ಉತ್ತರ ಪ್ರದೇಶ | 18 ವರ್ಷದ ಯುವತಿ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ

Date:

18 ವರ್ಷದ ಯುವತಿ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ದುರುಳರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಲಲಿತ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸರು ಮಂಗಳವಾರ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

- Advertisement -

ಯುವತಿ ಮನೆಯಿಂದ ಹೊರ ಬರುತ್ತಿದ್ದಂತೆ 22 ವರ್ಷದ ನಿತಿನ್ ಠಾಕೂರ್ ಎಂಬಾತ ಮತ್ತು ಆತನ ಕೆಲವು ಅಪರಿಚಿತ ಸ್ನೇಹಿತರು ಆಕೆಯನ್ನು ಎಳೆದೊಯ್ದು ಕಾರಿನಲ್ಲಿ ಕೂರಿಸಿದ್ದಾರೆ. ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ಲಲಿತ್‌ಪುರ ಜಿಲ್ಲೆಯ ಜಖೌರ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸುರೆಂದ್ರ ಸಿಂಗ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಬಿಜೆಪಿ ಶಾಸಕರ ಸೋದರಳಿಯ ಸೇರಿ ಮೂವರ ಬಂಧನ

ಸದ್ಯ ನಿತಿನ್ ಠಾಕೂರ್ ಮತ್ತು ಆತನ ಅಪರಿಚಿತ ಸ್ನೇಹಿತರ ವಿರುದ್ಧ ಬಿಎನ್‌ಎಸ್‌ ಅಡಿಯಲ್ಲಿ ಅಪಹರಣ ಮತ್ತು ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಲಾಗಿದೆ. ಠಾಕೂರ್ ಮತ್ತು ಯುವತಿಗೆ ಮೂರು ತಿಂಗಳುಗಳಿಂದ ಪರಿಚಯವಿತ್ತು ಎಂದು ಹೇಳಲಾಗಿದೆ. ಆತ ಈ ಪರಿಚಯವನ್ನೇ ದುರುಪಯೋಗ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಒಟ್ಟಾರೆಯಾಗಿ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಪರಾಧ ಪ್ರಕರಣಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ 20ನೇ ಸ್ಥಾನದಲ್ಲಿದೆ. ಆದರೆ ಯುಪಿಯಲ್ಲಿ ದೇಶದಲ್ಲೇ ಅಧಿಕ ಮಹಿಳೆಯರ ವಿರುದ್ಧ ಅಪರಾಧ ಪ್ರಕರಣಗಳು ದಾಖಲಾಗಿವೆ.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...