ದೇಶದಲ್ಲಿ ಇಂದಿಗೂ ಹೆಣ್ಣುಮಕ್ಕಳು ಅಸುರಕ್ಷಿತ; 12 ವರ್ಷಗಳ ಬಳಿಕ ನಿರ್ಭಯಾ ತಾಯಿ

Date:

ದೇಶವನ್ನೇ ಬೆಚ್ಚಿಬೀಳಿಸಿದ ಭೀಕರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ನಡೆದು ನಿನ್ನೆ (ಡಿಸೆಂಬರ್ 16) 12 ವರ್ಷಗಳಾಗಿದೆ. ಈ ಪ್ರಕರಣ ನಡೆದು 12 ವರ್ಷಗಳು ಕಳೆದರೂ ದೇಶದಲ್ಲಿ ಇಂದಿಗೂ ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲ ಎಂದು ಹೇಳಿದ್ದಾರೆ.

- Advertisement -

2012ರ ಡಿಸೆಂಬರ್ 16ರಂದು 23 ವರ್ಷದ ಯುವತಿಯ ಮೇಲೆ (ನಿರ್ಭಯಾ) ದಕ್ಷಿಣ ದೆಹಲಿಯಲ್ಲಿ ಚಲಿಸುವ ಬಸ್‌ನೊಳಗೆ ಆರು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಯುವತಿ ಡಿಸೆಂಬರ್ 29ರಂದು ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ನಿಧನರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಗನ್ ತೋರಿಸಿ ಸಾಮೂಹಿಕ ಅತ್ಯಾಚಾರ; ಯುಪಿ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್

ನಿರ್ಭಯಾ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆಗೈದ ಅಪರಾಧಿಗಳಾದ ಮುಖೇಶ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ ಸಿಂಗ್ (31) ಎಂಬ ನಾಲ್ವರು ಆರೋಪಿಗಳನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು. ಇನ್ನು ರಾಮ್ ಸಿಂಗ್ ಎಂಬ ಆರೋಪಿ ತಿಹಾರ್ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನೋರ್ವ ಆರೋಪಿ ಬಾಲಪರಾಧಿಯಾಗಿದ್ದು ಮೂರು ವರ್ಷ ಜೈಲು ಶಿಕ್ಷೆಯ ಬಳಿಕ 2015ರಲ್ಲಿ ಬಿಡುಗಡೆಗೊಂಡಿದ್ದಾನೆ.

ಘಟನೆ ನಡೆದು ಹನ್ನೆರಡು ವರ್ಷಗಳ ನಂತರ ಸೋಮವಾರ ನಿರ್ಭಯಾಳ ತಾಯಿ ಆಶಾದೇವಿ ಅವರು ‘ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ರಾಷ್ಟ್ರೀಯ ಸಮಾವೇಶ’ದಲ್ಲಿ ಭಾಗಿಯಾಗಿ ಭಾವನಾತ್ಮಕ ಭಾಷಣ ಮಾಡಿದರು.

ಇದನ್ನು ಓದಿದ್ದೀರಾ? ಸ್ವಾತಿಜಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಿ: ಕೇಜ್ರಿವಾಲ್‌ಗೆ ನಿರ್ಭಯಾ ತಾಯಿಯ ಮನವಿ

“12 ವರ್ಷಗಳ ನಂತರವೂ ಪರಿಸ್ಥಿತಿ ಬದಲಾಗಿಲ್ಲ ಎಂದು ನಾನು ಬಹಳ ನೋವಿನಿಂದ ಹೇಳುತ್ತೇನೆ. ದೇಶದ ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲ. ನನ್ನ ಮಗಳ ನ್ಯಾಯಕ್ಕಾಗಿ ನಾನು ಹೋರಾಡುವಾಗ ನನ್ನ ಮಗಳು ಇನ್ನೆಂದಿಗೂ ಹಿಂದಿರುಗುವುದಿಲ್ಲ ಎಂದು ನನಗೆ ತಿಳಿದಿತ್ತು. ಆದರೆ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಇಂತಹ ಘಟನೆ ಮತ್ತೆ ಮರುಕಳಿಸಬಾರದು ಎಂಬುದೊಂದೆ ನನ್ನ ಮನಸ್ಸಲ್ಲಿತ್ತು. ಅದಕ್ಕಾಗಿ ಹಲವು ಕಾರ್ಯಕ್ರಮದಲ್ಲಿ ಭಾಗಿಯಾದೆ. ಆದರೆ ಎಲ್ಲವೂ ನಿಷ್ಪ್ರಯೋಜಕ” ಎಂದಿದ್ದಾರೆ.

“ಇಂದಿಗೂ ಹಲವು ಅತ್ಯಾಚಾರ ಪ್ರಕರಣಗಳು ನ್ಯಾಯಾಲಯದ ಮೆಟ್ಟಿಲೇರದು. ಅಪರಾಧಿಗಳು ಯಾರೆಂದು ಗುರುತಿಸುವುದೇ ಒಂದು ವರ್ಷ ತೆಗೆದುಕೊಳ್ಳುತ್ತದೆ” ಎಂದು ಹೇಳಿದರು. ಈ ಸಂದರ್ಭದಲ್ಲೇ ಕೋಲ್ಕತ್ತಾದಲ್ಲಿ ನಡೆದ ಆರ್‌ಜಿ ಕರ್ ಘಟನೆಯನ್ನು ಉಲ್ಲೇಖಿಸಿದ ಆಶಾದೇವಿ ಅವರು, ನಿಜವಾಗಿ ಏನಾಯಿತು ಎಂಬುದು ಇನ್ನೂ ಯಾರಿಗೂ ತಿಳಿದಿಲ್ಲ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...