ಬಿಹಾರ | ಅಭ್ಯರ್ಥಿಗಳ ಸೋಗಿನಲ್ಲಿ ಸಿಟಿಇಟಿ ಪರೀಕ್ಷೆ ಬರೆದ 12 ಮಂದಿಯ ಬಂಧನ

Date:

ಅಭ್ಯರ್ಥಿಗಳ ಸೋಗಿನಲ್ಲಿ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟಿಇಟಿ ಪರೀಕ್ಷೆ) 2024ಕ್ಕೆ ಹಾಜರಾಗಿ ಪರೀಕ್ಷೆ ಬರೆದ ಸುಮಾರು 12 ಮಂದಿಯನ್ನು ಬಂಧನ ಮಾಡಲಾಗಿದೆ.

- Advertisement -

ಬಂಧಿತರು ದರ್ಭಾಂಗಾ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಇತರ ಅಭ್ಯರ್ಥಿಗಳ ಪರವಾಗಿ ಪರೀಕ್ಷೆ ಬರೆದಿದ್ದಾರೆ ಎಂದು ಆರೋಪಿಸಲಾಗಿದೆ. ಬಂಧಿತ 12 ಮಂದಿಯಲ್ಲಿ ಇಬ್ಬರು ಮಹಿಳೆಯರೂ ಸೇರಿದ್ದಾರೆ ಎಂದು ಬಿಹಾರ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ದರ್ಭಾಂಗ ಎಸ್‌ಎಸ್‌ಪಿ ಜಗುನಾಥ ರೆಡ್ಡಿ, “ಲಹೇರಿಯಾಸರೈ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಕೇಂದ್ರಗಳಲ್ಲಿ ಪಟ್ಟು ಒಂಬತ್ತು ಮಂದಿಯನ್ನು ಮತ್ತು ಸದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಒಬ್ಬ ವ್ಯಕ್ತಿಯನ್ನು ಬಹದ್ದೂರ್‌ಪುರ ಪೊಲೀಸ್ ಠಾಣೆಯ ಕೇಂದ್ರದಿಂದ ಬಂಧಿಸಲಾಗಿದೆ” ಎಂದು ಹೇಳಿದ್ದಾರೆ.

“ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಬಯೋಮೆಟ್ರಿಕ್ ಫಿಂಗರ್‌ಪ್ರಿಂಟ್ ಸ್ಕ್ಯಾನ್ ಮಾಡುವ ಸಂದರ್ಭದಲ್ಲಿ ಈ 12 ಮಂದಿ ಅಭ್ಯರ್ಥಿಗಳ ಸೋಗಿನಲ್ಲಿ ಪರೀಕ್ಷೆ ಬರೆಯಲು ಬಂದವರು ಸಿಕ್ಕಿ ಬಿದ್ದಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ನೀಟ್ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯಾಗಿದೆ, ಉತ್ತರ ನೀಡಿ: ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಸುಪ್ರೀಂ ನೋಟಿಸ್

ಪರೀಕ್ಷಾ ಕೇಂದ್ರದ ನಿರ್ವಾಹಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಂಚಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರಿದಿದೆ. ಅಸಲಿ ಅಭ್ಯರ್ಥಿಗಳ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.


ಇನ್ನು ಅಂತರರಾಜ್ಯ ಪರೀಕ್ಷೆ ಅಕ್ರಮದಲ್ಲಿ ಬಂಧಿತರು ಸಂಬಂಧ ಹೊಂದಿದ್ದಾರೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸರ್ಕಾರಿ ವಲಯದಲ್ಲಿ ಬೋಧನಾ ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳಿಗೆ ವಾರ್ಷಿಕವಾಗಿ ರಾಷ್ಟ್ರೀಯ ಮಟ್ಟದಲ್ಲಿ ಈ ಸಿಟಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನ ಮರಣ ನೋಂದಣಿ, ತಡ ಮಾಡಿದರೆ ಕೋರ್ಟ್ ಗೆ ಅಲೆಯಬೇಕಾದೀತು!

ಜನನ ಮತ್ತು ಮರಣಗಳ ವಿಳಂಬ ನೋಂದಣಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ನಿಯಮಗಳನ್ನು...

ಇಳಿ ಮೂವತ್ತರಲ್ಲೇ ಮಹಿಳೆಯರ ಹೃದಯಕ್ಕೆ ಮುಪ್ಪು; ಪುರುಷರಿಗಿಂತ 10 ವರ್ಷ ಮುನ್ನವೇ ಆರಂಭ!

ಮಹಿಳೆಯರ ಹೃದಯದ ಆರೋಗ್ಯದ ಕುರಿತಂತೆ ಇದುವರೆಗೆ ಇದ್ದ ಸಾಮಾನ್ಯ ನಂಬಿಕೆಗಳನ್ನು ಸಂಪೂರ್ಣವಾಗಿ...

ಹವಾಮಾನ ವೈಪರೀತ್ಯ: ತೀವ್ರ ಶಾಖದ ಅಪಾಯಕ್ಕೆ ತುತ್ತಾಗುತ್ತಿರುವವರಲ್ಲಿ ಭಾರತೀಯರೇ ಹೆಚ್ಚು

ಮಾನವ ಕೃತ್ಯಗಳಿಂದಾಗಿ ಭಾರೀ ಹವಾಮಾನ ವೈಪರೀತ್ಯ‌ ಎದುರಾಗಿದೆ. ಉಳ್ಳವರ ಕೃತ್ಯಕ್ಕೆ ಇಡೀ...

ಬ್ರಿಕ್ಸ್‌ ಗೈರುಹಾಜರಿಗೆ ಬಾಂಗ್ಲಾದ ಅದಾನಿ ವಿದ್ಯುತ್‌ ಸ್ಥಾವರ ಸ್ಥಗಿತ; ಬಿಎನ್‌ಪಿ ಗಂಭೀರ ಆರೋಪ

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶದ ಪ್ರಧಾನಿ ತಾರಿಖ್...