ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Date:

ವಿಚಾರವಾದಿ, ಸಾಮಾಜಿಕ ಕಾರ್ಯಕರ್ತರಾದ ನರೇಂದ್ರ ದಾಬೋಲ್ಕರ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪರಾಧಿಗಳಿಗೆ ಪುಣೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

- Advertisement -

ಮಹಾರಾಷ್ಟ್ರ ಅಂಧಶ್ರದ್ಧ ನಿರ್ಮೂಲನಾ ಸಮಿತಿಯ ಮುಖ್ಯಸ್ಥರಾಗಿದ್ದ ನರೇಂದ್ರ ದಾಬೋಲ್ಕರ್ ಅವರನ್ನು 2013ರ, ಆಗಸ್ಟ್‌ 20 ರಂದು ಪುಣೆಯಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹಂತಕರಾದ ಸಚಿನ್‌ ಅನ್‌ದುರೆ ಹಾಗೂ ಶರತ್‌ ಕಾಲಾಸ್ಕರ್ ಅವರನ್ನು ಅಪರಾಧಿಗಳೆಂದು ಘೋಷಿಸಿದ ನ್ಯಾಯಾಲಯ ಜೀವಾವಧಿ ಶಿಕ್ಷೆಯ ಜೊತೆಗೆ 5 ಲಕ್ಷ ರೂ. ದಂಡ ವಿಧಿಸಿತು. ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ವೀರೇಂದ್ರ ಸಿಂಗ್‌ ತಾವ್ಡೆ, ವಿಕ್ರಮ್‌ ಭಾವೆ ಹಾಗೂ ಸಂಜೀವ್‌ ಪುನಾಲೇಖರ್‌ ಅವರನ್ನು ನಿರ್ದೋಷಿಗಳೆಂದು ಕೋರ್ಟ್‌ ತೀರ್ಪು ನೀಡಿತು.

ವಿಚಾರಣೆಯಲ್ಲಿ ಸರ್ಕಾರಿ ಪರ ವಕೀಲರು 20 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿದರೆ, ಆರೋಪಿ ಪರ ವಕೀಲರು ಇಬ್ಬರು ಸಾಕ್ಷಿಗಳನ್ನು ವಿಚಾರಣೆಗೊಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

ಹಂತಕರು ದಾಬೋಲ್ಕರ್‌ ಅವರ ಮೂಢನಂಬಿಕೆ ವಿರೋಧಿ ಹೋರಾಟವನ್ನು ವಿರೋಧಿಸಿದ್ದರು ಎಂಬುದು ಸರ್ಕಾರಿ ಪರ ವಕೀಲರ ಅಂತಿಮ ವಿಚಾರಣೆಯಲ್ಲಿ ತಿಳಿದುಬಂತು.

ನರೇಂದ್ರ ದಾಬೋಲ್ಕರ್‌ ಹತ್ಯೆಯನ್ನು ಆರಂಭದಲ್ಲಿ ಸ್ಥಳೀಯ ಪೊಲೀಸರು ವಿಚಾರಣೆ ನಡೆಸುತ್ತಿದ್ದರು.  2014ರಲ್ಲಿ ಬಾಂಬೆ ಹೈಕೋರ್ಟ್‌ ಆದೇಶದ ಮೇರೆಗೆ ಸಿಬಿಐಗೆ ತನಿಖೆಯನ್ನು ವಹಿಸಲಾಯಿತು.

ದಾಬೋಲ್ಕರ್‌ ರೀತಿಯಲ್ಲಿಯೇ, 2015ರಲ್ಲಿ ಗೋವಿಂದ್‌ ಪನ್ಸಾರೆ, ಕರ್ನಾಟಕದಲ್ಲಿ ಎಂ ಎಂ ಕಲಬುರ್ಗಿ ಗಹಾಗೂ 2017ರಲ್ಲಿ ಬೆಂಗಳೂರಿನಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...