ಉತ್ತರ ಪ್ರದೇಶ | ಅವಸಾನೇಶ್ವರ ದೇಗುಲದಲ್ಲಿ ಕಾಲ್ತುಳಿತ: ಇಬ್ಬರು ಸಾವು, 40 ಮಂದಿಗೆ ಗಾಯ

Date:

ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿರುವ ದೇವಾಲಯವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಇಬ್ಬರು ಭಕ್ತರು ಸಾವನ್ನಪ್ಪಿ 40 ಮಂದಿ ಗಾಯಗೊಂಡಿದ್ದಾರೆ.

- Advertisement -

ಶ್ರಾವಣ ಮಾಸದ ಹಿನ್ನೆಲೆ ಇಂದು ಬಾರಾಬಂಕಿಯಲ್ಲಿರುವ ಪ್ರಾಚೀನ ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಭಕ್ತರು ದೇವರ ದರ್ಶನಕ್ಕೆ ಸಾಲುಗಟ್ಟಿ ನಿಂತಿದ್ದರು. ಈ ವೇಳೆ ಕೆಲ ಕೋತಿಗಳು ಓವರ್‌ಹೆಡ್ ವಿದ್ಯುತ್ ತಂತಿಗಳ ಮೇಲೆ ಹಾರಿವೆ. ಇದರಿಂದ ವಿದ್ಯುತ್‌ ತಂತಿ ತುಂಡಾಗಿ ತಗಡಿನ ಶೆಡ್‌ ಮೇಲೆ ಬಿದ್ದಿದ್ದು ದುರಂತಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣು ಮಕ್ಕಳ ಸುರಕ್ಷತೆಗೆ ‘ಶಕ್ತಿಶ್ರೀ’ ಸಾಕೇ?

ಕೆಲವರಿಗೆ ನೇರವಾಗಿ ವಿದ್ಯುತ್‌ ಸ್ಪರ್ಶ ತಗುಲಿದೆ. ಇದರಿಂದ ಇತರ ಭಕ್ತರಲ್ಲೂ ಆತಂಕ ಹೆಚ್ಚಾಗಿ ನೂಕು ನುಗ್ಗಲು ಶುರುವಾಗಿ, ಕಾಲ್ತುಳಿತ ಉಂಟಾಗಿದೆ. ಕಾಲ್ತುಳಿತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 40 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ಸಮೀಪದ ತ್ರಿವೇದಿಗಂಜ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಶಶಾಂಕ್ ತ್ರಿಪಾಠಿ ತಿಳಿಸಿದ್ದಾರೆ.

ಘಟನೆ ತಿಳಿದ ಸಿಎಂ ಯೋಗಿ ಆದಿತ್ಯನಾಥ್‌ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಗಾಯಾಳುಗಳಿಗೆ ತ್ವರಿತ ಪರಿಹಾರ ಮತ್ತು ಸರಿಯಾದ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ರಾಜೀನಾಮೆಗೆ ಬಿಗಿಪಟ್ಟು: ಜಂತರ್ ಮಂತರ್ ಭದ್ರಕೋಟೆ, ಅಸ್ಸಾಂನಲ್ಲಿ ಗೌರವ್ ಗೊಗೊಯ್ ವಶಕ್ಕೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸಿಇಸಿ ಗ್ಯಾನೇಶ್ ಕುಮಾರ್ ವಜಾಗೆ ಪಟ್ಟು; ಸೆ.26ರಿಂದ ದೇಶಾದ್ಯಂತ ಪ್ರತಿಭಟನೆಗೆ ಎಡಪಕ್ಷಗಳು, SIR ವಿರೋಧಿ ಒಕ್ಕೂಟ ಕರೆ

ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತ್ರೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ...

ಬಿಡದಿ ಭೂಸ್ವಾಧೀನ ರದ್ದುಪಡಿಸಲು ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ

ಕರ್ನಾಟಕದ ಬಿಡದಿಯಲ್ಲಿ ಪ್ರಸ್ತಾವಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಬಿಡದಿ ಟೌನ್‌ಶಿಪ್ ಯೋಜನೆಗಾಗಿ...