ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ 8.30 ಕ್ಕೆ ಈ ಘಟನೆ ನಡೆದಿದ್ದು, ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿ ದುರ್ಗ್‌ನ ಜಿಲ್ಲಾಧಿಕಾರಿ ರಿಚಾ ಪ್ರಕಾಶ್ ಚೌಧರಿ, “ದುರ್ಗ್‌ನಲ್ಲಿ ಕಾರ್ಮಿಕರಿದ್ದ ಬಸ್ ಕಂದಕಕ್ಕೆ ಬಿದ್ದಿದ್ದು 12 ಪ್ರಯಾಣಿಕರು ಮೃತಪಟ್ಟಿದ್ದು, 14 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಚುನಾವಣಾ ಪ್ರಚಾರದ ವೇಳೆ ಶೋಭಾ ಕರಂದ್ಲಾಜೆ ಕಾರು ಅಪಘಾತ: ಬಿಜೆಪಿ ಕಾರ್ಯಕರ್ತ ಸಾವು
“ಗಾಯಗೊಂಡವರ ಪೈಕಿ ಹನ್ನೆರಡು ಜನರನ್ನು ಎಐಐಎಂಎಸ್ (ರಾಯಪುರ) ಗೆ ಕಳುಹಿಸಲಾಗಿದೆ. ಉಳಿದ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ. ನಾವು ಅವರಿಗೆ ಸಾಧ್ಯವಾದಷ್ಟು ಉತ್ತಮವಾದ ಆರೈಕೆಯನ್ನು ನೀಡುತ್ತಿದ್ದೇವೆ” ಎಂದು ಎಂದು ಜಿಲ್ಲಾಧಿಕಾರಿ ಹೇಳಿದರು.
#WATCH | Chhattisgarh: On Durg bus accident, DM Richa Prakash Chaudhary says, “In Kumhari, a bus carrying the labourers of Kedia Distillers fell into a ditch at around 8.30 pm. 12 people have been confirmed dead. 14 others are admitted to the hospital and undergoing treatment…… pic.twitter.com/AT3PBvZ1Ev
— ANI (@ANI) April 9, 2024
“ಬಸ್ಸಿನೊಳಗೆ ಸಿಲುಕಿರುವ ಪ್ರಯಾಣಿಕರನ್ನು ಹೊರತೆಗೆಯುವ ಪ್ರಕ್ರಿಯೆ ನಡೆಯುತ್ತಿದೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ” ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
दुर्ग के कुम्हारी के पास निजी कंपनी के कर्मचारियों से भरी बस के दुर्घटनाग्रस्त होने की दुःखद सूचना प्राप्त हुई। इस दुर्घटना में 11 कर्मचारियों के निधन का समाचार प्राप्त हो रहा है।
मैं ईश्वर से दिवंगत आत्माओं को शांति एवं शोकसंतप्त परिजनों को संबल प्रदान करने की प्रार्थना करता…
— Vishnu Deo Sai (Modi Ka Parivar) (@vishnudsai) April 9, 2024
ದುರ್ಗ್ ಬಸ್ ಅಪಘಾತದ ಕುರಿತು ಡಿಎಂ ರಿಚಾ ಪ್ರಕಾಶ್ ಚೌಧರಿ ಮಾತನಾಡಿ, “ಡಿಯಾ ಡಿಸ್ಟಿಲ್ಲರ್ಸ್‌ನ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಹಳ್ಳಕ್ಕೆ ಬಿದ್ದು 12 ಜನರು ಸಾವನ್ನಪ್ಪಿದ್ದಾರೆ. 14 ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರೋಗಿಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಅಪಘಾತದ ಕಾರಣ ತಿಳಿಯಲು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಾಗುತ್ತಿದೆ. ತನಿಖೆ ಬಳಿಕ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.
ಈ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಎಕ್ಸ್ (ಟ್ವಿಟ್ಟರ್) ಪೋಸ್ಟ್ ಮಾಡಿದ್ದಾರೆ. “ಖಾಸಗಿ ಸಂಸ್ಥೆಯೊಂದರ ಉದ್ಯೋಗಿಗಳಿದ್ದ ಬಸ್ ದುರ್ಗ್‌ನ ಕುಮ್ಹಾರಿ ಬಳಿ ಅಪಘಾತ ಸಂಭವಿಸಿದ ಸುದ್ದಿ ಕೇಳಿ ನಾನು ದುಃಖಿತನಾಗಿದ್ದೇನೆ” ಎಂದಿದ್ದಾರೆ.
ಇದನ್ನು ಓದಿದ್ದೀರಾ? ಬೆಂಗಳೂರು | ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ
“ಅಪಘಾತದಲ್ಲಿ 11 ಉದ್ಯೋಗಿಗಳು ಸಾವನ್ನಪ್ಪಿರುವ ಸುದ್ದಿಯು ನನಗೂ ಬಂದಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಮೃತರ ಕುಟುಂಬಗಳಿಗೆ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಗಾಯಗೊಂಡಿರುವ ಚಿಕಿತ್ಸೆ ನೀಡಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.