ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ದುರ್ಗಾ ಪೂಜೆ ವೇಳೆ ಖಾಂಡ್ವಾ ಮತ್ತು ಶಹದೋಲ್ ಜಿಲ್ಲೆಗಳಲ್ಲಿ ಅವಘಡಗಳು ಸಂಭವಿಸಿದ್ದು, ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 14 ಮಂದಿ ಸಾವನ್ನಪ್ಪಿದ್ದಾರೆ. ದುರ್ಗಾ ಪೂಜೆ ಬಳಿಕ, ವಿಗ್ರಹ ವಿಸರ್ಜನೆ ವೇಳೆ ಘಟನೆಗಳು ನಡೆದಿವೆ. ಖಾಂಡ್ವಾದ ಪಂಧಾನಾ ಪ್ರದೇಶದ ಜಮ್ಲಿ ಗ್ರಾಮದಲ್ಲಿ, ದುರ್ಗಾ ವಿಗ್ರಹವನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಅಣೆಕಟ್ಟಿಗೆ ಉರುಳಿದಿದ್ದು, 11 ಮಂದಿ, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮತ್ತೊಂದು ಘಟನೆಯಲ್ಲಿ, ಖಾಂಡ್ವಾದ ಅಂಜನಗಾಂವ್ ಗ್ರಾಮದಲ್ಲಿ ನಿಯಂತ್ರಣ ತಪ್ಪಿದ ಡಿಜೆ ವಾಹನ ವಿಗ್ರಹ ವಿಸರ್ಜನಾ ಮೆರವಣಿಗೆಯಲ್ಲಿದ್ದ ಜನರ ಮೇಲೆ ಹರಿದಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇತರ ನಾಲ್ವರು ಗಾಯಗೊಂಡಿದ್ದಾರೆ.
ಶಾಹದೋಲ್ ಜಿಲ್ಲೆಯ ಗೋಹ್ಪರು ಎಂಬಲ್ಲಿ ಸೋನ್ ನದಿಯಲ್ಲಿ ವಿಗ್ರಹ ವಿಸರ್ಜನೆ ಮಾಡುವಾಗ 16 ವರ್ಷದ ಬಾಲಕ ಮತ್ತು 22 ವರ್ಷದ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಈ ಲೇಖನ ಓದಿದ್ದೀರಾ?: ಮಹಿಳೆಯರ ಮೇಲೆ ಹೆಚ್ಚಿದ ದೌರ್ಜನ್ಯ, ದೇವತೆ ಸ್ಥಾನ ನೀಡುವ ದೇಶ ಭಾರತ ಎನ್ನುವುದು ಬರೀ ಭ್ರಮೆ!
ಜಮ್ಲಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟವರ 11 ಮೃತದೇಹಗಳನ್ನು ಈವರೆಗೆ ಅಣೆಕಟ್ಟಿನಿಂದ ಹೊರತೆಗೆಯಲಾಘಿದೆ. ಇನ್ನೂ, ಶೋಧ ನಡೆಯುತ್ತಿದೆ. ಮೃತರೆಲ್ಲರೂ 9 ರಿಂದ 25 ವರ್ಷ ವಯಸ್ಸಿನವರಾಗಿದ್ದಾರೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಇಂದೋರ್ ಗ್ರಾಮೀಣ) ಅನುರಾಗ್ ತಿಳಿಸಿದ್ದಾರೆ.
ಕೆಲವರನ್ನು ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಪರಿಣಾಮ, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಮೂಲಗಳು ತಿಳಿಸಿವೆ.
ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಮೃತ 11 ಜನರ ಕುಟುಂಬಗಳಿಗೆ ತಲಾ 4 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರ