ದೆಹಲಿ ಪೊಲೀಸ್ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಪತ್ರಕರ್ತೆ ಸೇರಿ 17 ಮಂದಿ ಬಂಧನ

Date:

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ನಡೆದ ಪ್ರತಿಭಟನೆಯ ವರದಿಗಾರಿಕೆ ವೇಳೆ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ) ವಿವೇಕ್ ಭಗತ್ ವಿರುದ್ಧ ಆರೋಪ ಮಾಡಿದ್ದ ಸ್ವತಂತ್ರ ಮಹಿಳಾ ಪತ್ರಕರ್ತೆ ಸೇರಿ 17 ಮಂದಿಯನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಆರೋಪಿ ಪೊಲೀಸ್ ಅಧಿಕಾರಿಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಮತ್ತು ಅವರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ಪತ್ರಕರ್ತರು ಮತ್ತು ಕಾರ್ಯಕರ್ತರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಹೊರಗೆ ರಾತ್ರಿಯಿಡೀ ಪ್ರತಿಭಟನೆ ನಡೆಸಿದ್ದರು. ಆರೋಪಿತ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಿಸುವ ಬದಲಿಗೆ, ದೂರು ನೀಡಲು ಬಂದ ಪತ್ರಕರ್ತೆ ಮತ್ತು ಅವರ ಬೆಂಬಲಿಗರನ್ನೇ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಇದನ್ನೂ ಓದಿ: ಸಿಜೆಪಿ ಪ್ರತಿಭಟನಾ ಸ್ಥಳದಲ್ಲಿ ಕಲ್ಲು ತುಂಬಿದ್ದ ಲಾರಿ ತಂದು ನಿಲ್ಲಿಸಿಕೊಂಡಿದ್ದ ದೆಹಲಿ ಪೊಲೀಸರು

ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ಮತ್ತು ಕಾರ್ಯಕರ್ತರು ಜಂತರ್ ಮಂತರ್ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ-ನೂಕಾಟ ನಡೆದಿದೆ. ಈ ವೇಳೆ ಕನಿಷ್ಠ ಮೂವರು ಮಹಿಳಾ ಪತ್ರಕರ್ತೆಯರು ತಮಗೆ ಪೊಲೀಸರಿಂದ ಲೈಂಗಿಕ ಕಿರುಕುಳ, ಹಲ್ಲೆಯಾಗಿದೆ ಎಂದು ದೂರು ನೀಡಿದ್ದರು.

ದೆಹಲಿ ಪೊಲೀಸರು ಈ ದೂರುಗಳನ್ನು ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಆದರೆ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ.

ಈ ಘಟನೆಯನ್ನು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರವಾಗಿ ಖಂಡಿಸಿದ್ದು, ಮಹಿಳೆಯರಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ ಕಿರುಕುಳ ನೀಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯದ ವಿರುದ್ಧ ಕಿಡಿಕಾರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಜಮಖಂಡಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: 4 ಸಾವಿರ ಅರ್ಜಿಗಳ ಪೈಕಿ 3 ಸಾವಿರಕ್ಕೂ ಹೆಚ್ಚು ವಿಲೇವಾರಿ

ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು...