ವಿಕಲಚೇತನ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ: 17 ಜನರ ಡಿಎನ್‌ಎ ಪರೀಕ್ಷೆಯ ಬಳಿಕ ಸತ್ಯ ಬಯಲು

Date:

ಮಾತನಾಡದ ಹಾಗೂ ಕಿವಿ ಕೇಳಿಸಿಕೊಳ್ಳಲಾಗದ ತನ್ನ 20 ವರ್ಷದ ವಿಕಲಚೇತನ ಮಗಳ ಮೇಲೆ ಸ್ವತಃ ತಂದೆಯೇ ಅತ್ಯಾಚಾರವೆಸಗಿ, ಆಕೆ ಗರ್ಭಿಣಿಯಾಗಲು ಕಾರಣವಾದ ಅಮಾನವೀಯ ಘಟನೆಯೊಂದು ಮುಂಬೈನ ಕಫ್ ಪರೇಡ್ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ಭ್ರೂಣದ ಡಿಎನ್‌ಎ ಪರೀಕ್ಷೆಯು ತಂದೆಯ ಡಿಎನ್‌ಎಗೆ ಹೋಲಿಕೆಯಾದ ಬಳಿಕ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ.

- Advertisement -

ಈ ಪ್ರಕರಣದಲ್ಲಿ ಪೊಲೀಸರು ಒಟ್ಟು 17 ಶಂಕಿತರ ಡಿಎನ್‌ಎ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದರು. ಈ ಪೈಕಿ ಸಂತ್ರಸ್ತೆಯ ತಂದೆಯ ವರದಿ ‘ಪಾಸಿಟಿವ್’ ಬಂದಿದ್ದು, ಈ ಘೋರ ಕೃತ್ಯದಲ್ಲಿ ಆತನ ಪಾತ್ರವನ್ನು ದೃಢಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ (2025) ಈ ಪ್ರಕರಣ ಬೆಳಕಿಗೆ ಬಂದಿತ್ತು. ಸಂತ್ರಸ್ತ ಯುವತಿ ತನಗೆ ಹೊಟ್ಟೆಯಲ್ಲಿ ತೀವ್ರ ಅಸ್ವಸ್ಥತೆ ಉಂಟಾಗುತ್ತಿದ್ದು, “ಹೊಟ್ಟೆಯೊಳಗೆ ಹುಳುಗಳು ಹರಿದಾಡಿದಂತಾಗುತ್ತಿದೆ” ಎಂದು ಸನ್ನೆಗಳ ಮೂಲಕ ತನ್ನ ಅಜ್ಜಿಗೆ ತಿಳಿಸಿದ್ದಳು. ಕೂಡಲೇ ಆಕೆಯನ್ನು ನಗರದ ‘ಕಾಮಾ ಮತ್ತು ಅಲ್ಬ್ಲೆಸ್’ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯಕೀಯ ತಪಾಸಣೆಯ ವೇಳೆ ಯುವತಿ ಐದು ತಿಂಗಳ ಗರ್ಭಿಣಿ ಎಂಬ ಆಘಾತಕಾರಿ ಸಂಗತಿ ಹೊರಬಿದ್ದಿತು. ಆಸ್ಪತ್ರೆಯ ಆಡಳಿತ ಮಂಡಳಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಬೈಲ್ ಮೃತ್ಯು ಮೋಡಿಯಿಂದ ಮಕ್ಕಳನ್ನು ರಕ್ಷಿಸುವವರಾರು?

ಸಂತ್ರಸ್ತೆಗೆ ಮಾತನಾಡಲು ಸಾಧ್ಯವಾಗದ ಕಾರಣ ಹಾಗೂ ಹೇಳಿಕೆ ನೀಡಲು ಆಕೆ ಹಿಂಜರಿದಿದ್ದರಿಂದ ಪೊಲೀಸರಿಗೆ ಆರಂಭದಲ್ಲಿ ತನಿಖೆ ನಡೆಸುವುದು ಕಷ್ಟಕರವಾಗಿತ್ತು. ಈ ವೇಳೆ ಪೊಲೀಸರು ತಂದೆಯನ್ನು ಪ್ರಶ್ನಿಸಿದಾಗ, ಆತ ಲೈಂಗಿಕ ದೌರ್ಜನ್ಯದ ಆರೋಪಗಳನ್ನು ತಳ್ಳಿಹಾಕಿದ್ದಲ್ಲದೆ, ಮಗಳು ಹೇಗೆ ಗರ್ಭಿಣಿಯಾದಳು ಎಂಬುದು ತನಗೆ ತಿಳಿದಿಲ್ಲ ಎಂದು ನಾಟಕವಾಡಿದ್ದನು. ಅಲ್ಲದೆ, ದೂರು ದಾಖಲಿಸಲು ಸಹ ಆತ ನಿರಾಕರಿಸಿದ್ದನು.

ನಂತರ ಆಪ್ತಸಮಾಲೋಚನೆ ನಡೆಸಿದ ಬಳಿಕ, ಸಂತ್ರಸ್ತೆ ದೂರು ನೀಡಲು ಒಪ್ಪಿಕೊಂಡಳು. ಆಕೆ ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಒಬ್ಬ ಅಪ್ರಾಪ್ತ ಬಾಲಕ (17 ವರ್ಷ) ಸೇರಿದಂತೆ ಇಬ್ಬರನ್ನು ಆರಂಭದಲ್ಲಿ ವಶಕ್ಕೆ ಪಡೆದಿದ್ದರು. ಪ್ರಕರಣದ ಸತ್ಯಾಸತ್ಯತೆಯನ್ನು ತಿಳಿಯಲು ಪೊಲೀಸರು ತಂದೆ ಸೇರಿದಂತೆ ಒಟ್ಟು 17 ಶಂಕಿತರ ರಕ್ತ ಮತ್ತು ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿದ್ದರು. ಇವುಗಳನ್ನು ಭ್ರೂಣದ ಆನುವಂಶಿಕ ಮಾಹಿತಿಯೊಂದಿಗೆ ಹೋಲಿಕೆ ಮಾಡಲಾಯಿತು.

ಜನವರಿ 27 ರಂದು ಬಂದ ವರದಿಯಲ್ಲಿ ಕೇವಲ ಒಬ್ಬರ ಡಿಎನ್‌ಎ ಮಾತ್ರ ಭ್ರೂಣದೊಂದಿಗೆ ತಾಳೆಯಾಗಿದೆ. ಅದು ಸಂತ್ರಸ್ತೆಯ ತಂದೆಯದ್ದೇ ಆಗಿತ್ತು ಎಂಬುದು ತನಿಖೆಯಲ್ಲಿ ತಿರುವು ನೀಡಿತು. ಕಳೆದ ವರ್ಷದ ಮಾರ್ಚ್ ಮತ್ತು ಸೆಪ್ಟೆಂಬರ್ 21ರ ನಡುವೆ ಈ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆಪ್ಟೆಂಬರ್ 22 ರಂದು ಪ್ರಕರಣ ದಾಖಲಾಗಿತ್ತು. ಈಗ ಡಿಎನ್‌ಎ ವರದಿ ಆಧಾರದ ಮೇಲೆ ಪಾಪಿ ತಂದೆಯನ್ನು ಪೊಲೀಸರು ಬಂಧಿಸಿದ್ದು, ಮುಂದಿನ ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...