ಮಹಾರಾಷ್ಟ್ರ | ಸಿಎಂ ತವರು ಜಿಲ್ಲೆಯ ಆಸ್ಪತ್ರೆಯಲ್ಲಿ ಮರಣ ಮೃದಂಗ; 12 ಗಂಟೆಯಲ್ಲಿ 17 ರೋಗಿಗಳು ಸಾವು

Date:

Advertisements

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ತವರು ಜಿಲ್ಲೆ ಥಾಣೆಯ ಕಲ್ವಾದಲ್ಲಿರುವ ಸರ್ಕಾರಿ ಸ್ವಾಮ್ಯದ ಛತ್ರಪತಿ ಶಿವಾಜಿ ಮಹಾರಾಜ್ ಆಸ್ಪತ್ರೆಯಲ್ಲಿ ಕಳೆದ 12 ಗಂಟೆಗಳಲ್ಲಿ ನಾನಾ ಕಾರಣಗಳಿಂದ 17 ರೋಗಿಗಳು ಮೃತಪಟ್ಟಿದ್ದಾರೆ.

ಮೃತರಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ 12 ರೋಗಿಗಳು ಹಾಗೂ ಇತರ ವಿಭಾಗದ ಐವರು ರೋಗಿಗಳು ಸೇರಿದ್ದಾರೆ. ಒಂದೇ ದಿನದ ಅಂತರದಲ್ಲಿ ಇಷ್ಟು ರೋಗಿಗಳು ಸಾವನ್ನಪ್ಪಿದ್ದು ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶನಿವಾರ ರಾತ್ರಿಯಿಂದ ಇಲ್ಲಿಯವರೆಗೂ 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನು ಆಸ್ಪತ್ರೆ ಆಡಳಿತ ಮಂಡಳಿಯೇ ಖಚಿತಪಡಿಸಿದೆ.

ಥಾಣೆಯ ಜಿಲ್ಲಾ ಆಸ್ಪತ್ರೆ ಮುಚ್ಚಿರುವುದರಿಂದ ಜಿಲ್ಲೆಯ ಎಲ್ಲ ರೋಗಿಗಳು ಇಲ್ಲಿಗೆ ಬರುವುದರಿಂದ ವೈದ್ಯರು ಹಾಗೂ ವೈದ್ಯಕೀಯ ಸೌಲಭ್ಯಗಳ ಕೊರತೆ ಎದುರಾಗಿದೆ. ಈ ಹಿಂದೆ ಆಗಸ್ಟ್ 10 ರಂದು ಒಂದೇ ದಿನ ಒಂದೇ ಆಸ್ಪತ್ರೆಯಲ್ಲಿ 5 ಮಂದಿ ಸಾವನ್ನಪ್ಪಿದ್ದರು. ಘಟನೆಯ ಬಳಿಕ ಶಾಸಕ ಜಿತೇಂದ್ರ ಅವದ್ ಹಾಗೂ ಇತರ ಪಕ್ಷಗಳ ಮುಖಂಡರು ಆಸ್ಪತ್ರೆಗೆ ತೆರಳಿ ಪ್ರತಿಭಟನೆ ನಡೆಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಸಂಸತ್ತಿನಲ್ಲಿರುವ ಎಲ್ಲ ಅರ್ಹತೆ ಪ್ರಿಯಾಂಕಾಗೆ ಇದೆ: ರಾಬರ್ಟ್ ವಾದ್ರಾ

ಥಾಣೆ ಜಿಲ್ಲೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ತವರು ಜಿಲ್ಲೆಯಾಗಿದೆ. ಛತ್ರಪತಿ ಶಿವಾಜಿ ಮಹಾರಾಜ್ ಆಸ್ಪತ್ರೆ ಇರುವುದೂ ಇಲ್ಲೇ. ವಿಶೇಷವೆಂದರೆ ಥಾಣೆ ಮುನ್ಸಿಪಲ್ ಕಾರ್ಪೊರೇಷನ್ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನಿಯಂತ್ರಣದಲ್ಲಿದೆ. ಶಿವಸೇನೆಯೇ ಇಲ್ಲಿ ಆಡಳಿತ ನಡೆಸುತ್ತಿದೆ. ಹಾಗಾಗಿ ಮಹಾನಗರ ಪಾಲಿಕೆಯ ಛತ್ರಪತಿ ಶಿವಾಜಿ ಆಸ್ಪತ್ರೆಯಲ್ಲಿ ನಡೆದ ಸರಣಿ ಸಾವು ಶಿಂಧೆ ಗುಂಪಿನ ಶಿವಸೇನೆಗೆ ಭಾರಿ ಮುಜುಗರ ತಂದಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಥಾಣೆಯಲ್ಲಿ ಸೂಪರ್ ಸ್ಪೆಷಾಲಿಟಿ ಕ್ಯಾನ್ಸರ್ ಆಸ್ಪತ್ರೆಗೆ ಭೂಮಿಪೂಜೆ ನೆರವೇರಿಸಿದ್ದರು. ಜಿಲ್ಲಾ ಆಸ್ಪತ್ರೆಯ ಕಟ್ಟಡವನ್ನು ಕೆಡವಿ ಆ ಜಾಗದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಉದ್ದೇಶಿಸಲಾಗಿದೆ. ಇಷ್ಟೆಲ್ಲದರ ಮಧ್ಯೆ ಅತ್ಯಂತ ಹಳೆಯದಾದ ಛತ್ರಪತಿ ಶಿವಾಜಿ ಮಹಾರಾಜ ಆಸ್ಪತ್ರೆಯಲ್ಲಿ ಈಗ ಸಂಭವಿಸಿದ ಸರಣಿ ಸಾವು ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಕೆಲ ತಿಂಗಳ ಹಿಂದೆ ಆಸ್ಪತ್ರೆಯಲ್ಲಿನ ಅವ್ಯವಸ್ಥೆಯನ್ನು ಪರಿಶೀಲಿಸಿ ಡೀನ್ ವಿರುದ್ಧ ಅಮಾನತು ಕ್ರಮ ಜರುಗಿಸಲಾಗಿತ್ತು. ಇದೇ ವೇಳೆ ಕೆಲ ದಿನಗಳ ಹಿಂದೆ ಸಿವಿಲ್ ಆಸ್ಪತ್ರೆಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಇದರಿಂದ ಈ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X