಿಂಗ್ ಅವರು ಶಾಲೆಯ ಹಾಸ್ಟೆಲ್‌ನಿಂದ ವಿದ್ಯಾರ್ಥಿಯನ್ನು ಅಪಹರಿಸಿದ್ದರು. ಬಳಿಕ, ಆತನನ್ನು ಕೊಲೆ ಮಾಡಿದ್ದಾರೆ” ಎಂದು ಹತ್ರಾಸ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಅಶೋಕ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

“ಕೃತಾರ್ಥ್‌ಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಅತನ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿಲ್ಲ. ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಬಾಲಕನ ಪೋಷಕರಿಗೆ ಆರೋಪಿಗಳು ಕರೆ ಮಾಡಿ ತಿಳಿಸಿದ್ದಾರೆ. ಆದರೆ, ಮಗುವಿನ ಕುಟುಂಬಸ್ಥರು ತಮ್ಮ ಮಗ ಕೃತಾರ್ಥ್ ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿ, ಪೊಲೀಸರಿಗೆ ದೂರು ನೀಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌ ಪ್ರಶಸ್ತಿ ಪಡೆದ ಸಂಶೋಧನೆಯ ಸುತ್ತ ಒಂದು ನೋಟ

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ...

ಪತ್ರಕರ್ತೆಯ ಎದೆ ಹಿಂಡಿ ವಿಕೃತಿ ಮೆರೆದ ಪೊಲೀಸ್ ಅಧಿಕಾರಿಗೆ DCP ಹುದ್ದೆಗೆ ಬಡ್ತಿ ನೀಡಿದ ಮೋಶಾ ಸರ್ಕಾರ!

ಜಂತರ್ ಮಂತರ್‌ನಲ್ಲಿ ನಡೆದ ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರತಿಭಟನೆ...

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....

ಆರೋಪಿಯ IQ ಕಡಿಮೆ ಇದ್ದ ಮಾತ್ರಕ್ಕೆ ವಿಚಾರಣೆಯಿಂದ ಹೊರಗಿಡಲು ಸಾಧ್ಯವಿಲ್ಲ: ಕೇರಳ ಹೈಕೋರ್ಟ್

ಕಡಿಮೆ ಬುದ್ಧಿಮತ್ತೆ (IQ) ಅಥವಾ ಬೌದ್ಧಿಕ ಅಸಮರ್ಥತೆ ಇದೆ ಎಂಬ ಕಾರಣವೊಂದರಿಂದಲೇ...