ತಮಿಳುನಾಡು | ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 19 ಕಾರ್ಮಿಕರ ಸಾವು

Date:

ತಮಿಳುನಾಡಿನ ವಿರುಧುನಗರ ಬಳಿಯ ಕಟ್ಟನಾರಪಟ್ಟಿಯಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಭಾನುವಾರ ಭಾರೀ ಸ್ಫೋಟ ಸಂಭವಿಸಿದ್ದು ಕನಿಷ್ಠ 19 ಕಾರ್ಮಿಕರು ಸಾವನ್ನಪ್ಪಿದ್ದಾರೆ, ಆರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

- Advertisement -

ಗೋವಿಂದನಲ್ಲೂರಿನ ಮುತ್ತು ಮಾಣಿಕ್ಕಂ ಒಡೆತನದ ವನಜ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಈ ಕಾರ್ಖಾನೆಯು ಕಂದಾಯ ವಿಭಾಗೀಯ ಅಧಿಕಾರಿ (ಆರ್‌ಡಿಒ) ಪರವಾನಗಿ ಹೊಂದಿತ್ತು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ...

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಇದನ್ನು ಓದಿದ್ದೀರಾ? ತಮಿಳುನಾಡು | ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ, ಆರು ಕಾರ್ಮಿಕರ ದಾರುಣ ಸಾವು

ಘಟನೆಯ ಸಮಯದಲ್ಲಿ ಕಾರ್ಖಾನೆಯಲ್ಲಿ 30ಕ್ಕೂ ಹೆಚ್ಚು ಕಾರ್ಮಿಕರು ಇದ್ದರು. ಕಾರ್ಮಿಕರು ದಿನನಿತ್ಯ ಪಟಾಕಿ ಉತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿದ್ದರು. ಉತ್ಪಾದನಾ ಪ್ರಕ್ರಿಯೆಯ ಸಮಯದಲ್ಲಿ ಘರ್ಷಣೆಯಿಂದ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರ್ಖಾನೆಯ ಕನಿಷ್ಠ ನಾಲ್ಕು ಕೊಠಡಿಗಳು ಸಂಪೂರ್ಣವಾಗಿ ನಾಶವಾಗಿದೆ. ಸ್ಫೋಟದ ಶಬ್ದವು 10 ಕಿಲೋಮೀಟರ್ ದೂರದವರೆಗೆ ಕೇಳಿಸಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಶಿವಕಾಶಿ, ಸತ್ತೂರು ಮತ್ತು ವಿರುಧುನಗರ ಸೇರಿದಂತೆ ಹತ್ತಿರದ ಪಟ್ಟಣಗಳಿಂದ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಬೆಂಕಿ ನಂದಿಸಲು ಒಂದು ಗಂಟೆಗೂ ಅಧಿಕ ಕಾಲ ತಗುಲಿದೆ.

ಹಲವು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಮೃತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಸ್ಫೋಟದ ನಿಖರವಾದ ಕಾರಣ ತಿಳಿದುಬಂದಿಲ್ಲ. ಕಾರ್ಖಾನೆಯಲ್ಲಿ ಸರಿಯಾಗಿ ಸುರಕ್ಷತಾ ಮಾರ್ಗಸೂಚಿ ಪಾಲಿಸಲಾಗುತ್ತಿದೆಯೇ ಎಂಬುದನ್ನು ಖಚಿಪಡಿಸುವ ನಿಟ್ಟಿನಲ್ಲಿ ತನಿಖೆ ನಡೆಯಲಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ – ಯೂನುಸ್ – ಶೇರ್ ಖಾನ್!

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...

ಬಸವಕಲ್ಯಾಣ | ಶರಣರ ಇತಿಹಾಸ ಉಳಿಸುವಲ್ಲಿ ಮಹಾರಾಷ್ಟ್ರದ ಕೊಡುಗೆ ಅಪಾರ: ಬಸವದೇವರು

ಶರಣ ಧರ್ಮ ಕರ್ನಾಟಕದಲ್ಲಿ ಹುಟ್ಟಿದರೂ, ಶರಣರ ಪರಂಪರೆ ಹಾಗೂ ವಚನ ಸಾಹಿತ್ಯವನ್ನು...