ನಿವೃತ್ತ ಬಸ್‌ ಚಾಲಕನ ಮನೆಯಲ್ಲಿ 15 ಕೆಜಿ ಚಿನ್ನ, 20 ಕೋಟಿ ರೂ. ಹಣ ಪತ್ತೆ!

Date:

ಹಣಕಾಸು ಅಕ್ರಮಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ನಿವೃತ್ತ ಸರ್ಕಾರಿ ಬಸ್‌ ಚಾಲಕರೊಬ್ಬರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ, ನಿವೃತ್ತ ಚಾಲಕನ ಮನೆಯಲ್ಲಿ ಬರೋಬ್ಬರಿ 15 ಕೆ.ಜಿ ಚಿನ್ನ ಮತ್ತು 20 ಕೋಟಿ ರೂ. ಹಣ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

 ಪ್ರಭಾವಿ ಕಲ್ಲು ಗಣಿ ಉದ್ಯಮಿ ತುಳು ಮೊಂಡಲ್ ಅವರ ಭಾಮೈದನಾಗಿರುವ ನಿವೃತ್ತ ಚಾಲಕ ಮಿನಾರ್ ಮೊಂಡಲ್ ಎಂಬುವವರ ಮನೆ ಮೇಲೆ ಮಂಗಳವಾರ ಪೊಲೀಸರು ದಾಳಿ ನಡೆಸಿದ್ದರು. ಗಣಿ ಉದ್ಯಮಕ್ಕೆ ಸಂಬಂಧಿಸಿದ ಹಣಕಾಸು ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. ದಾಳಿಯ ವೇಳೆ, ಭಾರೀ ಮೊತ್ತದ ಚಿನ್ನಾಭರಣೆ ಮತ್ತು ನಗದು ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಪೊಲೀಸರು ವಶಪಡಿಸಿಕೊಂಡ ನಗದನ್ನು ಸಾಗಿಸಲು ಸುಮಾರು 35 ಚೀಲಗಳನ್ನು ಬಳಸಲಾಗಿತ್ತು. ಅಲ್ಲದೆ, ಈ ಅಪಾರ ಪ್ರಮಾಣದ ಹಣವನ್ನ ಎಣಿಸಲು 5 ನಗದು ಎಣಿಕೆ ಯಂತ್ರಗಳನ್ನೂ ಪೊಲೀಸರು ತರಿಸಬೇಕಾಯಿತು. ಜೊತೆಗೆ, ವಶಕ್ಕೆ ಪಡೆಯಲಾದ ನಗದನ್ನು ಸುರಕ್ಷಿತವಾಗಿ ಸಂಗ್ರಹಿಸಿಡಲು 5 ದೊಡ್ಡ ಟಿನ್ ಟ್ರಂಕ್‌ಗಳನ್ನು ತರಲಾಗಿತ್ತು ಎಂದು ವರದಿಯಾಗಿದೆ.

ಪೋಲಿಸ್ ಮೂಲಗಳ ಪ್ರಕಾರ, ಪಶ್ಚಿಮ ಬಂಗಾಳದ ಮೂರು ಜಿಲ್ಲೆಗಳಾದ್ಯಂತ ಇರುವ ಆರು ಕಲ್ಲು ಕೈಗಾರಿಕಾ ಕ್ಲಸ್ಟರ್‌ಗಳ ಪ್ರವೇಶ ದ್ವಾರಗಳಲ್ಲಿ ಚಂದಾ ಸಂಗ್ರಹಿಸುವ ಜವಾಬ್ದಾರಿಯನ್ನು ತುಳು ಮೊಂಡಲ್ ಅವರ ಏಜೆನ್ಸಿಗೆ ನೀಡಲಾಗಿತ್ತು. ಈ ಏಜೆನ್ಸಿಯು ಪ್ರತಿ ತಿಂಗಳು ಸುಮಾರು 83 ಕೋಟಿ ರೂ. ಚಂದಾವನ್ನು ಸಂಗ್ರಹಿಸುವ ನಿರೀಕ್ಷೆಯಿತ್ತಾದರೂ, ಸರ್ಕಾರಿ ಖಜಾನೆಗೆ ಕೇವಲ 2 ಕೋಟಿಯಿಂದ 5 ಕೋಟಿ ರೂ. ಮಾತ್ರ ಜಮಾ ಮಾಡಲಾಗುತ್ತಿತ್ತು. ಉಳಿದ ಭಾರಿ ಮೊತ್ತದ ಹಣವನ್ನು ಅಕ್ರಮವಾಗಿ ದೋಚಲಾಗಿದೆ ಎಂದು ಅಧಿಕಾರಿಗಳು ಆರೋಪಿಸಿದ್ದರು. ಪರಿಣಾಮ, ಈ ಕುರಿತು ತನಿಖೆ ಆರಂಭಿಸಲಾಗಿತ್ತು ಎಂದು ತಿಳಿದುಬಂದಿದೆ.

ದಾಳಿಯ ಕುರಿತು ಸಾಮಾಜಿಕ ಜಾಲತಾಣ ‘X’ ನಲ್ಲಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂಧು ಅಧಿಕಾರಿ, “ಪೊಲೀಸರ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಅಕ್ರಮ ಆಸ್ತಿ ಹೊರಬಂದಿದೆ. ಭ್ರಷ್ಟಾಚಾರದ ವಿರುದ್ಧ ನಮ್ಮ ಸರ್ಕಾರ ಶೂನ್ಯ ಸಹಿಷ್ಣುತೆ ನೀತಿಯನ್ನು ಹೊಂದಿದೆ. ಸಾರ್ವಜನಿಕ ಸಂಪನ್ಮೂಲಗಳನ್ನು ಲೂಟಿ ಮಾಡಿ ಆಸ್ತಿ ಗಳಿಸಿದ ಯಾವುದೇ ವ್ಯಕ್ತಿಯನ್ನು ಬಿಡುವ ಪ್ರಶ್ನೆಯೇ ಇಲ್ಲ. ಸಾರ್ವಜನಿಕ ಆಸ್ತಿಯು ಜನರಿಗೆ ಸೇರಿದ್ದು, ಅದನ್ನು ಕೊಳ್ಳೆ ಹೊಡೆದವರು ಕಾನೂನಿನ ಸಂಪೂರ್ಣ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. ಮಾಫಿಯಾ ಸಿಂಡಿಕೇಟ್‌ಗಳ ವಿರುದ್ಧದ ಈ ಕಾರ್ಯಾಚರಣೆ ಮುಂದುವರಿಯಲಿದೆ” ಎಂದು ಹೇಳಿದ್ದಾರೆ.

ಪ್ರಸ್ತುತ ಪೊಲೀಸರು ವಶಪಡಿಸಿಕೊಂಡಿರುವ ಚಿನ್ನ ಮತ್ತು ನಗದಿನ ಮೂಲವನ್ನು ಹಾಗೂ ಕಲ್ಲು ಉದ್ಯಮದಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅಕ್ರಮಗಳನ್ನು ವಿವರವಾಗಿ ಪರಿಶೀಲಿಸುತ್ತಿದ್ದಾರೆ ಎಂದು ವರದಿಯಾಗಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಮೆರಾ ಆಫ್ ಆಗಿದೆ ಎಂದುಕೊಂಡು ಇಸ್ರೇಲ್ ನೀತಿ ಟೀಕೆ; ಲೈವ್ ಪ್ರಸಾರ ತಿಳಿದು ದಂಗಾದ ನಟಿ!

ದೇಶದ ನೀತಿಗಳ ಬಗ್ಗೆ ಸ್ವತಃ ಇಸ್ರೇಲ್‌ನಲ್ಲೇ ವಿರೋಧಿ ಧ್ವನಿಗಳು ಕೇಳಿಬರುತ್ತಿರುವುದು ತಿಳಿದೇ...

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...