ಮಧ್ಯಪ್ರದೇಶ ರಾಜ್ಯದ ರೇವಾ ಜಿಲ್ಲೆಯ ಖಾರ್ಗೋನ್ ಎಂಬಲ್ಲಿ ಖಾಸಗಿ ಬಸ್‌ವೊಂದು ಮಂಗಳವಾರ (ಮೇ 9) ಸೇತುವೆಯಿಂದ ಉರುಳಿ ಬಿದ್ದ ಪರಿಣಾಮ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ 25 ಜನರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಧರಮ್ ವೀರ್ ಸಿಂಗ್ ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಪ್ರತಿ ಸಂತ್ರಸ್ತ ಕುಟುಂಬಕ್ಕೂ ತಕ್ಷಣ ಜಾರಿಯಾಗುವಂತೆ ಮಧ್ಯಪ್ರದೇಶ ಸರ್ಕಾರ ₹4 ಲಕ್ಷ ಪರಿಹಾರವನ್ನು ಘೋಷಿಸಿದೆ.
ದುರಂತದಲ್ಲಿ ಗಂಭೀರ ಗಾಯಗೊಂಡವರಿಗೆ ತಲಾ ₹50 ಸಾವಿರ, ಸಣ್ಣ ಪ್ರಮಾಣದಲ್ಲಿ ಗಾಯಗೊಂಡವರಿಗೆ ತಲಾ ₹ 25 ಸಾವಿರ ಪರಿಹಾರ ಘೋಷಿಸಿದೆ.
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮೃತರಿಗೆ ಸಂತಾಪ ಸೂಚಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಲೆಕ್ಕ ಪರಿಶೋಧಕರು ಮತ್ತು ಕಂಪನಿ ಕಾರ್ಯದರ್ಶಿಗಳಿಗೂ ಕಾಡಲಿದೆ ಪಿಎಂಎಲ್‌ಎ ಗುಮ್ಮ
ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹50 ಸಾವಿರ ಪರಿಹಾರ ಘೋಷಿಸಿದ್ದಾರೆ.