ಜಾರ್ಖಂಡ್ | ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ 12 ಸಾವು

Date:

Advertisements

ಜಾರ್ಖಂಡ್‌ನಲ್ಲಿ ಈ ವರ್ಷದ ಅಬಕಾರಿ ಕಾನ್‌ಸ್ಟೆಬಲ್ ಸ್ಪರ್ಧಾತ್ಮಕ ಪರೀಕ್ಷೆಗಾಗಿ ನೇಮಕಾತಿ ದೈಹಿಕ ಪರೀಕ್ಷೆಯ ಸಮಯದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಈ ಬಾರಿ ಅಬಕಾರಿ ಕಾನ್‌ಸ್ಟೆಬಲ್ ಸ್ಪರ್ಧಾತ್ಮಕ ಪರೀಕ್ಷೆಯ ಮೌಲ್ಯಮಾಪನದಲ್ಲಿ ಬದಲಾವಣೆ ಮಾಡಲಾಗಿದೆ. ಅಭ್ಯರ್ಥಿಗಳು 1.6 ಕಿಮೀ ಬದಲಿಗೆ 10 ಕಿಮೀ ಓಡಬೇಕು, ಫಿಟ್ನೆಸ್ ಮಟ್ಟವನ್ನು ಮೌಲ್ಯಮಾಪನ ಮಾಡದಿರುವುದು, ಅತಿಯಾದ ಆರ್ದ್ರತೆ ಮತ್ತು ಲಿಖಿತ ಪರೀಕ್ಷೆಯ ಮೊದಲು ದೈಹಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರದಿಂದ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಉನ್ನತ ಅಧಿಕಾರಿಗಳು ಉಲ್ಲೇ ಖಿಸಿದ್ದಾರೆ.

ಪರೀಕ್ಷೆಗೆ ಕಡ್ಡಾಯವಾಗಿರುವ 10 ಕಿಮೀ ಓಟವನ್ನು ಓಡುವಾಗ 12 ಮಂದಿ ಸಾವನ್ನಪ್ಪಿದ್ದಾರೆ. ಆಗಸ್ಟ್ 22 ರಿಂದ ಜಾರ್ಖಂಡ್ ಪೊಲೀಸರು ಮೇಲ್ವಿಚಾರಣೆಯಲ್ಲಿ ದೈಹಿಕ ಪರೀಕ್ಷೆಗಳು ನೇಮಕಾತಿ ಡ್ರೈವ್‌ನ ಮೊದಲ ಹಂತ ನಡೆಯುತ್ತಿದೆ. 60 ನಿಮಿಷಗಳಲ್ಲಿ ಓಟವನ್ನು ಪೂರ್ಣಗೊಳಿಸುವ ಅರ್ಹ ಅಭ್ಯರ್ಥಿಗಳು ನಂತರ ಲಿಖಿತ ಪರೀಕ್ಷೆ ಮತ್ತು ಅಂತಿಮ ವೈದ್ಯಕೀಯ ಪರೀಕ್ಷೆಗೆ ಒಳಗಾಗುತ್ತಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ| ವಿನೇಶ್‌ ಫೋಗಟ್‌ ಪಕ್ಷ ರಾಜಕಾರಣ ಮಾಡಿದರೆ ಆಕೆ ಎತ್ತಿದ ಪ್ರಶ್ನೆಗಳು ಸುಳ್ಳಾಗವು

Advertisements

ಮೃತರನ್ನು 19 ರಿಂದ 31 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದ್ದು, ಪಲಾಮು ಮೂಲದ ಅಮರೇಶ್ ಕುಮಾರ್, ಪ್ರದೀಪ್ ಕುಮಾರ್, ಅಜಯ್ ಮಹತೋ, ಅರುಣ್ ಕುಮಾರ್ ಮತ್ತು ದೀಪಕ್ ಕುಮಾರ್ ಪಾಂಡು, ಹಜಾರಿಬಾಗ್‌ನ ಮನೋಜ್ ಕುಮಾರ್ ಮತ್ತು ಸೂರಜ್ ಕುಮಾರ್ ವರ್ಮಾ,ಸಾಹಿಬ್‌ಗಂಜ್‌ನ ವಿಕಾಸ್ ಲಿಂಡಾ ಮತ್ತು ಗಿರಿದಿಹ್‌ನ ಸುಮಿತ್ ಯಾದವ್. ಇನ್ನು ಮೂವರ ವಿವರಗಳನ್ನು ಇದುವರೆಗೂ ಬಹಿರಂಗಪಡಿಸಿಲ್ಲ. ಸೆಪ್ಟೆಂಬರ್ 2ರವರೆಗೆ ಒಟ್ಟು 1.87 ಲಕ್ಷ ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಹಾಜರಾಗಿದ್ದು,ಅದರಲ್ಲಿ 1.17 ಲಕ್ಷ ಮಂದಿ ಮುಂದಿನ ಸುತ್ತಿಗೆ ಅರ್ಹತೆ ಪಡೆದಿದ್ದಾರೆ.

ಸರ್ಕಾರಿ ಮೂಲಗಳ ಪ್ರಕಾರ, ಜಾರ್ಖಂಡ್ ರಾಜ್ಯವು 2000ರಲ್ಲಿ ರಚನೆಯಾದ ನಂತರ ಇದೇ ಮೊದಲ ಬಾರಿಗೆ ನೇಮಕಾತಿ ಅಭಿಯಾನವನ್ನು ನಡೆಸಲಾಗಿದೆ. 2008 ಮತ್ತು 2019 ರಲ್ಲಿ ಪ್ರಾರಂಭಿಸಲಾಯಿತಾದರೂ ಅದು ಪೂರ್ಣಗೊಂಡಿರಲಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X