ನವೆಂಬರ್ 1ರ ಬುಧವಾರ ಸಂಜೆ 12 ವರ್ಷದ ಬಾಲಕನೊಬ್ಬ ಕೇರಳ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಜೀವ ಬೆದರಿಕೆ ಹಾಕಿದ್ದಾನೆ. ಸಂಜೆ 5 ಗಂಟೆ ಸುಮಾರಿಗೆ ಪೊಲೀಸರಿಗೆ ಕರೆ ಬಂದಿತ್ತು.
ಪ್ರಕರಣ ದಾಖಲಿಸಿಕೊಂಡು ಪ್ರಾಥಮಿಕ ತನಿಖೆ ನಡೆಸಿದಾಗ ಎರ್ನಾಕುಲಂ ಮೂಲದ 7ನೇ ತರಗತಿ ವಿದ್ಯಾರ್ಥಿಯೊಬ್ಬ ಜೀವ ಬೆದರಿಕೆಗೆ ಕಾರಣ ಎಂದು ತಿಳಿದು ಬಂದಿದೆ.
ಆದರೆ, ಪಿಣರಾಯಿ ವಿಜಯನ್ ಅವರಿಗೆ ಆಕಸ್ಮಿಕವಾಗಿ ಕರೆ ಮಾಡಲಾಗಿತ್ತು ಎಂದು ಬಾಲಕನ ಪೋಷಕರು ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.
ಈ ಸುದ್ದಿ ಓದಿದ್ದೀರಾ? ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ನಿರೀಕ್ಷಣಾ ಜಾಮೀನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್
ಘಟನೆಗೆ ಸಂಬಂಧಿಸಿದಂತೆ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 118 (ಬಿ) ಮತ್ತು 120 (ಒ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸೆಕ್ಷನ್ 118(ಬಿ) ಪೊಲೀಸ್, ಅಗ್ನಿಶಾಮಕ ದಳ ಅಥವಾ ಇತರ ಯಾವುದೇ ಅಗತ್ಯ ಸೇವೆಯನ್ನು ದಾರಿತಪ್ಪಿಸಲು ಉದ್ದೇಶಪೂರ್ವಕವಾಗಿ ವದಂತಿಗಳನ್ನು ಹರಡುವುದು ಅಥವಾ ಸುಳ್ಳು ಎಚ್ಚರಿಕೆಗಳನ್ನು ನೀಡುವುದರ ಬಗ್ಗೆ ತಿಳಿಸುತ್ತದೆ.
ಸೆಕ್ಷನ್ 120(ಒ) ಪುನರಾವರ್ತಿತ ಅಥವಾ ಅನಪೇಕ್ಷಿತ ಅಥವಾ ಅನಾಮಧೇಯ ಕರೆ, ಪತ್ರ, ಬರವಣಿಗೆ, ಸಂದೇಶ, ಇ-ಮೇಲ್ ಅಥವಾ ಮೆಸೆಂಜರ್ ಮೂಲಕ ಯಾವುದೇ ವ್ಯಕ್ತಿಗೆ ತೊಂದರೆ ಉಂಟುಮಾಡುವ ಬಗ್ಗೆ ತಿಳಿಸುತ್ತದೆ.