ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಸಾವು; ತನಿಖೆಗೆ ಆದೇಶ

Date:

ವಿಷಪೂರಿತ ಮದ್ಯ ಸೇವಿಸಿ ಒಂದೇ ದಿನ 17 ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಮಹಾರಾಷ್ಟ್ರದ ಪುಣೆ ಮತ್ತು ಪಿಂಪ್ರಿ-ಚಿಂಚ್‌ವಾಡ್ ಜಿಲ್ಲೆಗಳಲ್ಲಿ ನಡೆದಿದೆ. ಈ ಎರಡೂ ಜಿಲ್ಲೆಗಳ ಹಡಪ್ಸರ್, ದಪೋಡಿ ಹಾಗೂ ಫುಗೆವಾಡಿ ಪ್ರದೇಶಗಳಲ್ಲಿ ಸಾವುಗಳ ಸಂಭವಿಸಿವೆ. ಮದ್ಯ ಸೇವಿಸಿದ್ದ ಇನ್ನೂ ಹಲವರು ಗಂಭೀರ ಸ್ಥಿತಿಯಲ್ಲಿದ್ದು, ಹತ್ತಿರದ ಬೇರೆ ಬೇರೆ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯು ಸ್ಥಳೀಯವಾಗಿ ತೀವ್ರ ಆತಂಕ ಮತ್ತು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -

ಭೀಕರ ಸರಣಿ ಸಾವುಗಳ ಬೆನ್ನಲ್ಲೇ ಪ್ರಕರಣದ ಪ್ರಮುಖ ಆರೋಪಿ ಯೋಗೇಶ್ ವಾಂಖೆಡೆ ಎಂಬಾತನನ್ನು ರಾಜ್ಯ ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಸರಣಿ ಸಾವುಗಳ ಸುದ್ದಿ ಹರಡುತ್ತಿದ್ದಂತೆ ಆತಂಕಗೊಂಡ ಯೋಗೇಶ್, ಸ್ವಯಂಪ್ರೇರಣೆಯಿಂದ ಅಧಿಕಾರಿಗಳ ಮುಂದೆ ಶರಣಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪಿಂಪ್ರಿ-ಚಿಂಚ್‌ವಾಡ್ ಮತ್ತು ಪುಣೆಯ ಬೇರೆ ಬೇರೆ ಪ್ರದೇಶಗಳಲ್ಲಿ ಈತನೇ ವಿಷಪೂರಿತ ಮದ್ಯವನ್ನು ಸರಬರಾಜು ಮಾಡಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈತ, ಅಪಾಯಕಾರಿ ಸ್ಪಿರಿಟ್‌ನಿಂದ ತಯಾರಿಸಿದ ಮದ್ಯವನ್ನು ಸರಬರಾಜು ಮಾಡಿದ್ದಾನೆ. ಅದನ್ನು ಸೇವಿಸಿಯೇ ಇವರೆಲ್ಲರೂ ಮೃತಪಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಹಡಪ್ಸರ್, ದಪೋಡಿ ಮತ್ತು ಫುಗೆವಾಡಿಯಲ್ಲಿ ವ್ಯಾಪಕವಾಗಿ ಅಕ್ರಮ ದೇಶಿ ಮದ್ಯ ಮಾರಾಟ ಜಾಲ ಸಕ್ರಿಯವಾಗಿದೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ. ಒಂದೇ ದಿನ 17 ಜೀವಗಳು ಬಲಿಯಾಗಿರುವುದು ಈ ಭಾಗದಲ್ಲಿ ಭಯದ ವಾತಾವರಣ ನಿರ್ಮಿಸಿದೆ. “ಅಕ್ರಮ, ವಿಷಕಾರಿ ದೇಶಿ ಮದ್ಯವೇ ಈ ಸಾವುಗಳಿಗೆ ನೇರ ಕಾರಣ. ಈ ಬಗ್ಗೆ ಯಾವುದೇ ಪ್ರಭಾವಕ್ಕೆ ಒಳಗಾಗದೆ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇನ್ನೊಂದೆಡೆ, ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ಮೃತಪಟ್ಟ ಎಂಟು ಜನರಲ್ಲಿ ಐವರು ಬೇರೆ ಬೇರೆ ಆರೋಗ್ಯ ಸಮಸ್ಯೆಗಳಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ. ಮೃತರು ಸಾವಿಗೂ ಮುನ್ನವೇ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿದ್ದರು ಎಂಬುದನ್ನು ವೈದ್ಯರು ದೃಢಪಡಿಸಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ಈ ಎಲ್ಲ ಸಾವುಗಳಿಗೆ ನಿಖರ ಕಾರಣ ಏನೆಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ. ಮೃತಪಟ್ಟವರೆಲ್ಲರೂ ಒಂದೇ ಭಾಗದವರಾಗಿರುವುದರಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಇವರೆಲ್ಲರೂ ವಿಷಕಾರಿ ಮದ್ಯ ಸೇವಿಸಿದ್ದರೇ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಆಸ್ಪತ್ರೆಯ ಅಂತಿಮ ವೈದ್ಯಕೀಯ ಮತ್ತು ಮರಣೋತ್ತರ ಪರೀಕ್ಷೆಯ ವರದಿಗಳಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉನ್ನತ ಮಟ್ಟದ ತನಿಖೆಗೆ ಆದೇಶ ಹೊರಡಿಸಿದ್ದಾರೆ. ಈ ಕಳ್ಳದಂಧೆಯ ಜಾಲದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಬಂಧಿಸುವಂತೆ ಸೂಚಿಸಿದ್ದಾರೆ. ತನಿಖಾ ಸಂಸ್ಥೆಗಳು ಪ್ರಕರಣದ ಆಳ-ಅಗಲವನ್ನು ಕೆದಕುತ್ತಿದ್ದು, ಎಲ್ಲ ಆಯಾಮಗಳಿಂದಲೂ ತನಿಖೆ ಚುರುಕುಗೊಳಿಸಿವೆ.

ದುರಂತದ ಬೆನ್ನಲ್ಲೇ ಕಾನೂನು ಸುವ್ಯವಸ್ಥೆ ಕುರಿತು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಶಾಸಕ ರೋಹಿತ್ ಪವಾರ್, ” ಸ್ಥಳೀಯ ಪೊಲೀಸರು ಕೇವಲ ‘ರಬ್ಬರ್-ಸ್ಟಾಂಪ್’ ಅಧಿಕಾರಿಗಳಾಗಿದ್ದಾರೆ. ಅವರು ಕೇವಲ ಮೇಲಧಿಕಾರಿಗಳ ಆದೇಶ ಪಾಲನೆಗಷ್ಟೇ ಸೀಮಿತವಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸಾರ್ವಜನಿಕ ಬೀದಿಗಳಲ್ಲಿ ಹಗಲು ಹೊತ್ತಿನಲ್ಲೇ ಜನರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಪುಣೆಯಾದ್ಯಂತ ಕಳಪೆ ಮತ್ತು ನಕಲಿ ಮದ್ಯ ಅತ್ಯಂತ ಸುಲಭವಾಗಿ ಲಭ್ಯವಾಗುತ್ತಿದೆ. ಈ ಅಕ್ರಮದ ಬಗ್ಗೆ ಧ್ವನಿ ಎತ್ತಿದರೆ ನಮ್ಮದೇ ಜನರನ್ನು ಜೈಲಿಗೆ ಹಾಕುವ ಪ್ರಯತ್ನಗಳು ನಡೆಯುತ್ತಿವೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...