ಉತ್ತರ ಪ್ರದೇಶ | 13 ವರ್ಷದ ದಲಿತ ಬಾಲಕಿ ಮೇಲೆ ಅತ್ಯಾಚಾರ; ಯುಪಿಯಲ್ಲಿ ಹೆಚ್ಚಾದ ಮಹಿಳಾ ದೌರ್ಜನ್ಯ

Date:

13 ವರ್ಷದ ದಲಿತ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಫರ್ಸತ್‌ಗಂಜ್ ಪ್ರದೇಶದಲ್ಲಿ ನಡೆದಿದೆ ಎಂದು ಬುಧವಾರ ಪೊಲೀಸರು ಮಾಹಿತಿ ನಿಡಿದ್ದಾರೆ. ಡಿಸೆಂಬರ್ 30ರಂದು ಬಾಲಕಿ ಹೊಲಕ್ಕೆ ಹೋಗಿದ್ದಾಗ ದುಷ್ಕರ್ಮಿ ಈ ಕೃತ್ಯವನ್ನು ಎಸಗಿದ್ದಾರೆ ಎಂದು ವರದಿಯಾಗಿದೆ.

- Advertisement -

ಅದೇ ಗ್ರಾಮದ ಯುವಕನೊಬ್ಬ ಆಕೆಯನ್ನು ಕೊಳವೆ ಬಾವಿ ಬಳಿ ಎಳೆದೊಯ್ದು ಅತ್ಯಾಚಾರ ಎಸಗಿ, ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಭಯಗೊಂಡ ಬಾಲಕಿ ಮನೆಗೆ ಹಿಂತಿರುಗಿ ತನ್ನ ತಾಯಿಗೆ ತಿಳಿಸಿದ್ದು, ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಇದನ್ನು ಓದಿದ್ದೀರಾ? ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; 42 ಆರೋಪಿಗಳ ಬಂಧನ

ಈ ಬಗ್ಗೆ ಮಾಹಿತಿ ನೀಡಿದ ಫರ್ಸತ್‌ಗಂಜ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ನಂದ್ ಹೌಸ್ಲಾ ಯಾದವ್, “ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆತನನ್ನು ಬಂಧಿಸಲು ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆತನ ಬಂಧನ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ವರದಿಗಳ ಪ್ರಕಾರ ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿವೆ. ಹಾಗೆಯೇ ದೇಶದಲ್ಲೇ ಅಧಿಕ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಿರುವ ರಾಜ್ಯ ಉತ್ತರ ಪ್ರದೇಶವಾಗಿದೆ. ಇತ್ತೀಚಿನ(2023) ಎನ್‌ಸಿಆರ್‌ಬಿ ದತ್ತಾಂಶದ ಪ್ರಕಾರ ಉತ್ತರ ಪ್ರದೇಶದಲ್ಲಿ 66,381 ಮಹಿಳಾ ವಿರೋಧಿ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ.

ಅದರಲ್ಲೂ ದಲಿತ ಮಹಿಳೆಯರ, ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದ ರಾಜ್ಯಗಳ ಪಟ್ಟಿಯಲ್ಲಿಯೂ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿದೆ! 2025ರ ಮೊದಲ ಆರು ತಿಂಗಳಲ್ಲಿ (ಜನವರಿಯಿಂದ ಜೂನ್) ಯೋಗಿ ಆದಿತ್ಯನಾಥ್ ಆಡಳಿತದ ರಾಜ್ಯದಲ್ಲಿ ಸುಮಾರು 34 ಜಾತಿ ಆಧಾರಿತ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಗೊರೂರು ಪಂಕಜ: ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಹಾಸನದ...

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...

ಮದನಪಲ್ಲಿ ಸಾರ್ವಜನಿಕ ಸಭೆಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಮುಜುಗರ; ಭಾಷಣದ ನಡುವೆ ಗದ್ದಲ, ನಾಯ್ಡು ಮಧ್ಯಪ್ರವೇಶ

ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಭಾಷಣದ...

ಆಕ್ರೋಶಕ್ಕೆ ಹೆದರಿದ ಆಯೋಗ: ‘ಬಿಟ್ಟುಹೋದ’ ಮತದಾರರ ಸೇರ್ಪಡೆಗೆ ಕ್ರಮ

ದೇಶಾದ್ಯಂತ ನಡೆಸಲಾದ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ...