ಒಡಿಶಾ | 15ರ ಬಾಲಕಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ಶೇ. 70ರಷ್ಟು ಸುಟ್ಟ ದೇಹ

Date:

15 ವರ್ಷದ ಬಾಲಕಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಒಡಿಶಾದ ಪುರಿ ಜಿಲ್ಲೆಯಲ್ಲಿ ನಡೆದಿದ್ದು, ಬಾಲಕಿ ದೇಹ ಶೇಕಡ 70ರಷ್ಟು ಸುಟ್ಟು ಹೋಗಿದೆ. ಸದ್ಯ ಬಾಲಕಿಯನ್ನು ದೆಹಲಿಯ ಏಮ್ಸ್‌ಗೆ ವಿಮಾನದ ಮೂಲಕ ಕರೆದೊಯ್ಯಲಾಗಿದ್ದು, ಬಾಲಕಿ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

- Advertisement -

ಶನಿವಾರ ಬೆಳಿಗ್ಗೆ ಬಾಲಕಿ ತನ್ನ ಸ್ನೇಹಿತರ ಮನೆಯಿಂದ ಹಿಂತಿರುಗುತ್ತಿದ್ದಾಗ ಬಲಂಗಾ ಪೊಲೀಸ್ ಠಾಣೆಯ ಬಯಾಬರ್ ಗ್ರಾಮದ ಬಳಿಯ ಭಾರ್ಗಬಿ ನದಿಯ ದಡದಲ್ಲಿ ಈ ಘಟನೆ ನಡೆದಿದೆ. ಮೋಟಾರ್ ಸೈಕಲ್‌ನಲ್ಲಿ ಬಂದ ಮೂವರು ಯುವಕರು ಬಾಲಕಿಯನ್ನು ಬಲವಂತವಾಗಿ ಭಾರ್ಗವಿ ನದಿಯ ದಡಕ್ಕೆ ಕರೆದೊಯ್ದು ಆಕೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಇದನ್ನು ಓದಿದ್ದೀರಾ? ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ: ಭುಗಿಲೆದ್ದ ಆಕ್ರೋಶ, ಏನಿದು ಪ್ರಕರಣ?

ಸ್ಥಳೀಯರು ಬಾಲಕಿಯ ಬೆಂಕಿ ನಂದಿಸಿ ಆಕೆಯನ್ನು ಪಿಪಿಲಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ ಆಕೆಯನ್ನು ಭುವನೇಶ್ವರದ ಏಮ್ಸ್‌ಗೆ ಸ್ಥಳಾಂತರಿಸಲಾಗಿತ್ತು. ಇದೀಗ ದೆಹಲಿಯ ಏಮ್ಸ್ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಗುತ್ತದೆ ಎಂದು ವರದಿಯಾಗಿದೆ.

“ಶೇಕಡ 70ರಷ್ಟು ಸುಟ್ಟಗಾಯಗಳಿದ್ದು, ಬಾಲಕಿ ಆರೋಗ್ಯ ಸದ್ಯ ಸ್ಥಿರವಾಗಿದೆ. ಪ್ರಸ್ತುತ ಐಸಿಯುನಲ್ಲಿ ಆಮ್ಲಜನಕದ ಬೆಂಬಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. 12 ವೈದ್ಯರು ಮತ್ತು ಇಬ್ಬರು ನರ್ಸಿಂಗ್ ಅಧಿಕಾರಿಗಳ ತಂಡವು ರೋಗಿಯನ್ನು ನೋಡಿಕೊಳ್ಳುತ್ತಿದೆ” ಎಂದು ಭುವನೇಶ್ವರದ ಏಮ್ಸ್‌ನ ಬರ್ನ್ ಸೆಂಟರ್ ವಿಭಾಗದ ಮುಖ್ಯಸ್ಥ ಸಂಜಯ್ ಗಿರಿ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಭುವನೇಶ್ವರದ ಏಮ್ಸ್ ಕಾರ್ಯನಿರ್ವಾಹಕ ನಿರ್ದೇಶಕ ಅಸುತೋಷ್ ಬಿಸ್ವಾಸ್, “ಬಾಲಕಿ ಆರೋಗ್ಯ ಸ್ಥಿರವಾಗಿದ್ದು, ಆಕೆಯನ್ನು ಏರ್‌ಲಿಫ್ಟಿಂಗ್ ಮೂಲಕ ಸ್ಥಳಾಂತರಿಸಬಹುದಾದ ಸ್ಥಿತಿಯಲ್ಲಿದ್ದಾಳೆ. ದೆಹಲಿಯ ಏಮ್ಸ್‌ಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಆಕೆಯನ್ನು ವಿಶೇಷ ವಿಮಾನದಲ್ಲಿ ಕರೆದೊಯ್ಯಲಾಗುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ರಾಜ್ಯ ಸರ್ಕಾರವು ಬಾಲಕಿಯ ಉತ್ತಮ ಚಿಕಿತ್ಸೆಗಾಗಿ ದೆಹಲಿಗೆ ವಿಮಾನದಲ್ಲಿ ಸಾಗಿಸಲು ಯೋಜಿಸುತ್ತಿದೆ ಎಂದು ಹೇಳಿದ್ದರು. ಆದರೆ ಏಮ್ಸ್ ಭುವನೇಶ್ವರದ ಏಮ್ಸ್ ಅಧಿಕಾರಿಗಳು ಆಕೆಯ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದರು.

ಇನ್ನು ಸಂತ್ರಸ್ತೆ ಕೊಂಚ ಮಾತನಾಡಲು ಆರಂಭಿಸಿದ್ದರಿಂದ ಭುವನೇಶ್ವರದ ಏಮ್ಸ್ ಐಸಿಯುನಲ್ಲಿ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಪೊಲೀಸರು ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಬಾಲಕಿಯ ತಾಯಿ ಬಲಂಗಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈಕೋರ್ಟ್ ತೀರ್ಪು ಬರುವವರೆಗೆ ಸೋನಮ್ ವಾಂಗ್‌ಚುಕ್ ಶಾಲೆಯ ಚಟುವಟಿಕೆ ತಡೆಗೆ ಲಡಾಖ್ ಆಡಳಿತ ಆದೇಶ

ಪರಿಸರ ಹೋರಾಟಗಾರ ಮತ್ತು ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಅವರ 'ಹಿಮಾಲಯನ್...

ಕರ್ನಾಟಕ ಬರ: 22,400 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿ; ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ ಪತ್ರ

ಕರ್ನಾಟಕದ ಬರಪೀಡಿತ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಪ್ರಧಾನಿ...

ಭಾರತ – ನ್ಯೂಜಿಲೆಂಡ್ ಏಕದಿನ ಸರಣಿ: ಸಚಿನ್ ತೆಂಡೂಲ್ಕರ್ ದಾಖಲೆ ಮುರಿವ ಉತ್ಸಾಹದಲ್ಲಿ ಕೊಹ್ಲಿ!

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗೆ ಭಾರತದ ತಂಡ...