ವಯನಾಡ್‌ ಶಾಲೆಯಲ್ಲಿ 150 ವಿದ್ಯಾರ್ಥಿಗಳು ಅಸ್ವಸ್ಥ; 1 ವಾರ ರಜೆ ಘೋಷಣೆ

Date:

ಕೇರಳದ ವಯನಾಡ್ ಜಿಲ್ಲೆಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯೊಂದರ ಸುಮಾರು 150 ವಿದ್ಯಾರ್ಥಿಗಳಲ್ಲಿ ಕಳೆದ ಮೂರು ದಿನಗಳಿಂದ ಜ್ವರ ಮತ್ತು ವಾಂತಿ ಕಾಣಿಸಿಕೊಂಡಿದ್ದು, ಇವರಲ್ಲಿ 38 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಅಸ್ವಸ್ಥಗೊಂಡಿರುವ ಎಲ್ಲಾ ಮಕ್ಕಳು ಇಲ್ಲಿನ ಮಾರ್ ಬಸೇಲಿಯಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ. ಜ್ವರ ಮತ್ತು ವಾಂತಿ ತೀವ್ರಗೊಂಡ ಹಿನ್ನೆಲೆಯಲ್ಲಿ, ಸದ್ಯ 38 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬತ್ತೇರಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಸ್ಥಿತಿಗತಿ ಕುರಿತು ಮಾಹಿತಿ ನೀಡಿರುವ ಆರೋಗ್ಯ ಇಲಾಖೆ ಅಧಿಕಾರಿಗಳು, ಸದ್ಯಕ್ಕೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸಾರ್ವಜನಿಕರಿಗೆ ಧೈರ್ಯ ತುಂಬಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಶಾಲೆಗೆ ಒಂದು ವಾರದ ಮಟ್ಟಿಗೆ ರಜೆ ಘೋಷಿಸಲಾಗಿದೆ.

ಅಸ್ವಸ್ಥರಾದ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ವ್ಯವಸ್ಥೆ ಮಾಡಲಾಗಿದೆ. ಮಕ್ಕಳ ಜೊತೆಗೆ ಶಾಲೆಯ ಶಿಕ್ಷಕರೊಬ್ಬರಿಗೂ ಆರೋಗ್ಯ ಕೈಕೊಟ್ಟಿದ್ದು, ಅವರೂ ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ. ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ ಸ್ಥಳೀಯ ಪಂಚಾಯತ್ ಪ್ರತಿನಿಧಿಗಳು, ಸದ್ಯ ಎಲ್ಲಾ ಮಕ್ಕಳ ಪರಿಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು | ಅಣ್ಣಾಮಲೈ ಬಳಿಕ BJP ತೊರೆದ 14ಕ್ಕೂ ಹೆಚ್ಚು ನಾಯಕರು!

ಅಧಿಕಾರಿಗಳ ಪ್ರಕಾರ, ಜೂನ್ 1 ರಂದೇ ಕೆಲವು ವಿದ್ಯಾರ್ಥಿಗಳಲ್ಲಿ ರೋಗಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸಿದ್ದವು. ಆದರೆ, ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಮಕ್ಕಳು ಏಕಾಏಕಿ ಅಸ್ವಸ್ಥರಾಗಲು ನಿಖರವಾದ ಕಾರಣವೇನೆಂಬುದು ಇನ್ನು ತಿಳಿದುಬಂದಿಲ್ಲ.

ಮಕ್ಕಳ ಈ ಹಠಾತ್ ಅನಾರೋಗ್ಯಕ್ಕೆ ಕಾರಣ ಏನೆಂಬುದನ್ನು ಪತ್ತೆಹಚ್ಚಲು ಆರೋಗ್ಯ ಇಲಾಖೆಯು ಮಕ್ಕಳ ರಕ್ತ ಮತ್ತು ಇತರೆ ಮಾದರಿಗಳನ್ನು ಸಂಗ್ರಹಿಸಿದ್ದು, ಪ್ರಯೋಗಾಲಯದ ತಪಾಸಣೆಗೆ ಕಳುಹಿಸಿಕೊಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಕ್ಷಾಂತರ ಪರ್ವ: ಮೋದಿ ಸರ್ಕಾರದ ಅಧಿಕಾರದ ಆಸೆಗೆ ಪ್ರಜಾಸತ್ತಾತ್ಮಕ ಮೌಲ್ಯಗಳ ಬಲಿ

ಭಾರತದಲ್ಲಿ 2022 ಮತ್ತು 2026ರ ನಡುವಿನ ಅವಧಿಯಲ್ಲಿ ರಾಜಕೀಯ ಕ್ಷೇತ್ರದಲ್ಲಿ ಬಹುದೊಡ್ಡ...

ಯುಪಿ | ಮತದಾರರ ಪಟ್ಟಿಯಲ್ಲಿ ಭಾರೀ ಅಕ್ರಮ ಆರೋಪ; 16 ಸಾವಿರಕ್ಕೂ ಹೆಚ್ಚು ಹೆಸರುಗಳ ಪರಿಶೀಲನೆಗೆ EC ಆದೇಶ

ಉತ್ತರ ಪ್ರದೇಶದ ಪಿಲಿಭಿತ್ ಸದರ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ...

ಅಭಿವೃದ್ಧಿ ಹೆಸರಲ್ಲಿ 23 ಲಕ್ಷ ಮರಗಳಿಗೆ ಕುತ್ತು; ಅರುಣಾಚಲದ ಜಲವಿದ್ಯುತ್‌ ಯೋಜನೆ ಅನುಮತಿ ಕೋರಿದ NHPC

ಅರುಣಾಚಲ ಪ್ರದೇಶದಲ್ಲಿ 1,720 ಮೆಗಾವ್ಯಾಟ್ ಸಾಮರ್ಥ್ಯದ ಕಮಲಾ ಜಲವಿದ್ಯುತ್ ಯೋಜನೆ ಅನುಷ್ಠಾನಗೊಳಿಸಲು...

ಸೋನಿಯಾ ಗಾಂಧಿ ಇನ್‌ಸ್ಟಾಗ್ರಾಮ್‌ಗೆ ಪದಾರ್ಪಣೆ: ‘ಬಿಲಾಂಗಿಂಗ್’ ಆತ್ಮಕಥೆಯ ಮೊದಲ ನೋಟ ಬಿಡುಗಡೆ

ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಾಮಾಜಿಕ ಜಾಲತಾಣ...