ಐಸಿಸ್, ಅಲ್-ಖೈದಾ ಜೊತೆ ಸಂಪರ್ಕ ಹೊಂದಿರುವ ಆರೋಪ; 12 ಮಂದಿ ಬಂಧನ

Date:

ಇತ್ತೀಚೆಗಷ್ಟೇ, ಜಮ್ಮು-ಕಾಶ್ಮೀರದ ಇಬ್ಬರು ಯುವಕರನ್ನು ‘ಐಸಿಸ್’ ಜೊತೆ ನಂಟು ಹೊಂದಿದ್ದಾರೆಂಬ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿ, ಬಿಡುಗಡೆ ಮಾಡಿದೆ. ಅವರಿಬ್ಬರೂ ‘ಭಯೋತ್ಪಾದಕ’ ಸಂಘಟನೆ ಜೊತೆ ಸಂಬಂಧ ಹೊಂದಿದ್ದಾರೆ ಎಂಬುದನ್ನು ಸಾಬೀತು ಮಾಡಲು ಯಾವುದೇ ಸಾಕ್ಷ್ಯ-ಪುರಾವೆಗಳಿಲ್ಲವೆಂದು ಹೇಳಿದ್ದ ನ್ಯಾಯಾಲಯ, ದೆಹಲಿ ಪೊಲೀಸರಿಗೆ ಛೀಮಾರಿಯನ್ನೂ ಹಾಕಿದೆ. ಇದೀಗ, ಅದೇ ದೆಹಲಿ ಪೊಲೀಸರು ಐಸಿಸ್‌ ಮತ್ತು ಅಲ್‌-ಖೈದಾ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ 12 ಮಂದಿಯನ್ನು ಬಂಧಿಸಿದ್ದಾರೆ.

- Advertisement -

ದೆಹಲಿ ಪೊಲೀಸರು ಆಂಧ್ರಪ್ರದೇಶ ಪೊಲೀಸರ ಸಹಕಾರದೊಂದಿಗೆ ವಿವಿಧ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಆಂಧ್ರಪ್ರದೇಶದ ಮೊಹಮ್ಮದ್ ರಹ್ಮತುಲ್ಲಾ ಶರೀಫ್, ಮಿರ್ಜಾ ಸೊಹೈಲ್ ಬೇಗ್ ಹಾಗೂ ಮೊಹಮ್ಮದ್ ಡ್ಯಾನಿಶ್, ಬಿಹಾರದ ಶಾದ್ಮಾನ್ ದಿಲ್ಕುಶ್ ಮತ್ತು ಅಜ್ಮಾನುಲ್ಲಾ ಖಾನ್, ದೆಹಲಿಯ ರೋಹಿಣಿ ನಿವಾಸಿ ಲಕ್ಕಿ ಅಹ್ಮದ್, ಪಶ್ಚಿಮ ಬಂಗಾಳದ ಮೀರ್ ಆಸಿಫ್ ಅಲಿ, ರಾಜಸ್ಥಾನದ ಜೀಶನ್, ಕರ್ನಾಟಕದ ಅಬ್ದುಲ್ ಸಲಾಂ, ಮಹಾರಾಷ್ಟ್ರದ ಶಾ ರುಖ್ ಖಾನ್ ಮತ್ತು ಶಿಯಾಕ್ ಪಿಯಾಜ್ ಉರ್ ರೆಹಮಾನ್ ಹಾಗೂ ತೆಲಂಗಾಣದ ಸೈದಾ ಬೇಗಂ ಅವರನ್ನು ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಈ 12 ಮಂದಿ ಯುವಕರು ಗೇಮಿಂಗ್ ಆ್ಯಪ್ ಮೂಲಕ ಅಲ್‌-ಖೈದಾ ಮತ್ತು ಐಸಿಸ್‌ ಸಂಘಟನೆಯವರನ್ನು ಸಂಪರ್ಕಿಸಿದರು, ಸಂಘಟನೆಗಳನ್ನು ಸೇರಿಕೊಂಡಿದ್ದರು. ಐಸಿಸ್‌ಗೆ ಸಂಬಂಧಿಸಿದ ಗುಂಪಾದ ‘ಬೆನೆಕ್ಸ್ ಕಾಮ್’ನೊಂದಿಗೆ ಸಂಪರ್ಕ ಹೊಂದಿದ್ದರು” ಎಂದು ಪೊಲೀಸರು ಆರೋಪಿಸಿದ್ದಾರೆ.

ಈ ಲೇಖನ ಓದಿದ್ದೀರಾ?: UAPA | ಪೂರ್ವಗ್ರಹೀತ ವರದಿ – ಸತ್ತ ಸತ್ಯ: ಖುಲಾಸೆಯಾದರೂ ಅಳಿಯದ ‘ಭಯೋತ್ಪಾದಕ’ ಕಳಂಕ

“ಬಂಧಿತರು ತಮ್ಮ ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳಲ್ಲಿ ರಾಷ್ಟ್ರಧ್ವಜದ ಬದಲಿಗೆ ಐಸಿಸ್ ಧ್ವಜವನ್ನು ಹಾಕಿದ್ದರು. ಅವರು ರಾಷ್ಟ್ರಧ್ವಜವನ್ನು ಸುಟ್ಟು ಹಾಕಿದ್ದರು ಮತ್ತು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಪರಿವರ್ತಿಸುವ ಕುರಿತು ಪ್ರತಿಪಾದಿಸಿದ್ದರು. ಅವರು ರಾಷ್ಟ್ರಗೀತೆಯನ್ನು ಅಪಹಾಸ್ಯ ಮಾಡಿದ್ದರು” ಎಂದು ಅಧಿಕಾರಿಗಳು ದೂರಿದ್ದಾರೆ.

“ವಿಜಯವಾಡದ ನಿವಾಸಿಗಳಾದ ಮೊಹಮ್ಮದ್ ರಹ್ಮತುಲ್ಲಾ ಶರೀಫ್, ಮಿರ್ಜಾ ಸೊಹೈಲ್ ಬೇಗ್ ಹಾಗೂ ಮೊಹಮ್ಮದ್ ಡ್ಯಾನಿಶ್ ಎಂಬ ಮೂವರು ಆರೋಪಿಗಳು ಯುವಕರನ್ನು ಉಗ್ರಗಾಮಿಗಳನ್ನಾಗಿ ಮಾಡಲು ಮತ್ತು ಜಿಹಾದ್‌ಗೆ ಸಿದ್ಧಪಡಿಸಲು ‘ಅಲ್ ಮಲಿಕ್ ಇಸ್ಲಾಮಿಕ್ ಯೂತ್’ ಎಂಬ ಗುಂಪನ್ನು ರಚಿಸಿದ್ದರು” ಎಂದು ಪೊಲೀಸರು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...