ರಾಜಸ್ಥಾನ | ಭೀಕರ ರಸ್ತೆ ಅಪಘಾತ; 18 ಮಂದಿ ಸಾವು

Date:

ಟೆಂಪೋ ಟ್ರಾವೆಲರ್ ವಾಹನವು ನಿಂತಿದ್ದ ಟ್ರೇಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ (ನವೆಂಬರ್ 2) ರಾಜಸ್ಥಾನದ ಫಲೋಡಿ ಜಿಲ್ಲೆಯ ಮಾತೋಡಾ ಪ್ರದೇಶದಲ್ಲಿ ನಡೆದಿದೆ.

- Advertisement -

ಬಿಕಾನೇರ್‌ನ ಕೊಲಾಯತ್ ದೇವಸ್ಥಾನಕ್ಕೆ ಭೇಟಿ ನೀಡಿ ಜೋಧ್‌ಪುರಕ್ಕೆ ಹಿಂತಿರುಗುತ್ತಿದ್ದ ಯಾತ್ರಿಕರಿದ್ದ ಟೆಂಪೋ ಟ್ರಾವೆಲರ್ ಮಾತೋಡಾ ಗ್ರಾಮದ ಬಳಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನು ಓದಿದ್ದೀರಾ? ಬೆಳಗಾವಿ : ಭೀಕರ ಅಪಘಾತ ಇಬ್ಬರು ಸಾವು

18 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಮೂರರಿಂದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಗಾಯಾಳುಗಳಿಗೆ ಮೊದಲು ಹತ್ತಿರದ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜೋಧ್‌ಪುರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ. “ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇತರ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಲಾಗಿದೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಆರೈಕೆಯನ್ನು ಒದಗಿಸುವಂತೆ ಸೂಚಿಸಲಾಗಿದೆ” ಎಂದು ಸಿಎಂ ಹೇಳಿದ್ದಾರೆ.

ಫಲೋಡಿ ಪೊಲೀಸರು ಅಪಘಾತದ ಬಗ್ಗೆ ತನಿಖೆ ಆರಂಭಿಸಿದ್ದು ಟ್ರೇಲರ್‌ ಅನ್ನು ಸರಿಯಾಗಿ ಪಾರ್ಕಿಂಗ್ ಮಾಡದಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು...

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...