ವಿದೇಶಿ ಮಹಿಳೆಯಿಂದ 400 ಮೀಟರ್‌ ಪ್ರಯಾಣಕ್ಕೆ ₹18,000 ಸುಲಿಗೆ ಮಾಡಿದ ಟ್ಯಾಕ್ಸಿ ಚಾಲಕ

Date:

ವಾಣಿಜ್ಯ ನಗರಿ ಮುಂಬೈಗೆ ಬಂದಿಳಿದ ವಿದೇಶಿ ಪ್ರವಾಸಿಗರೊಬ್ಬರಿಂದ ಟ್ಯಾಕ್ಸಿ ಚಾಲಕನೊಬ್ಬ ಕೇವಲ 400 ಮೀಟರ್ ದೂರದ ಹೋಟೆಲ್‌ಗೆ ಕರೆದೊಯ್ಯಲು ಬರೋಬ್ಬರಿ 18,000 ರೂಪಾಯಿ (200 ಡಾಲರ್) ವಸೂಲಿ ಮಾಡಿರುವ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -

​ವಿದೇಶಿ ಪ್ರವಾಸಿಗರೊಬ್ಬರು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ (ಟ್ವಿಟರ್) ತಮ್ಮ ಕಹಿ ಅನುಭವವನ್ನು ಹಂಚಿಕೊಂಡ ನಂತರ ಈ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತ ಮಹಿಳೆ ಪೋಸ್ಟ್‌ ಮಾಡಿರುವ ಪ್ರಕಾರ, ಅವರು ಇತ್ತೀಚೆಗೆ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಅಲ್ಲಿಂದ ಸಮೀಪದ ‘ಹಿಲ್ಟನ್ ಹೋಟೆಲ್‌’ಗೆ ತೆರಳಲು ಟ್ಯಾಕ್ಸಿ ಒಂದನ್ನು ಬಾಡಿಗೆಗೆ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಆದರೆ, ಟ್ಯಾಕ್ಸಿ ಚಾಲಕ ಮತ್ತು ಆತನೊಂದಿಗಿದ್ದ ಮತ್ತೊಬ್ಬ ವ್ಯಕ್ತಿ ಅವರನ್ನು ನೇರವಾಗಿ ಹೋಟೆಲ್‌ಗೆ ಕರೆದೊಯ್ಯುವ ಬದಲು, ದಾರಿ ತಪ್ಪಿಸಿ ಅಪರಿಚಿತ ಸ್ಥಳವೊಂದಕ್ಕೆ ಕರೆದೊಯ್ದಿದ್ದಾರೆ. ಅಂತಿಮವಾಗಿ ವಿಮಾನ ನಿಲ್ದಾಣದಿಂದ ಕೇವಲ 400 ಮೀಟರ್‌ ದೂರದಲ್ಲಿದ್ದ ಹೋಟೆಲ್‌ಗೆ ತಲುಪಿಸಿ, ಪ್ರಯಾಣ ದರದ ಹೆಸರಿನಲ್ಲಿ 200 ಡಾಲರ್ (ಅಂದಾಜು ₹18,000) ಹಣವನ್ನು ಪೀಕಿಸಿದ್ದಾರೆ ಎಂದು ಆರೋಪಿಸಲಾಗಿದೆ. ​ವಂಚನೆ ಎಸಗಿದ ಟ್ಯಾಕ್ಸಿ ಸಂಖ್ಯೆ MH 01 BD 5405 ಎಂದು ಸಂತ್ರಸ್ತರು ಉಲ್ಲೇಖಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮನೆಮುರುಕ ಮಹಾ‘ನಾಯಕ’ ಮೊದಲಿಗನಲ್ಲ, ಕಡೆಯವನೂ ಆಗಿರುವುದಿಲ್ಲ!

ವೈರಲ್ ಆಗಿರುವ ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಮುಂಬೈ ಪೊಲೀಸರು, “ನಾವು ನಿಮ್ಮನ್ನು ಫಾಲೋ ಮಾಡಿದ್ದೇವೆ. ದಯವಿಟ್ಟು ನಿಮ್ಮ ಸಂಪರ್ಕ ವಿವರಗಳನ್ನು ಡಿಎಂ (Direct Message) ಮೂಲಕ ಹಂಚಿಕೊಳ್ಳಿ,” ಎಂದು ಸೂಚಿಸಿದ್ದಾರೆ. ಆದರೆ, ಚಾಲಕನ ವಿರುದ್ಧ ಈವರೆಗೆ ಯಾವ ರೀತಿಯ ಶಿಸ್ತು ಕ್ರಮ ಜರುಗಿಸಲಾಗಿದೆ ಎಂಬ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಈ ಘಟನೆಯು ಮುಂಬೈ ಹಾಗೂ ಭಾರತದ ಪ್ರವಾಸೋದ್ಯಮದ ಘನತೆಗೆ ಧಕ್ಕೆ ತರುವಂತಿದೆ ಎಂದು ನೆಟ್ಟಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ​”ಇದು ಮಹಾರಾಷ್ಟ್ರ ಮತ್ತು ಭಾರತದಲ್ಲಿ ಪ್ರವಾಸಿಗರನ್ನು ನಡೆಸಿಕೊಳ್ಳುವ ರೀತಿಯಲ್ಲ. ಕೂಡಲೇ ಚಾಲಕನ ಪರವಾನಗಿ ರದ್ದುಗೊಳಿಸಿ, ಆತನನ್ನು ಜೈಲಿಗಟ್ಟಬೇಕು. ಪ್ರವಾಸಿಗರು ಪೊಲೀಸ್ ಠಾಣೆಗೆ ಅಲೆಯುವಂತಾಗಬಾರದು, ಆನ್‌ಲೈನ್ ಸಾಕ್ಷ್ಯಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಿ,” ಎಂದು ಬಳಕೆದಾರರೊಬ್ಬರು ಆಗ್ರಹಿಸಿದ್ದಾರೆ.​ಇನ್ನೊಬ್ಬರು, “ಓಲಾ ಅಥವಾ ಊಬರ್ ಆಪ್‌ಗಳ ಮೂಲಕ ಬುಕ್ ಮಾಡಿದ್ದರೆ, ನಿಖರವಾದ ದರ ತಿಳಿಯುತ್ತಿತ್ತು,” ಎಂದು ಸಲಹೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೆಎಸ್‌ಎಸ್‌ಸಿ ಪರೀಕ್ಷೆ ರದ್ದು ನಿರ್ಧಾರ ವಜಾಗೊಳಿಸಿದ ಜಾರ್ಖಂಡ್ ಹೈಕೋರ್ಟ್

ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗವು (JSSC-CGL) ನಡೆಸಿದ್ದ 'ಸಂಯೋಜಿತ ನಾಗರಿಕ ಸೇವಾ...

ಸಿಬಿಎಸ್‌ಇ 10 ಮತ್ತು 12ನೇ ತರಗತಿ ಪ್ರಾಯೋಗಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್‌ಇ) 2026-27ರ ಶೈಕ್ಷಣಿಕ ಸಾಲಿನ 10ನೇ...

ಸಹ-ಆರೋಪಿಗಳು ಖುಲಾಸೆಯಾದಾಗ ಪ್ರತ್ಯೇಕ ಆರೋಪವಿಲ್ಲದೆ ಕೊಲೆ ಪ್ರಕರಣದಲ್ಲಿ ಶಿಕ್ಷೆ ನೀಡಲಾಗದು: ಸುಪ್ರೀಂ ಕೋರ್ಟ್

ಇತರೆ ಸಹ-ಆರೋಪಿಗಳನ್ನು ದೋಷಮುಕ್ತಗೊಳಿಸಿದ ಸಂದರ್ಭದಲ್ಲಿ, ಯಾವುದೇ ಪ್ರತ್ಯೇಕ ಅಥವಾ ಸ್ವತಂತ್ರ ಆರೋಪವಿಲ್ಲದೆ...

ಕಂಬ ಕುಸಿದು ಬಾಲಕಿ ಸಾವು ಪ್ರಕರಣ: ಶಾಲಾ ಆಡಳಿತ ಮಂಡಳಿ ವಿರುದ್ಧದ ಪ್ರಕರಣ ಕೈಬಿಟ್ಟ ಸುಪ್ರೀಂ ಕೋರ್ಟ್

ಶಾಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಂಬ ಕುಸಿದು 12 ವರ್ಷದ ವಿದ್ಯಾರ್ಥಿನಿ ಮೃತಪಟ್ಟ...