ಕಲಬೆರಕೆ ಮದ್ಯ ಸೇವಿಸಿ ಹದಿನಾಲ್ಕು ಮಂದಿ ಸಾವನ್ನಪ್ಪಿ, ಆರಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಂಜಾಬ್‌ನ ಅಮೃತಸರದ ಮಜಿತಾದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಈ ಬಗ್ಗೆ ಎಸ್‌ಎಸ್‌ಪಿ ಮಣಿಂದರ್ ಸಿಂಗ್ ಮಾಹಿತಿ ನೀಡಿದ್ದಾರೆ. “ನಿನ್ನೆ ರಾತ್ರಿ 9:30ರ ಸುಮಾರಿಗೆ ಕಲಬೆರಕೆ ಮದ್ಯ ಸೇವಿಸಿದ ಬಳಿಕ ಜನರು ಸಾವನ್ನಪ್ಪುತ್ತಿದ್ದಾರೆ ಎಂದು ನಮಗೆ ಮಾಹಿತಿ ಸಿಕ್ಕಿತು. ನಾವು ತಕ್ಷಣ ಕ್ರಮ ಕೈಗೊಂಡು ನಾಲ್ವರನ್ನು ಬಂಧಿಸಿದ್ದೇವೆ” ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ತಮಿಳುನಾಡು ಕಳ್ಳಭಟ್ಟಿ ಸಾರಾಯಿ ದುರಂತ ಅಣ್ಣಾಮಲೈ ಪಿತೂರಿ: ಡಿಎಂಕೆ ನಾಯಕ ಆರೋಪ
“ನಾವು ಮುಖ್ಯ ಪೂರೈಕೆದಾರ ಪರಬ್‌ಜೀತ್ ಸಿಂಗ್ ಎಂಬಾತನನ್ನು ಬಂಧಿಸಿದ್ದೇವೆ. ಆತನ ವಿಚಾರಣೆ ನಡೆಸಿದಾಗ ಕಿಂಗ್‌ಪಿನ್ ಪೂರೈಕೆದಾರ ಸಾಹಬ್ ಸಿಂಗ್ ಬಗ್ಗೆ ಮಾಹಿತಿ ಲಭಿಸಿದೆ. ಆತನನ್ನು ಕೂಡಾ ಬಂಧಿಸಲಾಗಿದೆ” ಎಂದು ಹೇಳಿದರು.
VIDEO | Amritsar, Punjab: Several people are feared dead and many hospitalised after consuming spurious liquor. More details are awaited.#PunjabNews #AmritsarNews
— Press Trust of India (@PTI_News) May 13, 2025
(Full video available on PTI Videos – https://t.co/n147TvqRQz) pic.twitter.com/jQeo9MIrCx
“ಈ ನಕಲಿ ಅಥವಾ ಕಲಬೆರಕೆ ಮದ್ಯವನ್ನು ಅವರು ಎಲ್ಲಿ ಖರೀದಿಸಿದ್ದಾರೆಂದು ನಾವು ತನಿಖೆ ನಡೆಸುತ್ತಿದ್ದೇವೆ. ನಕಲಿ ಮದ್ಯ ಪೂರೈಕೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಮಗೆ ಪಂಜಾಬ್ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಅಲ್ಲಲ್ಲಿ ದಾಳಿ ನಡೆಸಲಾಗುತ್ತಿದೆ. ಈ ನಕಲಿ ಮದ್ಯ ತಯಾರಕರನ್ನು ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ತಿಳಿಸಿದರು.
ಹಾಗೆಯೇ, “ಸದ್ಯ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಹೆಚ್ಚಿನ ಸಾವುನೋವುಗಳನ್ನು ತಪ್ಪಿಸಲು ಮತ್ತು ಜನರನ್ನು ಉಳಿಸುವ ನಿಟ್ಟಿನಲ್ಲಿ ಯಾರೆಲ್ಲ ಈ ಮದ್ಯ ಸೇವಿಸಿದ್ದಾರೆ ಎಂದು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ. ಅದಕ್ಕಾಗಿ ನಾವು ಮನೆ ಮನೆಗೆ ಹೋಗುತ್ತಿದ್ದೇವೆ. ಈಗಾಗಲೇ 14 ಮಂದಿ ಮೃತಪಟ್ಟಿದ್ದಾರೆ. 6 ಜನರನ್ನು ಪ್ರಸ್ತುತ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ 5 ಹಳ್ಳಿಗಳಲ್ಲಿ ನಡೆದಿದೆ” ಎಸ್‌ಎಸ್‌ಪಿ ಮಣಿಂದರ್ ಸಿಂಗ್ ವಿವರಿಸಿದರು.
