ಭಯೋತ್ಪಾದನಾ ವಿರೋಧಿ ದಳ(ಎಟಿಎಸ್) – ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ(ಎನ್‌ಸಿಬಿ) ಜಂಟಿ ಕಾರ್ಯಾಚರಣೆಯ ಮೂಲಕ ಗುಜರಾತ್ ಕರಾವಳಿಯಲ್ಲಿ 602 ಕೋಟಿ ರೂ. ಮೊತ್ತದ 86 ಕಿಲೋ ಮಾದಕ ದ್ರವ್ಯವನ್ನು ವಶಪಡಿಸಿಕೊಂಡು 14 ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದೆ.
ಕಾರ್ಯಾಚರಣೆಯ ಸಂದರ್ಭದಲ್ಲಿ ಪಾಕ್ ಪ್ರಜೆಗಳು ಬೋಟ್ ಮೂಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಎಟಿಎಸ್ ಅಧಿಕಾರಿಗಳು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಬಂಧಿಸಿದರು.
ಅಂತಾರಾಷ್ಟ್ರೀಯ ಸಮುದ್ರ ಗಡಿಯಲ್ಲಿ ಭದ್ರತಾ ಸಂಸ್ಥೆಗಳು ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದವು. ಭಾರತದ ಭೂಪ್ರದೇಶದ ಜಲಗಡಿಯಲ್ಲಿ ಮಾತ್ರ ಕಳೆದ 2 ದಿನಗಳಿಂದ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳುಗಾರರನ್ನು ಸೋಲಿಸುವ ಸಮಯ ಬಂದಿದೆ; ಮತದಾರರೇ ಮುಂದಾಗಬೇಕಿದೆ
ಎನ್‌ಸಿಬಿ ಗುಜರಾತ್ ಮತ್ತು ರಾಜಸ್ಥಾನದಲ್ಲಿ 300 ಕೋಟಿ ಮೌಲ್ಯದ ನಿಷೇಧಿತ ಮೆಪೆಡ್ರೋನ್ ಮಾದಕ ವಸ್ತುವನ್ನು ಬೇಧಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿಯನ್ನು ಬಂಧಿಸಿದ ಒಂದು ದಿನದ ನಂತರ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಗುಜರಾತ್ ಪೊಲೀಸ್ ಹಾಗೂ ಭಯೋತ್ಪಾದನಾ ವಿರೋಧಿ ದಳ ಗುಪ್ತ ಮೂಲಗಳಿಂದ ಮಾಹಿತಿ ಸಂಗ್ರಹಿಸಿ ಗುಜರಾತ್ ಹಾಗೂ ರಾಜಸ್ಥಾನದಲ್ಲಿ ಮೆಪೆಡ್ರೋನ್ ಮಾದಕ ವಸ್ತುವನ್ನು ವಶಪಡಿಸಿಕೊಂಡಿತ್ತು.
