ವಾಯವ್ಯ ಚೀನಾದಲ್ಲಿ ಭೂಕಂಪ: 116 ಸಾವು, 400ಕ್ಕೂ ಹೆಚ್ಚು ಗಾಯ

Date:

ವಾಯವ್ಯ ಚೀನಾದಲ್ಲಿ ಉಂಟಾದ ಭೂಕಂಪದಿಂದಾಗಿ ಕನಿಷ್ಠ 111 ಜನರು ಸಾವನ್ನಪ್ಪಿ, 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಎಂದು ಸ್ಥಳೀಯ ಭೂಕಂಪ ಪರಿಹಾರ ಪ್ರಧಾನ ಕಚೇರಿ ಮಂಗಳವಾರ ತಿಳಿಸಿದೆ.

ಗನ್ಸು ಪ್ರಾಂತ್ಯದಲ್ಲಿ ಸುಮಾರು 100 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಭೂಕಂಪ ಪರಿಹಾರ ಕೇಂದ್ರವನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮವೊಂದು ತಿಳಿಸಿದೆ.

ಚೀನಾದಲ್ಲಿ ಉಂಟಾದ  ಭೂಕಂಪದಿಂದ ಹಲವು ಮನೆಗಳು ಕುಸಿಯುವುದು ಸೇರಿದಂತೆ ಭಾರಿ ಪ್ರಮಾಣದಲ್ಲಿ ಹಾನಿಯುಂಟಾಗಿದೆ. ಜನರು ರಕ್ಷಣೆಗಾಗಿ ರಸ್ತೆಗೆ ಓಡಿಬಂದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸೋಮವಾರ ಸ್ಥಳೀಯ ಕಾಲಮಾನ ರಾತ್ರಿ 11:59 ಗಂಟೆಗೆ ಗನ್ಸು ಮತ್ತು ಕಿಂಗ್ಹೈ ಪ್ರಾಂತ್ಯಗಳಲ್ಲಿ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ.

ರಕ್ಷಣಾ ಕಾರ್ಯಗಳು ನಡೆಯುತ್ತಿದ್ದು, ಅವಶೇಷಗಳ ಅಡಿ ಸಿಲುಕಿರುವವ ರಕ್ಷಣೆಗೆ ಎಲ್ಲ ರೀತಿಯ ಪ್ರಯತ್ನ ಮಾಡುವುದಾಗಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ಸಂಸ್ಕೃತಿಯನ್ನು ಅಧೋಗತಿಗೆ ತಳ್ಳುತ್ತಿರುವ ಬಿಜೆಪಿ ಅಂತಃಕಲಹ

ಅಮೆರಿಕದ ಭೂವಿಜ್ಞಾನ ಸಮೀಕ್ಷಾ ಸಂಸ್ಥೆ ಪ್ರಕಾರ ರಿಕ್ಟರ್ ಮಾಪಕದಲ್ಲಿ ಭೂಕಂಪನವು ತೀವ್ರತೆ 5.9 ಎಂದು ದಾಖಲಾಗಿದೆ.

ಆರಂಭಿಕ ಭೂಕಂಪದ ನಂತರ ಹಲವಾರು ಸಣ್ಣ ಕಂಪನಗಳು ಸಂಭವಿಸಿದವು. ಉತ್ತರ ಶಾಂಕ್ಸಿ ಪ್ರಾಂತ್ಯದ ಕ್ಸಿಯಾನ್‌ನಲ್ಲಿ ಸುಮಾರು 570 ಕಿಲೋಮೀಟರ್ ದೂರದಲ್ಲಿ 6.2 ತೀವ್ರತೆಯಲ್ಲಿ ಭೂಕಂಪನವಾಗಿದೆ ಎಂದು ವರದಿಯಾಗಿದೆ.

ಕೆಲವು ಸ್ಥಳೀಯ ಹಳ್ಳಿಗಳಲ್ಲಿ ವಿದ್ಯುತ್ ಮತ್ತು ನೀರು ಸರಬರಾಜು ಸ್ಥಗಿತಗೊಂಡಿದೆ. ಹಲವು ವಿಡಿಯೋಗಳಲ್ಲಿ ಸಿಬ್ಬಂದಿ ಟಾರ್ಚ್‌ಲೈಟ್‌ನಿಂದ ಶಿಲಾಖಂಡರಾಶಿಗಳ ಮೂಲಕ ಹೋಗುತ್ತಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉತ್ತರ ಚೀನಾದಾದ್ಯಂತ ತಾಪಮಾನವು ತೀವ್ರ ಕುಸಿದಿದೆ ಮತ್ತು ತುರ್ತು ಸೇವೆಗಳು ಟೆಂಟ್‌ಗಳನ್ನು ಸ್ಥಾಪಿಸಿದಾಗ ನಿವಾಸಿಗಳು ಚಳಿಯಿಂದ ರಕ್ಷಣೆ ಪಡೆಯಲು ಬೆಂಕಿಯ ಮುಂದೆ ಕುಳಿತಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿಎಂಸಿಗೆ ಈಗಲೂ ಮೈತ್ರಿ ಬಾಗಿಲು ತೆರೆದಿದೆ: ಕಾಂಗ್ರೆಸ್ ಮುಖಂಡ

ಇಂಡಿಯಾ ಒಕ್ಕೂಟಕ್ಕೆ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ. ಪಶ್ಚಿಮ ಬಂಗಾಳದಲ್ಲಿ ಎಲ್ಲ 42...

ರೈತ ಹೋರಾಟ | ಸರ್ಕಾರದ ದಮನಕ್ಕೆ ಬಗ್ಗದ ‘ದೆಹಲಿ ಚಲೋ’; ಈವರೆಗೆ 6 ರೈತರು ಸಾವು

ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ರೈತ ಸಾಲ ಮನ್ನಾಕ್ಕಾಗಿ ಆಗ್ರಹಿಸಿದ...

ಪ್ರಜಾಪ್ರಭುತ್ವ, ಸತ್ಯ ಉಳಿಸುವಲ್ಲಿ ಮಾಧ್ಯಮ ವಿಫಲವಾದ್ರೆ ಮುಂದೇನು?

ದೇಶದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ...

ಲೋಕಸಭೆ ಚುನಾವಣೆಗೆ 195 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಲೋಕಸಭೆ ಚುನಾವಣೆಗೆ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ....