ಹಿಮಾಚಲ ಪ್ರದೇಶ | ಭಾರೀ ಮಳೆಗೆ 21 ಸಾವು; ಹಲವು ಕಟ್ಟಡಗಳು ಕುಸಿತ

Date:

Advertisements

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ ಉಂಟಾದ ಎರಡು ಪ್ರತ್ಯೇಕ ಘಟನೆಗಳಲ್ಲಿ ಕಳೆದ 24 ಗಂಟೆಗಳಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ತಿಳಿಸಿದ್ದಾರೆ.

ಕಳೆದ(ಆಗಸ್ಟ್ 13) ರಾತ್ರಿ ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದ ನಂತರ ಏಳು ಜನರು ಸಾವನ್ನಪ್ಪಿದ್ದರೆ, ಶಿಮ್ಲಾ ನಗರದ ಸಮ್ಮರ್ ಹಿಲ್ ಪ್ರದೇಶದ ಶಿವನ ದೇವಾಲಯದಲ್ಲಿ ಉಂಟಾದ ಭೂಕುಸಿತದಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.

ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ಶಿವನ ದೇವಾಲಯವೊಂದು ಕುಸಿದು ಬಿದ್ದಿದ್ದು ಅವಶೇಷಗಳಡಿ ಸಿಲುಕಿ ಹಲವರು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ.

Advertisements

ಭಾರೀ ಮಳೆಯಿಂದಾಗಿ ದೇವಾಲಯ ಕುಸಿದಿದೆ. ಪ್ರಾರ್ಥನೆ ಸಲ್ಲಿಸಲು ಆಗಮಿಸಿದ್ದ ಭಕ್ತರ ಮೇಲೆ ದೇವಾಲಯ ಕುಸಿದಿದೆ. ದೇವಾಲಯದಡಿ ಸಿಲುಕಿರುವವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ.

ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿಗಳು ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದುರ್ಘಟನೆಯ ಸಂದರ್ಭ ದೇವಾಲಯದ ಆವರಣದಲ್ಲಿ ಸುಮಾರು 50 ಜನರಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಿಮ್ಲಾ ನಗರದಲ್ಲಿ ಸಂಭವಿಸಿದ ಎರಡು ಭೂಕುಸಿತಗಳಲ್ಲಿ 15 ರಿಂದ 20 ಮಂದಿ ಮೃತಪಟ್ಟಿರುವ ಶಂಕೆ ಇದೆ ಎಂದು ಶಿಮ್ಲಾದ ಸಹಾಯಕ ಆಯುಕ್ತ ಆದಿತ್ಯ ನೇಗಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೋದಿ, ಶಾ ಓದಿರುವುದು ನಮ್ಮ ಶಾಲೆಗಳಲ್ಲಿ: ಪ್ರಧಾನಿ ಲೋಕಸಭೆ ಭಾಷಣದ ವಿರುದ್ಧ ಖರ್ಗೆ ಕಿಡಿ

ಹಿಮಾಚಲ ಪ್ರದೇಶದ ಸೋಲನ್‌ನ ಹಳ್ಳಿಯೊಂದರಲ್ಲಿ ಮೇಘಸ್ಫೋಟವಾಗಿದ್ದು, 7 ಜನರು ಸಾವನ್ನಪ್ಪಿದ್ದಾರೆ. ಹಲವು ಮನೆಗಳು ಭಾರೀ ಮಳೆಗೆ ಕೊಚ್ಚಿಕೊಂಡು ಹೋಗಿವೆ. 6 ಜನರನ್ನು ರಕ್ಷಿಸಲಾಗಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ.

ಆಗಸ್ಟ್ 14 ರಂದು ಹಿಮಾಚಲ ಪ್ರದೇಶದಲ್ಲಿ ನಿಗದಿಯಾಗಿದ್ದ ಬಿ.ಇಡಿ ಪರೀಕ್ಷೆಗಳು ಸೇರಿದಂತೆ ಸ್ನಾತಕೋತ್ತರ ತರಗತಿಗಳ ಎಲ್ಲ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ.

257 ಮಂದಿ ಮೃತ

ಜೂನ್ 24 ರಂದು ಹಿಮಾಚಲ ಪ್ರದೇಶದಲ್ಲಿ ಮುಂಗಾರು ಮಳೆ ಪ್ರಾರಂಭವಾಯಿತು. ಅಧಿಕಾರಿಗಳ ಪ್ರಕಾರ, ಮುಂಗಾರು ಮಳೆಯಿಂದಾಗಿ ಉಂಟಾದ ಅನಾಹುತದಲ್ಲಿ 257 ಮಂದಿ ಮೃತಪಟ್ಟಿದ್ದಾರೆ.

“257 ಜನರಲ್ಲಿ 66 ಜನರು ಭೂಕುಸಿತ ಮತ್ತು ಹಠಾತ್ ಪ್ರವಾಹದಿಂದ ಸಾವನ್ನಪ್ಪಿದ್ದಾರೆ. 191 ಜನರು ರಸ್ತೆ ಅಪಘಾತ ಅಥವಾ ಇತರ ಕಾರಣಗಳಿಂದ ಪ್ರಾಣ ಕಳೆದುಕೊಂಡಿದ್ದಾರೆ. 32 ಜನರು ನಾಪತ್ತೆಯಾಗಿದ್ದಾರೆ ಮತ್ತು 290 ಜನರು ಗಾಯಗೊಂಡಿದ್ದಾರೆ. ರಾಜ್ಯದಲ್ಲಿ ಇದುವರೆಗೆ 1,376 ಮನೆಗಳು ಹಾನಿಗೊಳಗಾಗಿದ್ದರೆ, 7,935 ಮನೆಗಳಿಗೆ ಭಾಗಶಃ ಹಾನಿಯಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಾಖಂಡ್‌ನಲ್ಲಿ ಕೂಡ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೂರಾರು ಮನೆಗಳಿಗೆ ನೀರು ನುಗ್ಗಿದೆ. ಇನ್ನೂ ಮೂರ್ನಾಲ್ಕು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ತಮಿಳುನಾಡಿನಲ್ಲಿ ಕೂಡ ವಿಪರೀತ ಮಳೆಯಾಗುತ್ತಿದ್ದು, ಚೆನ್ನೈ ನಗರ ಮಳೆಗೆ ತತ್ತರಿಸಿದೆ. ಇಂದು ಮತ್ತು ನಾಳೆ ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆಯಿದ್ದು ಪಶ್ಚಿಮ ಬಂಗಾಳದ ಬಹುತೇಕ ಕಡೆ ಆಗಸ್ಟ್ 15ರ ನಂತರ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಉತ್ತರ ಪ್ರದೇಶದ ಗಾಜಿಯಾಬಾದ್, ಮೀರತ್, ನೋಯ್ಡಾ, ಫತೇಪುರ್, ಆಗ್ರಾ, ಫಿರೋಜಾಬಾದ್ ಮುಂತಾದ ಕಡೆ ಮಳೆಯಾಗುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X