ಅಭ್ಯರ್ಥಿಗಳ ಸೋಗಿನಲ್ಲಿ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟಿಇಟಿ ಪರೀಕ್ಷೆ) 2024ಕ್ಕೆ ಹಾಜರಾಗಿ ಪರೀಕ್ಷೆ ಬರೆದ ಸುಮಾರು 12 ಮಂದಿಯನ್ನು ಬಂಧನ ಮಾಡಲಾಗಿದೆ.
ಬಂಧಿತರು ದರ್ಭಾಂಗಾ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಇತರ ಅಭ್ಯರ್ಥಿಗಳ ಪರವಾಗಿ ಪರೀಕ್ಷೆ ಬರೆದಿದ್ದಾರೆ ಎಂದು ಆರೋಪಿಸಲಾಗಿದೆ. ಬಂಧಿತ 12 ಮಂದಿಯಲ್ಲಿ ಇಬ್ಬರು ಮಹಿಳೆಯರೂ ಸೇರಿದ್ದಾರೆ ಎಂದು ಬಿಹಾರ ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ದರ್ಭಾಂಗ ಎಸ್‌ಎಸ್‌ಪಿ ಜಗುನಾಥ ರೆಡ್ಡಿ, “ಲಹೇರಿಯಾಸರೈ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಕೇಂದ್ರಗಳಲ್ಲಿ ಪಟ್ಟು ಒಂಬತ್ತು ಮಂದಿಯನ್ನು ಮತ್ತು ಸದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಒಬ್ಬ ವ್ಯಕ್ತಿಯನ್ನು ಬಹದ್ದೂರ್‌ಪುರ ಪೊಲೀಸ್ ಠಾಣೆಯ ಕೇಂದ್ರದಿಂದ ಬಂಧಿಸಲಾಗಿದೆ” ಎಂದು ಹೇಳಿದ್ದಾರೆ.
“ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಬಯೋಮೆಟ್ರಿಕ್ ಫಿಂಗರ್‌ಪ್ರಿಂಟ್ ಸ್ಕ್ಯಾನ್ ಮಾಡುವ ಸಂದರ್ಭದಲ್ಲಿ ಈ 12 ಮಂದಿ ಅಭ್ಯರ್ಥಿಗಳ ಸೋಗಿನಲ್ಲಿ ಪರೀಕ್ಷೆ ಬರೆಯಲು ಬಂದವರು ಸಿಕ್ಕಿ ಬಿದ್ದಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ನೀಟ್ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯಾಗಿದೆ, ಉತ್ತರ ನೀಡಿ: ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಸುಪ್ರೀಂ ನೋಟಿಸ್
ಪರೀಕ್ಷಾ ಕೇಂದ್ರದ ನಿರ್ವಾಹಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಂಚಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರಿದಿದೆ. ಅಸಲಿ ಅಭ್ಯರ್ಥಿಗಳ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
STORY | 12 people arrested in Bihar for impersonating candidates in CTET exam
READ: https://t.co/00klIlRXvL pic.twitter.com/wiF11covUr
— Press Trust of India (@PTI_News) July 8, 2024
ಇನ್ನು ಅಂತರರಾಜ್ಯ ಪರೀಕ್ಷೆ ಅಕ್ರಮದಲ್ಲಿ ಬಂಧಿತರು ಸಂಬಂಧ ಹೊಂದಿದ್ದಾರೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸರ್ಕಾರಿ ವಲಯದಲ್ಲಿ ಬೋಧನಾ ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳಿಗೆ ವಾರ್ಷಿಕವಾಗಿ ರಾಷ್ಟ್ರೀಯ ಮಟ್ಟದಲ್ಲಿ ಈ ಸಿಟಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ.