ಪಂಜಾಬ್ | ಕಲಬೆರಕೆ ಮದ್ಯ ಸೇವನೆ; 14 ಸಾವು, ಆರು ಮಂದಿ ಆಸ್ಪತ್ರೆಗೆ ದಾಖಲು

Date:

ಕಲಬೆರಕೆ ಮದ್ಯ ಸೇವಿಸಿ ಹದಿನಾಲ್ಕು ಮಂದಿ ಸಾವನ್ನಪ್ಪಿ, ಆರಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಂಜಾಬ್‌ನ ಅಮೃತಸರದ ಮಜಿತಾದಲ್ಲಿ ನಡೆದಿದೆ ಎಂದು ವರದಿಯಾಗಿದೆ.

- Advertisement -

ಈ ಬಗ್ಗೆ ಎಸ್‌ಎಸ್‌ಪಿ ಮಣಿಂದರ್ ಸಿಂಗ್ ಮಾಹಿತಿ ನೀಡಿದ್ದಾರೆ. “ನಿನ್ನೆ ರಾತ್ರಿ 9:30ರ ಸುಮಾರಿಗೆ ಕಲಬೆರಕೆ ಮದ್ಯ ಸೇವಿಸಿದ ಬಳಿಕ ಜನರು ಸಾವನ್ನಪ್ಪುತ್ತಿದ್ದಾರೆ ಎಂದು ನಮಗೆ ಮಾಹಿತಿ ಸಿಕ್ಕಿತು. ನಾವು ತಕ್ಷಣ ಕ್ರಮ ಕೈಗೊಂಡು ನಾಲ್ವರನ್ನು ಬಂಧಿಸಿದ್ದೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ತಮಿಳುನಾಡು ಕಳ್ಳಭಟ್ಟಿ ಸಾರಾಯಿ ದುರಂತ ಅಣ್ಣಾಮಲೈ ಪಿತೂರಿ: ಡಿಎಂಕೆ ನಾಯಕ ಆರೋಪ

“ನಾವು ಮುಖ್ಯ ಪೂರೈಕೆದಾರ ಪರಬ್‌ಜೀತ್ ಸಿಂಗ್ ಎಂಬಾತನನ್ನು ಬಂಧಿಸಿದ್ದೇವೆ. ಆತನ ವಿಚಾರಣೆ ನಡೆಸಿದಾಗ ಕಿಂಗ್‌ಪಿನ್ ಪೂರೈಕೆದಾರ ಸಾಹಬ್ ಸಿಂಗ್ ಬಗ್ಗೆ ಮಾಹಿತಿ ಲಭಿಸಿದೆ. ಆತನನ್ನು ಕೂಡಾ ಬಂಧಿಸಲಾಗಿದೆ” ಎಂದು ಹೇಳಿದರು.

“ಈ ನಕಲಿ ಅಥವಾ ಕಲಬೆರಕೆ ಮದ್ಯವನ್ನು ಅವರು ಎಲ್ಲಿ ಖರೀದಿಸಿದ್ದಾರೆಂದು ನಾವು ತನಿಖೆ ನಡೆಸುತ್ತಿದ್ದೇವೆ. ನಕಲಿ ಮದ್ಯ ಪೂರೈಕೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಮಗೆ ಪಂಜಾಬ್ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಅಲ್ಲಲ್ಲಿ ದಾಳಿ ನಡೆಸಲಾಗುತ್ತಿದೆ. ಈ ನಕಲಿ ಮದ್ಯ ತಯಾರಕರನ್ನು ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ತಿಳಿಸಿದರು.

ಹಾಗೆಯೇ, “ಸದ್ಯ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಹೆಚ್ಚಿನ ಸಾವುನೋವುಗಳನ್ನು ತಪ್ಪಿಸಲು ಮತ್ತು ಜನರನ್ನು ಉಳಿಸುವ ನಿಟ್ಟಿನಲ್ಲಿ ಯಾರೆಲ್ಲ ಈ ಮದ್ಯ ಸೇವಿಸಿದ್ದಾರೆ ಎಂದು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ. ಅದಕ್ಕಾಗಿ ನಾವು ಮನೆ ಮನೆಗೆ ಹೋಗುತ್ತಿದ್ದೇವೆ. ಈಗಾಗಲೇ 14 ಮಂದಿ ಮೃತಪಟ್ಟಿದ್ದಾರೆ. 6 ಜನರನ್ನು ಪ್ರಸ್ತುತ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ 5 ಹಳ್ಳಿಗಳಲ್ಲಿ ನಡೆದಿದೆ” ಎಸ್‌ಎಸ್‌ಪಿ ಮಣಿಂದರ್ ಸಿಂಗ್ ವಿವರಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...